ಶಿವಮೊಗ್ಗ: ಮದುವೆಯಾದ ಎರಡೇ ತಿಂಗಳಿಗೆ ನವಾವಿವಾಹಿತೆಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸೊರಬ(Soraba) ತಾಲೂಕಿನ ಹಣಜಿ ಗ್ರಾಮದಲ್ಲಿ ನಡೆದಿದೆ.
ಸ್ವಾತಿ (24) ಆತ್ಮಹತ್ಯೆಗೆ ಶರಣಾದ ಮಹಿಳೆ. ಶಿಕಾರಿಪುರ ತಾಲೂಕಿನ ಕಾಳೇನಹಳ್ಳಿ ಗ್ರಾಮದ ಸ್ವರೂಪ್‌ನನ್ನು ಸ್ವಾತಿ ಮದುವೆಯಾಗಿದ್ದಳು. ಗರ್ಭಿಣಿಯಾಗಿದ್ದ ಆಕೆಗೆ ಅನಾರೋಗ್ಯದ ಸಮಸ್ಯೆ ಕಾಣಿಸಿಕೊಂಡಿತ್ತು. 20 ದಿನಗಳ ಹಿಂದೆ ಹಣಜಿ ಗ್ರಾಮದ ತವರು ಮನೆಗೆ ಸ್ವಾತಿ ಬಂದಿದ್ದಳು. ಇದನ್ನೂ ಓದಿ: ಬ್ಯಾಂಕ್‌ನಲ್ಲಿ 6.62 ಕೋಟಿ ಗೋಲ್ಮಾಲ್ – ಆರೋಪ ಎದುರಿಸ್ತಿದ್ದ ಅಧ್ಯಕ್ಷ 3 ಪುಟಗಳ ಡೆತ್‌ನೋಟ್, ವಿಡಿಯೋ ಮಾಡಿಟ್ಟು ಆತ್ಮಹತ್ಯೆ
ತಂದೆ ತಾಯಿ ಜಮೀನು ಕೆಲಸಕ್ಕೆ ಹೋದಾಗ ಸೀರೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಇದನ್ನು ಗಮನಿಸಿದ ಅಕ್ಕಪಕ್ಕದವರು ಹೊಲದಲ್ಲಿದ್ದ ಮೃತರ ತಂದೆ ತಾಯಿಗೆ ವಿಷಯ ತಿಳಿಸಿ, ಮನೆಯ ಬಾಗಿಲು ಮುರಿಯಲು ಮುಂದಾಗಿದ್ದಾರೆ. ಬಾಗಿಲು ಮುರಿದು ಸ್ವಾತಿಯನ್ನ ಸೀರೆ ಕುಣಿಕೆಯಿಂದ ಬಿಡಿಸಿ ಆಸ್ಪತ್ರೆಗೂ ರವಾನಿಸಿದ್ದಾರೆ. ಆದರೆ ಆಕೆಯನ್ನು ಉಳಿಸುವ ಪ್ರಯತ್ನ ವಿಫಲವಾಗಿದೆ. ಸ್ಥಳಕ್ಕೆ ಪೊಲೀಸರು (Police) ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕುಟುಂಬದವರ ಮಾಹಿತಿಯಂತೆ ಆರೋಗ್ಯ ಸಮಸ್ಯೆಯಿಂದ ತುಂಬಾ ವಾಂತಿಯಾಗುತ್ತಿತ್ತು. ಸರಿಯಾಗಿ ಊಟ, ತಿಂಡಿ ಮಾಡುತ್ತಿರಲಿಲ್ಲ ಎನ್ನಲಾಗಿದೆ. ಸದ್ಯ ಇದೇ ಕಾರಣಕ್ಕೆ ಆಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಇದನ್ನೂ ಓದಿ: ಹೋಂಸ್ಟೇನಲ್ಲಿ ಯುವತಿ ಸಾವು; ಸಂಜೀತ್ ಅಲಿ ಸಹವಾಸ ಮಾಡಿ ತಪ್ಪು ಮಾಡಿಬಿಟ್ಟೆ ಹೊಸ ಬದುಕು ಕಟ್ಟಿಕೊಳ್ತೀನಿ ಎಂದಿದ್ದ ಸುರಭಿ
