ತುಮಕೂರು: ಹಿಟ್ & ರನ್‌ಗೆ (Hit And Run) ನವದಂಪತಿ ಸಾವನ್ನಪ್ಪಿರುವ ಘಟನೆ ತುಮಕೂರು (Tumakuru) ಜಿಲ್ಲೆಯ ಶಿರಾ (Sira) ತಾಲೂಕಿನ ದ್ವಾರಾಳು ಸೇತುವೆ ಮೇಲೆ ನಡೆದಿದೆ.
ದರ್ಶನ್ (25), ಉಷಾರಾಣಿ (21) ಮೃತ ದಂಪತಿ. ಶಿರಾ ತಾಲೂಕಿನ ಹುಣಸೇಕಟ್ಟೆ ಗ್ರಾಮದ ದಂಪತಿ (Couple) ಕಳೆದ ಒಂದೂವರೆ ತಿಂಗಳ ಹಿಂದಷ್ಟೇ ವಿವಾಹವಾಗಿದ್ದರು. ಮಂಗಳವಾರ ಬೈಕ್‌ನಲ್ಲಿ ಬೆಂಗಳೂರಿನ ಮಾರ್ಗದತ್ತ ತೆರಳುತ್ತಿದ್ದ ವೇಳೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಕೇವಲ 3 ಗಂಟೆಯಲ್ಲಿ 52.8 ಮಿ.ಮೀ ಭರ್ಜರಿ ಮಳೆ
ಘಟನೆಯಲ್ಲಿ ದರ್ಶನ್ ಸ್ಥಳದಲ್ಲೇ ಮೃತಪಟ್ಟರೆ, ಗಾಯಾಳು ಉಷಾರಾಣಿ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ. ಘಟನೆ ಸಂಬಂಧ ತಾವರೆಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸ್ನೇಹಿತರ ಜೊತೆ ಟ್ರಿಪ್ ಬಂದಿದ್ದ ಯುವತಿ ಲಾಡ್ಜ್‌ನಲ್ಲಿ ಅನುಮಾನಾಸ್ಪದ ಸಾವು

