Bengaluru City

ರಾಜ್ಯದಲ್ಲಿ ಮುಂದಿನ ಮೂರು ದಿನ ಮಳೆ – ಯಲ್ಲೋ ಅಲರ್ಟ್ ಘೋಷಣೆ

Published

on

Share this

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದೆ. ಕರಾವಳಿ, ಮಲೆನಾಡು ಭಾಗದಲ್ಲಿ ಇನ್ನೂ ಮೂರುದಿನ ಮಳೆ ಮುಂದುವರೆಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮಲೆನಾಡು, ಕರಾವಳಿ, ಕೊಡಗು ಮತ್ತು ಉತ್ತರ ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ಜಲಾಶಯಗಳಿಗೆ ಒಳಹರಿವು ಸಹ ಹೆಚ್ಚಿದೆ. ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಉಷ್ಣಾಂಶ 22 ಡಿಗ್ರಿಗೆ ಕುಸಿದಿದೆ. ನಗರದಲ್ಲಿ ಭಾನುವಾರ ಸಂಜೆ ವೇಳೆಗೆ ಕೆಲವು ಬಡಾವಣೆಗಳಲ್ಲಿ ತುಂತುರು ಮಳೆಯಾಗಿದೆ. ತಂಪಾದ ಗಾಳಿ ಬೀಸುತ್ತಿದ್ದು, ಆಗಾಗ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಇದನ್ನೂ ಓದಿ: ಎಲ್ಲ ಭಾಷೆಯನ್ನು ಗೌರವಿಸುತ್ತೇವೆ, ಯಾವುದೇ ಹೇರಿಕೆ ಸಲ್ಲದು: ಧನಂಜಯ್

ಇನ್ನೂ ಮೂರು ದಿನಗಳ ಕಾಲ ರಾಜ್ಯಾದ್ಯಂತ ಮಳೆಯ ಅಬ್ಬರ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಉಡುಪಿ, ಹಾಸನ, ಶಿವಮೊಗ್ಗ, ಕೊಡಗು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 15ರ ತನಕ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಬೇರೆ ಜಿಲ್ಲೆಗಳಿಗಿಂತ ಹೆಚ್ಚು ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಇದನ್ನೂ ಓದಿ:  ಹಾಸ್ಯನಟ ರಾಜು ತಾಳಿಕೋಟೆ ವಿರುದ್ಧ ಹಲ್ಲೆ ಆರೋಪ

rain

ಬೆಂಗಳೂರು, ಮೈಸೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿಯೂ ಸೆಪ್ಟೆಂಬರ್ 15ರ ತನಕ ಮಳೆ ಮುಂದುವರೆಯಲಿದೆ. ಕರ್ನಾಟಕದಲ್ಲಿ ಜುಲೈನಲ್ಲಿ ಶೇ 7, ಆಗಸ್ಟ್‍ನಲ್ಲಿ ಶೇ 24ರಷ್ಟು ಮಳೆ ಕೊರತೆ ಉಂಟಾಗಿದೆ. ಸೆಪ್ಟೆಂಬರ್‍ನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿ ಮತ್ತು ಮಲೆನಾಡು ಮಾತ್ರವಲ್ಲ. ಉತ್ತರ ಕರ್ನಾಟಕದ ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಳಗಾವಿ, ಗದಗ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಹ ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

Click to comment

Leave a Reply

Your email address will not be published. Required fields are marked *

Advertisement
Advertisement