ಮಂಡ್ಯ: ಎರಡು ತಿಂಗಳ ಹಿಂದಷ್ಟೇ ಪ್ರೀತಿಸಿ ಮದುವೆಯಾಗಿದ್ದ (Love Marriage) ಗೃಹಿಣಿ ಆತ್ಮಹತ್ಯೆ (Suicide) ಮಾಡಿಕೊಂಡ ಘಟನೆ ಪಾಂಡವಪುರ (Pandavapura) ತಾಲೂಕಿನ ಕೆನ್ನಾಳುನಲ್ಲಿ ನಡೆದಿದೆ.
ಪೂಜಾ (25) ಸಾವಿಗೀಡಾದ ಗೃಹಿಣಿ. ಪೋಷಕರ ವಿರೋಧದ ನಡುವೆಯೂ ಕೆನ್ನಾಳು ಗ್ರಾಮದ ಅಭಿನಂದನ್ ಜೊತೆ ಪೂಜಾ ಮದುವೆಯಾಗಿದ್ದಳು. ಮದುವೆ ಬಳಿಕ ಗಂಡನ ಮನೆಯವರಿಂದ ಕಿರುಕುಳ ನೀಡಿದ್ದಾರೆ ಎಂದು ಪೂಜಾ ಪೋಷಕರು ಆರೋಪಿಸಿದ್ದಾರೆ. ಇದನ್ನೂ ಓದಿ: ಸೌಮ್ಯ ರೇಪ್ & ಮರ್ಡರ್ ಕೇಸ್ | ಕಣ್ಣೂರು ಸೆಂಟ್ರಲ್ ಜೈಲ್‌ನಿಂದ ಪರಾರಿಯಾಗಿದ್ದ ಆರೋಪಿ ಅರೆಸ್ಟ್

ಗುರುವಾರ ರಾತ್ರಿ ಕೊಲೆ ಮಾಡಿ ನೇಣು ಬಿಗಿದಿದ್ದಾರೆ. ಗಂಡನೇ ಕೊಲೆ ಮಾಡಿ ಈ ಕೃತ್ಯ ಎಸಗಿದ್ದಾನೆ ಎಂದು ಪೂಜಾ ಕುಟುಂಬಸ್ಥರು ದೂರಿದ್ದಾರೆ. ಇದನ್ನೂ ಓದಿ: ಅಂದು ಇಂಡಿಯಾ ಔಟ್ – ಇಂದು ಸೇನಾ ಕಚೇರಿಯಲ್ಲೇ ದೊಡ್ಡ ಕಟೌಟ್ | ಇದು ಮೋದಿ ಮ್ಯಾಜಿಕ್
ಪೂಜಾ ಮತಪಟ್ಟ ಬಳಿಕವೂ ಪೊಲೀಸರು ಎಫ್‌ಐಆರ್ ದಾಖಲಿಸಿಲ್ಲ. ತಡ ಯಾಕೆ ಮಾಡುತ್ತಿದ್ದಾರೆ ಎನ್ನುವುದು ಗೊತ್ತಿಲ್ಲ ಎಂದು ಪೋಷಕರು ಆಕ್ರೋಶ ಹೊರಹಾಕಿದ್ದಾರೆ. ಪೋಷಕರ ಪ್ರತಿಭಟನೆಯ ಬಳಿಕ ಪಾಂಡವಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.
 


 
		
 
		 
		 
		