-ಪ್ಯಾಲೆಸ್ ಗ್ರೌಂಡ್‌ನಲ್ಲಿ ಅದ್ದೂರಿಯಾಗಿ ರಿಸೆಪ್ಷನ್ ಮಾಡಿಕೊಂಡಿದ್ದ ಜೋಡಿ
ಬೆಂಗಳೂರು: ಅರ್ಧದಲ್ಲೇ ಹನಿಮೂನ್‌ನಿಂದ ವಾಪಸ್ಸಾಗಿ ಆತ್ಮಹತ್ಯೆ ಯತ್ನಿಸಿದ್ದ ನವವಧು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.
ಮೃತ ನವವಧುವನ್ನು ಗಾನವಿ (26) ಎಂದು ಗುರುತಿಸಲಾಗಿದೆ. ಮದುವೆಯಾಗಿ ಎರಡು ತಿಂಗಳು ಕಳೆಯುವ ಮುನ್ನವೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ಪ್ಯಾಲೆಸ್ ಗ್ರೌಂಡ್‌ನಲ್ಲಿ ರಿಸೆಪ್ಷನ್, ಶ್ರೀಲಂಕಾಕ್ಕೆ ಹನಿಮೂನ್ – ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆಗೆ ಯತ್ನ
ಅಕ್ಟೋಬರ್ 29ರಂದು ಮೃತ ಗಾನವಿ ಹಾಗೂ ಸೂರಜ್ ವೈವಾಹಿಕ ಜೀವನಕ್ಕೆ ಕಾಲಿಟ್ಟು, ಪ್ಯಾಲೆಸ್ ಗ್ರೌಂಡ್‌ನಲ್ಲಿ ಅದ್ದೂರಿಯಾಗಿ ರಿಸೆಪ್ಷನ್ ಮಾಡಿಕೊಂಡಿದ್ದರು. ಕಳೆದ ಹತ್ತು ದಿನಗಳ ಹಿಂದೆ ಶ್ರೀಲಂಕಾಗೆ (Srilanka) ಹನಿಮೂನ್‌ಗೆಂದು ಹೋಗಿದ್ದರು. ಆದರೆ ಭಾನುವಾರ (ಡಿ.21) ಹನಿಮೂನ್ ಮುಗಿಸದೇ ಅರ್ಧಕ್ಕೆ ಶ್ರೀಲಂಕಾದಿಂದ ಇಬ್ಬರು ವಾಪಸ್ಸಾಗಿದ್ದರು.
ಜಗಳದ ಹಿನ್ನೆಲೆ ಸೋಮವಾರ (ಡಿ.22) ಗಾನವಿ ಕುಟುಂಬಸ್ಥರು ಆಕೆಯನ್ನು ಮನೆಗೆ ಕರೆ ತಂದಿದ್ದರು. ಬಳಿಕ ಬುಧವಾರ (ಡಿ.23) ಮಧ್ಯಾಹ್ನ ಹೊತ್ತಿಗೆ ಗಾನವಿ ಆತ್ಮಹತ್ಯೆಗೆ ಯತ್ನಿಸಿದ್ದರು. ರಕ್ಷಿಸಲು ಮುಂದಾಗಿದ್ದ ಮನೆಯವರು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.
ವೈದ್ಯರು ಬ್ರೈನ್ ಡೆಡ್ ಆಗಿದೆ ಎಂದು ಹೇಳಿ, ವೆಂಟಿಲೇಟರ್‌ನಲ್ಲಿ ಇರಿಸಿದ್ದರು. ಆದರೆ ಗುರುವಾರ (ಡಿ.25) ರಾತ್ರಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಸದ್ಯ ಗಾನವಿ ಕುಟುಂಬಸ್ಥರು ಸೂರಜ್ ಕುಟುಂಬಸ್ಥರ ವಿರುದ್ಧ ರಾಮಮೂರ್ತಿ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ವರದಕ್ಷಿಣೆ ಕಿರುಕುಳ, ಆತ್ಮಹತ್ಯೆಗೆ ಪ್ರಚೋದನೆಗೆ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಪೊಲೀಸರು ಸೂರಜ್ ಕುಟುಂಬಸ್ಥರ ವಿಚಾರಣೆ ನಡೆಸಲಿದ್ದಾರೆ. ಇದನ್ನೂ ಓದಿ: Chitradurga Bus Accident | ಮೃತರ ಬೋನ್ ಸ್ಯಾಂಪಲ್ ಸಂಗ್ರಹ – ಡಿಎನ್‌ಎ ವರದಿ ಬಳಿಕ ಶವ ಹಸ್ತಾಂತರ


