– ಗೋಹತ್ಯೆ, ಮತಾಂತರ ಕಾಯ್ದೆ ನಿಷೇಧಕ್ಕೆ ಕಾರ್ಯತಂತ್ರ ರೂಪುಗೊಂಡಿದೆ
ಮಂಗಳೂರು: ಮುಂದಿನ ದಿನಗಳು ಹಿಂದುತ್ವ ಮತ್ತು ಹಿಂದೂಗಳಿಗೆ (Hindu) ಕಠಿಣ ದಿನವಾಗಲಿದೆ. ಗೋಹತ್ಯೆ ಕಾಯ್ದೆ, ಮತಾಂತರ ಕಾಯ್ದೆ ನಿಷೇಧಕ್ಕೆ ಕಾರ್ಯತಂತ್ರಗಳು ರೂಪುಗೊಂಡಿದೆ ಎಂದು ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ (Kota Srinivas Poojary) ಹೇಳಿಕೆ ನೀಡಿದ್ದಾರೆ.
ಮಂಗಳೂರಿನಲ್ಲಿ (Mangaluru) ಮಾತನಾಡಿದ ಅವರು, ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಪೊಲೀಸರಿಗೆ ಕೇಸರಿ ಶಾಲಿನ ಆರೋಪ ಮಾಡಿದ್ದಾರೆ. ಅಧಿಕಾರಿಗಳ ಮೇಲೆ ಹರಿಹಾಯ್ದು ಎಚ್ಚರಿಕೆ ಕೊಟ್ಟಿರೋದು ಕಂಡು ಬಂದಿದೆ. ಕೇಸರಿ ಶಾಲು ಈ ರಾಜ್ಯದಲ್ಲಿ ನಿಷೇಧ ಇಲ್ಲ. ಕರ್ತವ್ಯದಲ್ಲಿ ಇದ್ದಾಗ ಯಾರೂ ಕೇಸರಿ ಪ್ರಯೋಗ ಮಾಡಿಲ್ಲ. ಅವರ ಖಾಸಗಿ ಜೀವನದಲ್ಲಿ ಅವರ ಉಡುಪುಗಳ ಬಗ್ಗೆ ಪ್ರಶ್ನೆ ಮಾಡಿ ಡಿಕೆಶಿ ದ್ವೇಷ ತೀರಿಸಿಕೊಂಡಿದ್ದಾರೆ. ಇದು ಸರಿಯಲ್ಲ, ಅವರು ತಮ್ಮ ಮಾತನ್ನು ಪುನರ್ ಪರಿಶೀಲನೆ ಮಾಡಬೇಕು ಎಂದು ಆಗ್ರಹಿಸಿದರು.
Advertisement
Advertisement
ಚಿತ್ರದುರ್ಗ ಜಿಲ್ಲೆಯ ಶಿಕ್ಷಕರು ಮುಖ್ಯಮಂತ್ರಿಗಳ ಸಾಲದ ಬಗ್ಗೆ ಮಾತನಾಡಿದ್ದಕ್ಕೆ ಅಮಾನತು ಮಾಡಲಾಗಿದೆ. ಡಿಕೆಶಿ ಮತ್ತು ಸಿದ್ದರಾಮಯ್ಯ ಸರ್ಕಾರದಲ್ಲಿ ದ್ವೇಷ ಸಾಧಿಸೋ ವಾತಾವರಣ ಕಂಡು ಬರುತ್ತಿದೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಶೋಭೆ ತರಲ್ಲ. ಅದನ್ನು ಪುನರ್ ಪರಿಶೀಲಿಸಲಿ ಎಂದರು. ಇದನ್ನೂ ಓದಿ: ಕಾಂಗ್ರೆಸ್‌ನಿಂದ ಶುರುವಾಯ್ತು ಬಿಜೆಪಿ ಕಾಲದ ಅಕ್ರಮದ ತನಿಖೆ – ಮೊದಲ ಎಫ್‌ಐಆರ್ ದಾಖಲು
Advertisement
ಸಿದ್ದರಾಮಯ್ಯ ಮತ್ತು ಡಿಕೆಶಿ 40% ಕಮಿಷನ್ ತನಿಖೆ ಮಾಡುತ್ತೇವೆ ಎಂದಿದ್ದಾರೆ. ಈ ತನಿಖೆಯನ್ನು ಮುಕ್ತವಾಗಿ ನಾನು ಸ್ವಾಗತ ಮಾಡುತ್ತೇನೆ. ನನ್ನಿಂದಲೇ ತನಿಖೆ ಪ್ರಾರಂಭವಾಗಲಿ. ಇಡೀ ತನಿಖೆ ಮಾಡಲಿ, ಯಾವ ತನಿಖೆಯಲ್ಲಿ ಏನಾಗುತ್ತೆ ನೋಡೋಣ. ವ್ಯಕ್ತಿಗತ ದ್ವೇಷಕ್ಕೆ ಅವಕಾಶ ಕೊಡಬಾರದು. ಆದರೂ ತನಿಖೆ ಮಾಡಲಿ ಎಂದು ತಿರುಗೇಟು ನೀಡಿದರು.
Advertisement
ಸಾಮಾನ್ಯವಾಗಿ ಹಿಂದುತ್ವದ ವಿಚಾರ ಇಟ್ಟುಕೊಂಡು ಅವರ ಗುರಿ ಇದೆ ಅನ್ನೋದು ನಮಗೆ ಅರ್ಥವಾಗಿದೆ. ಮುಂದಿನ ದಿನಗಳು ಹಿಂದುತ್ವ ಮತ್ತು ಹಿಂದೂಗಳಿಗೆ ಕಠಿಣ ದಿನವಾಗಲಿದೆ. ಯಾರನ್ನಾದರೂ ಓಲೈಕೆ ಮಾಡಲು ಹಿಂದುತ್ವದ ಚಟುವಟಿಕೆಗಳನ್ನು ನಿಷೇಧ ಮಾಡುವುದು, ನೈತಿಕ ಪೊಲೀಸ್‌ಗಿರಿ ಆರೋಪ ಮಾಡಿ ಬಂಧಿಸುವ ಕೆಲಸಗಳು ಮುಂದೆ ಆಗಲಿದೆ ಎಂದು ನಮಗೆ ಅನಿಸುತ್ತಿದೆ. ಮುಂದಿನ ದಿನಗಳಲ್ಲಿ ಗೋಹತ್ಯೆ ಕಾಯ್ದೆ, ಮತಾಂತರ ಕಾಯ್ದೆ ನಿಷೇಧಿಸುವ ಕಾರ್ಯತಂತ್ರ ರೂಪುಗೊಂಡಿದೆ. ಆದರೆ ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷವಾಗಿ ನಾವು ಜನಸಾಮಾನ್ಯರಿಗೆ ರಕ್ಷಣೆ ಕೊಡ್ತೇವೆ ಎಂದು ಕೋಟ ಶ್ರೀನಿವಾಸ್ ಪೂಜಾರಿ ಭರವಸೆ ನೀಡಿದರು. ಇದನ್ನೂ ಓದಿ: 24 ಹಿಂದೂ ಕಾರ್ಯಕರ್ತರನ್ನು ಸಿದ್ದರಾಮಯ್ಯ ಹತ್ಯೆ ಮಾಡಿದ್ದಾರೆ: ಹರೀಶ್ ಪೂಂಜಾ