ಬಳ್ಳಾರಿ: ತುಂಗಭದ್ರಾ ಜಲಾಶಯ ಭರ್ತಿಯಾಗಿರುವ ಹಿನ್ನೆಲೆಯಲ್ಲಿ ಇಂದು ಉಜ್ಜಯಿನಿ ಪೀಠದ ಜಗದ್ಗುರು ಶ್ರೀ ಸಿದ್ದಲಿಂಗ ಸ್ವಾಮೀಜಿ ಬಾಗಿನ ಅರ್ಪಣೆ ಮಾಡಿದ್ದಾರೆ.
ತುಂಗಭದ್ರಾ ರೈತ ಸಂಘ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಉಜ್ಜಯಿನಿ ಜಗದ್ಗುರು ನೇತೃತ್ವದಲ್ಲಿ 20 ಸ್ವಾಮೀಜಿಗಳಿಂದ ಗಂಗೆಪೂಜೆ, ಬಾಗಿನ ಅರ್ಪಣೆ ಮಾಡಲಾಗಿದೆ. ಜಲಾಶಯದ ಅಚ್ಚುಕಟ್ಟು ಭಾಗದ 50ಕ್ಕೂ ಹೆಚ್ಚು ರೈತರು ಭಾಗಿಯಾಗಿದ್ದರು.
ಈ ವೇಳೆ ಮಾತನಾಡಿದ ಶ್ರೀಗಳು, ಲೋಕಸಭೆ ಚುನಾವಣೆಯಲ್ಲಿ ಮತದಾನ ಕಡ್ಡಾಯವಾಗಬೇಕು. ಪ್ರತಿಯೊಬ್ಬರೂ ತಮ್ಮ ಹಕ್ಕನ್ನು ಚಲಾಯಿಸಬೇಕು ವಿಧಾನಸಭೆ ಮುನ್ನ ಪ್ರತ್ಯೇಕ ಲಿಂಗಾಯತ ಮಾಡಲು ಹೋದವರಿಗೆ ಏನಾಗಿದೆ ಎನ್ನುವುದು ಗೊತ್ತಿದೆ. ಎಲ್ಲರೂ ಜಾತ್ಯಾತೀತರಾಗಿ ಮುನ್ನಡೆಯಬೇಕು ಎಂದರು.
ಜಲಾಶಯದಲ್ಲಿ 33 ಟಿಎಂಸಿ ಹೂಳು ತುಂಬಿದ್ದು, ಹಲವು ಸರ್ಕಾರಗಳು ಬಂದರೂ ಹೂಳೆತ್ತಲು ಆಗಿಲ್ಲ. ತುಂಗಭದ್ರಾ ರೈತರು ಪ್ರತಿವರ್ಷ ಹೂಳೆತ್ತುವ ಮೂಲಕ ಸರ್ಕಾರವನ್ನು ಎಚ್ಚರಿಸಿದ್ದಾರೆ. ಸಮ್ಮಿಶ್ರ ಸರ್ಕಾರ ಹೂಳೆತ್ತುವ ಬಗ್ಗೆ ತಜ್ಞರ ಸಮಿತಿ ರಚಿಸಿ ಹೂಳೆತ್ತಲು ಮುಂದಾಗಬೇಕು, ಇಲ್ಲವಾದಲ್ಲಿ ಪತ್ರ ಚಳುವಳಿ ಮಾಡಿ ಸರ್ಕಾರವನ್ನು ಎಚ್ಚರಿಸಲಾಗುವುದು ಎಂದು ರೈತರು ಹೇಳಿದ್ದಾರೆ.
ಆಗಸ್ಟ್ 15 ರಂದು ಬಳ್ಳಾರಿ ಉಸ್ತುವಾರಿ ಸಚಿವ ಡಿ ಕೆ ಶಿವಕುಮಾರ್ ಸರ್ಕಾರದ ಪರವಾಗಿ ಬಾಗಿನ ಸಮರ್ಪಣೆ ಮಾಡಲಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictvnews