ನೆಲಮಂಗಲ: ಹೃದಯಾಘಾತದಿಂದ (Heart Attack) ನವವಿವಾಹಿತ ಸಾವನ್ನಪ್ಪಿದ ಘಟನೆ ಮಾದನಾಯಕನಹಳ್ಳಿಯ ಅರೆಕೆತ್ತನಹಳ್ಳಿಯಲ್ಲಿ ನಡೆದಿದೆ.
ಹೃದಯಾಘಾತದಿಂದ ಸಾವನ್ನಪ್ಪಿದ ವ್ಯಕ್ತಿಯನ್ನು ಚರಣ್ (30) ಎಂದು ಗುರುತಿಸಲಾಗಿದೆ. ಮೂರು ತಿಂಗಳ ಹಿಂದೆ ಚರಣ್ ಅವರ ಮದುವೆಯಾಗಿತ್ತು. ಇಂದು ಬೆಳಗ್ಗೆ ಮನೆಯಲ್ಲಿದ್ದ ವೇಳೆ ಅವರಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿತ್ತು. ಈ ವೇಳೆ ಮನೆಯಲ್ಲೇ ಅವರು ಕುಸಿದು ಬಿದ್ದಿದ್ದರು. ಇದನ್ನೂ ಓದಿ: ಪಾಠ ಮಾಡುತ್ತಿದ್ದಾಗಲೇ ಶಿಕ್ಷಕನಿಗೆ ಹೃದಯಾಘಾತ – ವಿದ್ಯಾರ್ಥಿಗಳ ಎದುರೇ ದುರ್ಮರಣ
ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಪರೀಕ್ಷಿಸಿದ ವೈದ್ಯರು ಅವರು ಮೃತಪಟ್ಟಿದ್ದನ್ನು ಧೃಢಪಡಿಸಿದ್ದರು. ಅವರ ಶವವನ್ನು ಮರಣೋತ್ತರ ಪರೀಕ್ಷೆಗೆ ನೆಲಮಂಗಲದ (Nelamangala) ಶವಗಾರಕ್ಕೆ ರವಾನೆ ಮಾಡಲಾಗಿದೆ.
ಚರಣ್ ಖಾಸಗಿ ಕಂಪನಿಯೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಇದನ್ನೂ ಓದಿ: ಚಿಕ್ಕೋಡಿ | ದ್ವಿತೀಯ ಪಿಯು ಪರೀಕ್ಷೆಗೆ ಹೊರಟಿದ್ದ ವಿದ್ಯಾರ್ಥಿನಿ ಹೃದಯಾಘಾತದಿಂದ ಸಾವು

