ಲಕ್ನೋ: ಮದುವೆಯಾಗಿ ಕೇವಲ ಒಂದೂವರೆ ತಿಂಗಳಷ್ಟೇ ಆಗಿದೆ. ಆದರೆ ನವವಿವಾಹಿತೆ ನಾಲ್ಕು ತಿಂಗಳ ಗರ್ಭಿಣಿಯಾಗಿರುವುದನ್ನು ತಿಳಿದ ಪತಿ ಮತ್ತು ಅತ್ತೆ ಪೊಲೀಸ್ ಠಾಣೆ ಮೆಟ್ಟಿಲೇರಿರುವ ಘಟನೆ ಉತ್ತರ ಪ್ರದೇಶದ ಮಹಾರಾಜ್‍ಗಂಜ್‍ನಲ್ಲಿ ನಡೆದಿದೆ.
ಹೊಟ್ಟೆ ನೋವಿನಿಂದ ಬಳಲುತ್ತಿದ್ದ ನವವಿವಾಹಿತೆಗೆ ಸೋನೋಗ್ರಫಿ ಮಾಡಲಾಯಿತು. ಈ ವೇಳೆ ಗರ್ಭಿಣಿಯಾಗಿರುವ ವಿಚಾರ ತಿಳಿದ ಅತ್ತೆ ಆಕೆಯನ್ನು ಮನೆಗೆ ಕರೆದುಕೊಂಡು ಹೋಗಲು ನಿರಾಕರಿಸಿದ್ದಾರೆ. ಇದನ್ನೂ ಓದಿ: ಮೋದಿ ‘ಮಾಫಿವೀರ್’ ಆಗಿ ದೇಶದ ಯುವಕರ ಕ್ಷಮೆ ಕೇಳಬೇಕು: ರಾಹುಲ್ ಗಾಂಧಿ
ಇದೀಗ ಪತ್ನಿ ವಿರುದ್ಧ ಆಕೆಯ ಪತಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಒಂದೂವರೆ ತಿಂಗಳ ಹಿಂದೆ ಗ್ರಾಮದ ಸಂಬಂಧಿಯೊಬ್ಬರ ಮೂಲಕ ಪಕ್ಕದ ಜಿಲ್ಲೆಯ ಹುಡುಗಿಯನ್ನು ಮದುವೆಯಾಗಿರುವುದಾಗಿ ತಿಳಿಸಿದ್ದಾರೆ. ಆದರೆ ಮದುವೆಯಾದ ಒಂದು ತಿಂಗಳಿನಲ್ಲಿಯೇ ಪತ್ನಿ ನಾಲ್ಕು ತಿಂಗಳ ಗರ್ಭಿಣಿಯಾಗಿರುವುದನ್ನು ತಿಳಿದು ವಂಚನೆಗೊಳಗಾಗಿರುವುದಾಗಿ ಆರೋಪಿಸಿದ್ದಾರೆ. ಇದನ್ನೂ ಓದಿ: ‘ಅಗ್ನಿಪಥ್’ ವಿರೋಧದ ನಡುವೆ ಗೃಹ ಇಲಾಖೆಯಿಂದ ಮಹತ್ವದ ನಿರ್ಧಾರ
ಮಗಳು ಗರ್ಭಿಣಿಯಾಗಿರುವ ವಿಚಾರ ಮೊದಲೇ ಆಕೆಯ ಕುಟುಂಬಸ್ಥರಿಗೆ ತಿಳಿದಿತ್ತು. ಆದರೂ ಈ ವಿಚಾರವನ್ನು ಮರೆ ಮಾಚಿ ಮದುವೆ ಮಾಡಿದ್ದಾರೆ ಎಂದು ನವವಿವಾಹಿತೆ ಪತಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸದ್ಯ ಈ ಸಂಬಂಧ ಪೊಲೀಸರು ಸಂಪೂರ್ಣ ತನಿಖೆ ನಡೆಸುತ್ತಿದ್ದಾರೆ ಎಂದು ಕೊಲ್ಹುಯಿ ಎಸ್‍ಎಚ್‍ಒ ಅಭಿಷೇಕ್ ಸಿಂಗ್ ಹೇಳಿದ್ದಾರೆ.