Advertisements

ಬೆಂಗಳೂರಿನಲ್ಲಿ ಮುಂದಿನ 2 ದಿನ ಮಳೆ

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮುಂದಿನ 2 ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Advertisements

ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡಿರುವ ಮೇಲ್ಮೈ ಸುಳಿಗಾಳಿಯ ಕಾರಣ ಪೂರ್ವ ಮುಂಗಾರಿಗೂ ಮುನ್ನ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಮುಂದಿನ 2 ದಿನಗಳಲ್ಲಿ ಬೆಂಗಳೂರಿನಲ್ಲಿ 15.5 ರಿಂದ 60.0 ಮಿಮೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಉಷ್ಣಾಂಶ ಏರಿಕೆ – ಏಪ್ರಿಲ್‌ನಲ್ಲಿ ಎಸಿ ಸಾರ್ವಕಾಲಿಕ ಗರಿಷ್ಠ ಮಾರಾಟ

Advertisements

ರಾಜ್ಯದ ದಕ್ಷಿಣ ಒಳನಾಡು ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರವಾಗಿ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಇದನ್ನೂ ಓದಿ: ಬಿಸಿಲಿನ ತಾಪಕ್ಕೆ 25 ಬಲಿ, 100ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗ

ರಾಜ್ಯಾದ್ಯಂತ ಅಲ್ಲಲ್ಲಿ ಗಾಳಿ ಸಹಿತ ಮಳೆಯಾಗಲಿದ್ದು, ಮಿಂಚಿನೊಂದಿಗೆ ಗುಡುಗು ಸಂಭವಿಸುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.

Advertisements
Advertisements
Exit mobile version