ಬೆಂಗಳೂರು: ಮುಂದಿನ ಫೆಬ್ರವರಿ ತಿಂಗಳಿನಿಂದಲೇ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ರಾಷ್ಟ್ರಪತಿ ದ್ರೌಪದಿ ಮುರ್ಮು (Draupadi Murmu) ಅವರಿಂದ ಬಹುನಿರೀಕ್ಷಿತ ಬೆಂಗಳೂರು – ಮೈಸೂರು ದಶಪಥ ರಸ್ತೆ (Bengaluru Mysuru Expressway) ಲೋಕಾರ್ಪಣೆಗೊಳ್ಳಲಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ (Nitin Gadkari) ಮಹತ್ವದ ಘೋಷಣೆ ಮಾಡಿದ್ದಾರೆ.
Out of which, 6-Lane Access Controlled Main Carriageway is for highway traffic and 2-Lane Service Road on either side is for rural traffic. #PragatiKaHighway #GatiShakti #BengaluruMysuruNationalHighway pic.twitter.com/kbvuVRSRio
— Nitin Gadkari (@nitin_gadkari) January 5, 2023
Advertisement
ರಾಷ್ಟ್ರಪತಿಗಳು ಹಾಗೂ ಪ್ರಧಾನಮಂತ್ರಿಗಳು ದಶಪಥ ರಸ್ತೆ ಉದ್ಘಾಟನೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದ ರೂಪುರೇಷೆಗೆ ದಿನಾಂಕ ನಿಗದಿ ಮಾಡುತ್ತೇವೆ. ಇನ್ಮುಂದೆ ಬೆಂಗಳೂರು-ಮೈಸೂರು ನಡುವಿನ ಪ್ರಯಾಣ 1:10 ಗಂಟೆಗೆ ಇಳಿಯಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಚಹಾದಲ್ಲಿ ಸಕ್ಕರೆ ಹಾಕಿಲ್ಲ ಎಂದು ಹೋಟೆಲ್ ಮಾಲೀಕನಿಗೆ ಚಾಕು ಇರಿದ
Advertisement
Assessed the Bengaluru – Mysuru National Highway work which is part of our Greenfield Corridors project with Karnataka PWD Minister Shri @CCPatilBJP Ji and Mysuru MP Shri @mepratap Ji. #PragatiKaHighway #GatiShakti #BengaluruMysuruNationalHighway pic.twitter.com/wuN8BEax8y
— Nitin Gadkari (@nitin_gadkari) January 5, 2023
Advertisement
ಮುಂದುವರಿದು ಬೆಂಗಳೂರು-ಚೆನ್ನೈ ಎಕ್ಸ್‌ಪ್ರೆಸ್‌ವೇ (Bengaluru Chennai Expressway) ಕಾರಿಡಾರ್ ಬಗ್ಗೆ ಗಡ್ಕರಿ ಮಾಹಿತಿ ನೀಡಿದ್ದಾರೆ. 17 ಸಾವಿರ ಕೋಟಿ ವೆಚ್ಚದಲ್ಲಿ ಬೆಂಗಳೂರು-ಚೆನ್ನೈ ಹೆದ್ದಾರಿ ನಿರ್ಮಾಣ ಆಗಲಿದೆ. ಇವತ್ತು ಕಾಮಗಾರಿಯ ಪರಿವೀಕ್ಷಣೆ ನಡೆಸಿದ್ದೇನೆ. ಮೂರು ಹಂತಗಳಲ್ಲಿ ಹೆದ್ದಾರಿ ಕಾಮಗಾರಿ ನಡೆಯಲಿದೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ಆಂಧ್ರ-ತಮಿಳುನಾಡು ನಡುವೆ ಎಕ್ಸ್ಪ್ರೆಸ್ ವೇ ನಿರ್ಮಾಣ ಆಗಲಿದೆ. ಕರ್ನಾಟಕದಲ್ಲಿ 5,069 ಕೋಟಿ ವೆಚ್ಚದಲ್ಲಿ ಮೂರು ಹಂತಗಳಲ್ಲಿ 71 ಕಿಮೀ ಕಾಮಗಾರಿ ನಡೆಯಲಿದೆ. ಈಗಾಗಲೇ ಶೇ.32 ರಿಂದ ಶೇ.36 ರಷ್ಟು ಕಾಮಗಾರಿ ಮುಗಿದಿದೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ಕೋಲಾರದಿಂದ ಸಿದ್ದರಾಮಯ್ಯ ಸ್ಪರ್ಧೆ ಬಹುತೇಕ ಖಚಿತ- ಜ. 9ಕ್ಕೆ ಅಧಿಕೃತ ಘೋಷಣೆ?
Advertisement
Accelerating economic activities, it's Beneficial for Vehicle Operating Costs and lower Fuel Consumption. #PragatiKaHighway #GatiShakti #BengaluruChennaiExpressway pic.twitter.com/0slkiS7JEe
— Nitin Gadkari (@nitin_gadkari) January 5, 2023
ಕಾಮಗಾರಿ ಪೂರ್ಣಗೊಂಡರೆ ಬೆಂಗಳೂರು-ಚೆನ್ನೈ ನಡುವೆ 2.15 ಗಂಟೆಯಲ್ಲಿ ಪ್ರಯಾಣಿಸಬಹುದು. ಗಂಟೆಗೆ 120 ಕಿ.ಮೀ ವೇಗದಲ್ಲಿ ಸಂಚಾರ ಮಾಡಬಹುದು. ಎಕ್ಸ್ಪ್ರೆಸ್‌ವೇ ಪೂರ್ಣಗೊಂಡರೆ 38 ಕಿ.ಮೀ ಕಡಿತವಾಗಲಿದೆ. ಸದ್ಯ ಬೆಂ-ಚೆನ್ನೆöÊ ಮಧ್ಯೆ ಪ್ರಯಾಣಿಸಲು 5 ಗಂಟೆ ಸಮಯ ಆಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k