ತುಮಕೂರು: ನೇಣು ಬಿಗಿದ ಸ್ಥಿತಿಯಲ್ಲಿ ನವವಿವಾಹಿತೆ ಅನುಮಾನಸ್ಪದವಾಗಿ ಮೃತಪಟ್ಟ ಘಟನೆಯೊಂದು ತುಮಕೂರಿನ ಗೊಲ್ಲಹಳ್ಳಿಯಲ್ಲಿ ನಡೆದಿದೆ.
ಲಾವಣ್ಯ(24) ನೇಣು ಬಿಗಿದ ರೀತಿಯಲ್ಲಿ ಪತ್ತೆಯಾದ ನವವಿವಾಹಿತೆ. ಲಾವಣ್ಯ ಕಳೆದ 7 ತಿಂಗಳ ಹಿಂದೆ ಗೊಲ್ಲಹಳ್ಳಿಯ ರೇಣುಕಾ ಪ್ರಸಾದ್ ಜೊತೆ ಮದುವೆಯಾಗಿದ್ದರು. ಪತಿ ಕುಟುಂಬವೇ ಕೊಲೆ ಮಾಡಿದೆ ಎಂದು ಲಾವಣ್ಯ ಪೋಷಕರು ಆರೋಪಿಸುತ್ತಿದ್ದಾರೆ. ಈ ಬಗ್ಗೆ ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತ ಕಲಬುರಗಿಯಲ್ಲಿ ಪತಿಯ ಮನೆಯವರ ವರದಕ್ಷಿಣೆ ಕಿರುಕುಳ ತಾಳಲಾರದೆ ಗೃಹಿಣಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. 25 ವರ್ಷದ ಕಾವ್ಯ ನೇಣಿಗೆ ಶರಣಾದ ಗೃಹಿಣಿ. ಈಕೆಯನ್ನು ಅಗ್ರಿಕಲ್ಚರ್ ಫಿಲ್ಡ್ ನಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಬಸವರಾಜ್ ಜೊತೆ ಕಳೆದ ಒಂದೂವರೆ ವರ್ಷದ ಹಿಂದೆ ಮದುವೆ ಮಾಡಿಕೊಡಲಾಗಿತ್ತು.
ಪತಿ ಬಸವರಾಜ್ ಮತ್ತು ಆಕೆಯ ಮನೆಯವರು, ತವರು ಮನೆಯಿಂದ ಎರಡು ಲಕ್ಷ ರೂಪಾಯಿ ತಗೊಂಡು ಬಾ ಅಂತಾ ಮಾನಸಿಕ ಮತ್ತು ದೈಹಿಕ ಕಿರುಕುಳ ನೀಡಿದ್ದಾರೆ. ಇದರಿಂದ ಮನನೊಂದು ಆಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv