ಮೈಸೂರು: ಸ್ನೇಹಿತನ ಹುಟ್ಟುಹಬ್ಬಕ್ಕೆ ಕೇಕ್ ತರಲು ಎಂದು ಹೋಗಿದ್ದ ನವವಿವಾಹಿತ ಅಪಘಾತದಲ್ಲಿ ಮೃತಪಟ್ಟ ಘಟನೆ ಮೈಸೂರಿನಲ್ಲಿ ನಡೆದಿದೆ.
ಹರ್ಷಕುಮಾರ್ ಸಿಂಗ್(28) ಅಪಘಾತದಲ್ಲಿ ಮೃತಪಟ್ಟ ವಿವಾಹಿತ. ಹರ್ಷಕುಮಾರ್ ಸಿಂಗ್ ಮೈಸೂರಿನ ಶಾರದಾದೇವಿನಗರದ ನಿವಾಸಿ ಎಂದು ಹೇಳಲಾಗಿದ್ದು, ಕಳೆದ ನಾಲ್ಕು ತಿಂಗಳ ಹಿಂದೆಷ್ಟೇ ವಿವಾಹವಾಗಿದ್ದರು ಎಂಬುದು ತಿಳಿದುಬಂದಿದೆ.
ಮೈಸೂರಿನ ಕೆ.ಆರ್. ಆಸ್ಪತ್ರೆ ವೃತ್ತದಲ್ಲಿ ಈ ಅವಘಡ ಸಂಭವಿಸಿದೆ. ಇವರು ತನ್ನ ಸ್ನೇಹಿತನ ಹುಟ್ಟುಹಬ್ಬಕ್ಕೆ ಕೇಕ್ ತರಲು ಬೈಕಿನಲ್ಲಿ ಹೋಗಿದ್ದರು. ಹರ್ಷಕುಮಾರ್ ಬೈಕಿನಲ್ಲಿ ಹೋಗುವಾಗ ನಾಯಿ ಅಡ್ಡ ಬಂದಿದೆ. ಈ ವೇಳೆ ಹರ್ಷಕುಮಾರ್ ಸಿಂಗ್ ನಾಯಿಯನ್ನು ತಪ್ಪಿಸಲು ಹೋಗಿ ಆಯತಪ್ಪಿ ಬೈಕ್ ನಿಂದ ಬಿದ್ದಿದ್ದಾರೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಕುಸಿದುಬಿದ್ದಿದ್ದಾರೆ.
ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಸ್ಥಳೀಯರು ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಆದ್ರೆ ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
ಈ ಬಗ್ಗೆ ಮೈಸೂರಿನ ದೇವರಾಜ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv