ಬೆಂಗಳೂರು: ರಾಜ್ಯಾದ್ಯಂತ ಮುಂದಿನ 4 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
Advertisement
ರಾಜ್ಯಾದ್ಯಂತ ಮಳೆಯಾಗುವ ಹಿನ್ನೆಲೆ 18 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಫೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಜೂನ್ 25 ರವರೆಗೆ ಗುಡುಗು ಸಹಿತ ಭಾರೀ ಮಳೆ ಸಾಧ್ಯತೆಯಿದೆ.
Advertisement
Advertisement
ಮೇಲ್ಮೈ ಸುಳಿಗಾಳಿ ಹಿನ್ನೆಲೆಯಲ್ಲಿ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಇಂದು ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ವಿಜಯಪುರ, ಬೀದರ್, ಬೆಳಗಾವಿ ಜಿಲ್ಲೆಗಳಲ್ಲಿ ಹೆಚ್ಚು ಮಳೆ ಸಾಧ್ಯತೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ನನ್ನ ಮಗನನ್ನು ಉಳಿಸು ದೇವರೇ – ಶಿಲುಬೆ ಮುಂದೆ ಕಂದನನ್ನು ಮಲಗಿಸಿದ ದಂಪತಿ
Advertisement
ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು ಮತ್ತು ರಾಮನಗರ ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.