ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮುಂದಿನ 2 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ಮೇಲ್ಮೈ ಸುಳಿಗಾಳಿಯ ಕಾರಣ ಪೂರ್ವ ಮುಂಗಾರಿಗೂ ಮುನ್ನ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮುಂದಿನ 2 ದಿನಗಳಲ್ಲಿ ಬೆಂಗಳೂರಿನಲ್ಲಿ 15.5 ರಿಂದ 60.0 ಮಿಮೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಉಷ್ಣಾಂಶ ಏರಿಕೆ – ಏಪ್ರಿಲ್‌ನಲ್ಲಿ ಎಸಿ ಸಾರ್ವಕಾಲಿಕ ಗರಿಷ್ಠ ಮಾರಾಟ
Advertisement
Advertisement
ರಾಜ್ಯದ ದಕ್ಷಿಣ ಒಳನಾಡು ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಇದನ್ನೂ ಓದಿ: ಬಿಸಿಲಿನ ತಾಪಕ್ಕೆ 25 ಬಲಿ, 100ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗ
Advertisement
ರಾಜ್ಯಾದ್ಯಂತ ಅಲ್ಲಲ್ಲಿ ಗಾಳಿ ಸಹಿತ ಮಳೆಯಾಗಲಿದ್ದು, ಮಿಂಚಿನೊಂದಿಗೆ ಗುಡುಗು ಸಂಭವಿಸುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.