ಮೈಸೂರು: ಹೊಸ ವರ್ಷದ ಸಂಭ್ರಮಾಚರಣೆಗೆ (Newyear 2023) ಇಡೀ ರಾಜ್ಯ ಕಾದು ಕುಳಿತಿದೆ. ಕೊರೊನಾ (Corona) ಕಂಟಕದ ಬಳಿಕ ಬಂದಿರೋ ಹೊಸ ವರ್ಷವನ್ನು ಅದ್ಧೂರಿಯಿಂದ ಸ್ವಾಗತಿಸಲು ಜನರು ಕಾತುರದಿಂದ ಕಾಯುತ್ತಿದ್ದಾರೆ.
ಬಹುತೇಕರು ವಿವಿಧ ಸ್ಥಳಗಳಿಗೆ ಪ್ರವಾಸ ಕಾರ್ಯಕ್ರಮಕ್ಕೆ ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಆದ್ರೆ ಕಟ್ಟುನಿಟ್ಟಿನ ನಿಯಮಗಳು ಪ್ರವಾಸಿಗರಿಗೆ ನಿರಾಶೆಯುಂಟುಮಾಡಿವೆ. ಇದನ್ನೂ ಓದಿ: ಚಾಲಕನಿಗೆ ಹೃದಯಾಘಾತ – ಬಸ್, ಕಾರು ನಡುವಿನ ಭೀಕರ ಅಪಘಾತದಲ್ಲಿ 9 ಸಾವು, 28 ಮಂದಿಗೆ ಗಾಯ
ಈಗಾಗಲೇ ರಾಜಧಾನಿಯಲ್ಲಿ ನಂದಿಬೆಟ್ಟಕ್ಕೆ ಪ್ರವೇಶ ನಿರ್ಬಂಧ ವಿಧಿಸಲಾಗಿದ್ದು, ಈ ಬೆನ್ನಲ್ಲೇ ಮೈಸೂರಿನ ಪ್ರತಿಷ್ಠಿತ ಪ್ರವಾಸಿ ತಾಣವಾದ ಚಾಮುಂಡಿಬೆಟ್ಟಕ್ಕೂ (Chamundi Hills) ಪ್ರವೇಶ ನಿರ್ಬಂಧ ವಿಧಿಸಲಾಗಿದೆ. ಡಿಸೆಂಬರ್ 31ರ ರಾತ್ರಿ 9 ಗಂಟೆಯಿಂದ 2023 ಜನವರಿ 1ರ ಬೆಳಗ್ಗೆ 5 ಗಂಟೆವರೆಗೆ ಬೆಟ್ಟಕ್ಕೆ ಪ್ರವೇಶ ನಿರ್ಬಂಧ ವಿಧಿಸಲಾಗಿದೆ ಎಂದು ನಗರ ಪೊಲೀಸ್ (Police) ಆಯುಕ್ತ ರಮೇಶ್ ಬಾನೋತ್ ತಿಳಿಸಿದ್ದಾರೆ. ಇದನ್ನೂ ಓದಿ: ರಕ್ಷಿತ್ ಶೆಟ್ಟಿ ಜೊತೆಗಿನ `ಕಿರಿಕ್ ಪಾರ್ಟಿ’ ಚಿತ್ರ ನೆನಪಿಸಿಕೊಂಡ ರಶ್ಮಿಕಾ ಮಂದಣ್ಣ
ಚಾಮುಂಡಿಬೆಟ್ಟದ ವ್ಯೂ ಪಾಯಿಂಟ್ ಬಳಿ ಹೆಚ್ಚು ಜನ ಸೇರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಿರ್ಬಂಧ ವಿಧಿಸಲಾಗಿದೆ. ಚಾಮುಂಡಿ ಬೆಟ್ಟದ ನಿವಾಸಿಗಳು ಸಿಬ್ಬಂದಿಗೆ ಮಾತ್ರ ಅವಕಾಶವಿದ್ದು, ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.