ನವದೆಹಲಿ: ವಿರೋಧ ಪಕ್ಷದ ನಾಯಕರ (Opposition Parties) ಸಭೆ ಜುಲೈ 13 ಮತ್ತು 14 ರಂದು ಬೆಂಗಳೂರಿನಲ್ಲಿ (Bengaluru) ನಡೆಯಲಿದೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಮುಖ್ಯಸ್ಥ ಶರದ್ ಪವಾರ್ (Sharad Pawar) ಹೇಳಿದ್ದಾರೆ.
ಜಂಟಿ ಕಾರ್ಯತಂತ್ರವನ್ನು ರೂಪಿಸಲು ಎರಡನೇ ಸಭೆ ಶಿಮ್ಲಾದಲ್ಲಿ ನಡೆಸಲು ತೀರ್ಮಾನಿಸಲಾಗಿತ್ತು ಆದರೆ ಈಗ ಜುಲೈ 13 ಮತ್ತು 14ರಂದು ಬೆಂಗಳೂರಿನಲ್ಲಿ ಸಭೆ ನಡೆಸಲು ನಿರ್ಧಾರ ತೆಗೆದುಕೊಳ್ಳಲಾಗಿದೆ. ಜೂನ್ 23 ರಂದು ಬಿಹಾರದ ರಾಜಧಾನಿ ಪಾಟ್ನಾದಲ್ಲಿ 17 ಕ್ಕೂ ಹೆಚ್ಚು ವಿರೋಧ ಪಕ್ಷಗಳ ನಾಯಕರು ಭಾಗವಹಿಸಿದ್ದನ್ನು ನೋಡಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಭಯ ಶುರುವಾಗಿದೆ ಎಂದರು. ಇದನ್ನೂ ಓದಿ: ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯಗೆ ನೋಟಿಸ್
Advertisement
Advertisement
ಪಾಟ್ನಾ ಸಭೆಯಲ್ಲಿ ಕಾಂಗ್ರೆಸ್ (Congress) ಸೇರಿದಂತೆ 17 ಪಕ್ಷಗಳು 2024 ರ ಲೋಕಸಭೆ ಚುನಾವಣೆಯಲ್ಲಿ (Lok Sabha Election) ಕೇಂದ್ರದಲ್ಲಿ ಬಿಜೆಪಿಯನ್ನು ಸೋಲಿಸಲು ಒಗ್ಗಟ್ಟಿನಿಂದ ಹೋರಾಡಲು ಮತ್ತು ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಕೆಲಸ ಮಾಡಲು ನಿರ್ಧರಿಸಿವೆ. ಎರಡನೇ ಸಭೆಯನ್ನು ಕಾಂಗ್ರೆಸ್ ನೇತೃತ್ವದಲ್ಲಿ ನಡೆಸಲು ತೀರ್ಮಾನಿಸಿವೆ.
Advertisement
ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಪಾಟ್ನಾದ ಅವರ ನಿವಾಸದಲ್ಲಿ ಆಯೋಜಿಸಿದ್ದ ಮೊದಲ ಸಭೆಯಲ್ಲಿ ವಿವಿಧ ಪಕ್ಷಗಳ 32 ಕ್ಕೂ ಹೆಚ್ಚು ನಾಯಕರು ಭಾಗವಹಿಸಿದ್ದರು. ಮಾಯಾವತಿ (ಬಿಎಸ್ಪಿ), ನವೀನ್ ಪಟ್ನಾಯಕ್ (ಬಿಜೆಡಿ), ಕೆ ಚಂದ್ರಶೇಖರ್ ರಾವ್ (ಬಿಆರ್ಎಸ್) ಮತ್ತು ವೈಎಸ್ ಜಗನ್ ಮೋಹನ್ ರೆಡ್ಡಿ (ವೈಎಸ್ಆರ್ಸಿಪಿ) ಅವರನ್ನು ಆಹ್ವಾನಿಸಿದ್ದರೂ ಸಭೆಗೆ ಗೈರಾಗಿದ್ದರು. ಆರ್ಎಲ್ಡಿ ನಾಯಕ ಜಯಂತ್ ಚೌಧರಿ ಪೂರ್ವನಿರ್ಧರಿತ ಕುಟುಂಬ ಕಾರ್ಯಕ್ರಮದಿಂದಾಗಿ ಸಭೆಗೆ ಹಾಜರಾಗಲಿಲ್ಲ.
Advertisement
Web Stories