ರಾಯಚೂರು: ಕೃಷಿ ಹೊಂಡದಲ್ಲಿ ಈಜಲು ಹೋಗಿ ನವ ವಿವಾಹಿತ ವಕೀಲನೋರ್ವ ಸಾವನ್ನಪ್ಪಿರುವ ಘಟನೆ ರಾಯಚೂರಿನ (Raichuru) ಸಿಂಧನೂರು ತಾಲೂಕಿನ ಉಮಲೂಟಿ ಗ್ರಾಮದಲ್ಲಿ ನಡೆದಿದೆ.
ಉಮಲೂಟಿ ಗ್ರಾಮದ 30 ವರ್ಷದ ಹನೀಫ್ ಮೃತ ದುರ್ದೈವಿ. ಕೃಷಿ ಹೊಂಡದಲ್ಲಿ ಈಜಲು ಹೋಗಿ, ಹೂಳಿನಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ. ಹೊಂಡದಲ್ಲಿನ ಹೂಳಿನ ಬಗ್ಗೆ ತಿಳಿಯದೇ ಈಜಲು ಹೊಂಡಕ್ಕೆ ಜಿಗಿದಿದ್ದಾರೆ. ಈ ವೇಳೆ ಹೂಳಿನಲ್ಲಿ ಸಿಕ್ಕುಹಾಕಿಕೊಂಡು ಈಜಲಾಗದೆ ಮೃತಪಟ್ಟಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಬಂದ ಗ್ರಾಮಸ್ಥರು ಮೃತದೇಹವನ್ನ ಹೊರತೆಗೆದಿದ್ದಾರೆ. ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಸಿಂಧನೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಎರಡು ತಿಂಗಳ ಹಿಂದೆಯಷ್ಟೆ ಮದುವೆಯಾಗಿದ್ದ ಹನೀಫ್ ಗ್ರಾಮದ ಸ್ನೇಹಿತರೊಂದಿಗೆ ಈಜಲು ಹೋಗಿದ್ದ ವೇಳೆ ದುರ್ಘಟನೆ ನಡೆದಿದೆ.
