ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಕಾಣಿಸಿಕೊಂಡ ಸೈಕ್ಲೋನ್ ನಿಂದಾಗಿ ಇನ್ನೂ ಎರಡು ದಿನಗಳ ಕಾಲ ಸಿಲಿಕಾನ್ ಸಿಟಿ ಕೂಲ್ ಕೂಲ್ ಆಗಿರುತ್ತದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಇಲಾಖೆಯ ನಿರ್ದೇಶಕ ಶ್ರೀನಿವಾಸ್ ತಿಳಿಸಿದ್ದಾರೆ.
ಈ ಕುರಿತು ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಬಂಗಾಳಕೊಲ್ಲಿಯಲ್ಲಿ ಪೆಥೈ ಎಂಬ ಸೈಕ್ಲೋನ್ ಕಾಣಿಸಿಕೊಂಡಿದೆ. ಇದರಿಂದಾಗಿ ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು, ತಂಪು ಹವಾಮಾನ ನಿರ್ಮಾಣವಾಗಲಿದೆ. ಸಿಲಿಕಾನ್ ಸಿಟಿಯಲ್ಲಿ ಅಷ್ಟೇ ಅಲ್ಲದೆ ಮೈಸೂರು, ಮಂಡ್ಯ, ರಾಮನಗರದಲ್ಲಿ ಮೋಡ ಕವಿದ ವಾತಾವರಣವಿರಲಿದೆ ಎಂದು ಮಾಹಿತಿ ನೀಡಿದ್ದಾರೆ.
Advertisement
Advertisement
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಇದರ ಪರಿಣಾಮ ಪೆಥೈ ಸೈಕ್ಲೋನ್ ಉಂಟಾಗಿದೆ. ಪೆಥೈ ನಿಂದಾಗಿ ಪುದುಚೆರಿ, ಆಂಧ್ರ ಪ್ರದೇಶ ಮತ್ತು ತಮಿಳುನಾಡಿನ ಕರಾವಳಿ ಪ್ರದೇಶದಲ್ಲಿ ಭಾರೀ ಬಿರುಗಾಳಿ ಸಹಿತ ಮಳೆಯಾಗುವ ಸಂಭವವಿದೆ. ಈ ನಿಟ್ಟಿನಲ್ಲಿ ಕರಾವಳಿ ಪ್ರದೇಶದ ಜನರನ್ನು ಅಲ್ಲಿನ ಸ್ಥಳೀಯ ಸರ್ಕಾರವು ಸುರಕ್ಷಿತ ಪ್ರದೇಶಗಳಿಗೆ ಕಳುಹಿಸಿದೆ. ಈ ಮೂರು ರಾಜ್ಯಗಳ ಕರಾವಳಿ ಪ್ರದೇಶಗಳಲ್ಲಿ ಗಂಟೆಗೆ 45-65 ಕಿ.ಮೀ. ವೇಗದಲ್ಲಿ ಬಿರುಗಾಳಿ ಬೀಸುತ್ತಿದೆ. ಈ ವೇಗ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
Advertisement
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com