– ಕೊಲೆ ಎಂದು ಆರೋಪಿಸಿದ ಕುಟುಂಬ
ನವದೆಹಲಿ: ಮದುವೆಯಾಗಿ ಕೇವಲ ಎರಡು ತಿಂಗಳಲ್ಲೇ ನವವಿವಾಹಿತೆ (Woman Death)ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ದೆಹಲಿಯ(Delhi Crime) ಲೋಧಿ ಕಾಲೋನಿಯಲ್ಲಿ ನಡೆದಿದೆ.
28 ವರ್ಷದ ಆಕೃತಿ ಎಂಬ ಯುವತಿಯ ಮೃತದೇಹ ಪಾಲಿಕಾ ಕುಂಜ್‌ನ ಎನ್‌ಡಿಎಂಸಿ ಫ್ಲಾಟ್‌ಗಳ ಕಟ್ಟಡದ ಹೊರಭಾಗದಲ್ಲಿ ಪತ್ತೆಯಾಗಿದೆ. ಆಕೆ ಎಷ್ಟನೇ ಮಹಡಿಯಿಂದ ಬಿದ್ದಿದ್ದಾಳೆ ಎಂಬುದು ಇನ್ನೂ ಸ್ಪಷ್ಟವಾಗಿಲ್ಲ.
ಆಕೃತಿಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಲ್ಲಿಗೆ ತಲುಪುವಷ್ಟರಲ್ಲೇ ಆಕೆ ಮೃತಪಟ್ಟಿದ್ದಳು. ಪುಷ್ಪವಿಹಾರ ನಿವಾಸಿಯಾಗಿದ್ದ ಆಕೃತಿ ಏಪ್ರಿಲ್ 24 ರಂದು ವಿವಾಹವಾಗಿದ್ದಳು. ಛತ್ತರ್‌ಪುರದ ಖಾಸಗಿ ಕಂಪನಿಯೊಂದರಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿ ಕೆಲಸ ಮಾಡುತ್ತಿದ್ದಳು. ಪತಿ ಹಾಗೂ ಅತ್ತೆ-ಮಾವ ವರದಕ್ಷಿಣೆಗಾಗಿ ಕಿರುಕುಳ ನೀಡುತ್ತಿದ್ದರು. ಜೊತೆಗೆ ದೈಹಿಕ ಹಿಂಸೆ ಕೊಡ್ತಿದ್ದರು. ಇದು ಆತ್ಮಹತ್ಯೆಯಲ್ಲ, ಕೊಲೆ ಎಂದು ಆಕೃತಿ ಕುಟುಂಬಸ್ಥರು ಆರೋಪಿಸಿದ್ದಾರೆ.ಇದನ್ನೂ ಓದಿ: ಕರ್ನಾಟಕದಲ್ಲಿ ಬೇರೆ ರಾಜ್ಯದ ಅಧಿಕಾರಿಗಳಿಂದ ಎಸ್‌ಐಆರ್ ಮಾಡಿಸಲಿ: ಆರ್.ಅಶೋಕ್ ಆಗ್ರಹ
ಆಕೃತಿಯ ಸಹೋದರ ಮಾತನಾಡಿ, ಆಕೃತಿ ಮಾನಸಿಕವಾಗಿ ತುಂಬಾ ಧೈರ್ಯವಂತಳು, ಆತ್ಮಹತ್ಯೆ ಮಾಡಿಕೊಳ್ಳುವವಳಲ್ಲ. ಆಕೆಯ ಅತ್ತೆ-ಮಾವ ಈ ಪ್ರಕರಣವನ್ನ ಆತ್ಮಹತ್ಯೆ ಎಂದು ಬಿಂಬಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.
ಪ್ರಕರಣ ಸಂಬಂಧ ಭಾರತ್ ನ್ಯಾಯ ಸಂಹಿತೆಯ ಸೆಕ್ಷನ್ 196ರ ಅಡಿಯಲ್ಲಿ ವಿಚಾರಣೆ ಆರಂಭಿಸಲಾಗಿದೆ. ಪ್ರಕರಣದ ಎಲ್ಲಾ ಆಯಾಮಗಳಲ್ಲಿ ತನಿಖೆ ಮುಂದುವರಿದಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.ಇದನ್ನೂ ಓದಿ: ಕೃಷ್ಣಾ ನದಿಗೆ ಜೀವಕಳೆ: ಹಿಪ್ಪರಗಿ ಬ್ಯಾರೇಜ್‌ನ 16 ಗೇಟ್ ಓಪನ್
