ನವದೆಹಲಿ: ನಿಷೇಧಿತ ಭಯೋತ್ಪಾದಕ ಐಎಸ್‍ಐಎಸ್‍ನೊಂದಿಗೆ (ISIS) ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಉತ್ತರ ಪ್ರದೇಶದ (Uttar Pradesh) ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ (Aligarh Muslim University) ವಿದ್ಯಾರ್ಥಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಬಂಧಿಸಿದೆ.
ಬಂಧಿತನನ್ನು ಫೈಜಾನ್ ಅನ್ಸಾರಿ ಅಲಿಯಾಸ್ ಫೈಜ್ (19) ಎಂದು ಗುರುತಿಸಲಾಗಿದೆ. ಈತನ ಮನೆಯನ್ನು ಶೋಧಿಸಿ ಸರಿಯಾದ ಪುರಾವೆಗಳು ಸಿಕ್ಕಿದ ನಂತರ ಬಂಧಿಸಲಾಗಿದೆ. ಫೈಜ್ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆಗಟ್ಟುವಿಕೆ) ಕಾಯ್ದೆಯ ಸಂಬಂಧಿತ ಸೆಕ್ಷನ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಜೈಲಲ್ಲಿದ್ದುಕೊಂಡೇ ಹಿಂದೂಗಳ ಮತಾಂತರ- ನಜೀರ್ ವಿಚಾರಣೆ ವೇಳೆ ಸ್ಫೋಟಕ ಸತ್ಯ ಬಹಿರಂಗ
ಎರಡು ದಿನಗಳಿಂದ ಜಾಖರ್ಂಡ್‍ನ (Jharkhand) ಲೋಹರ್ಡಗಾ ಜಿಲ್ಲೆಯ ಫೈಜ್ ಮನೆ ಮತ್ತು ಉತ್ತರ ಪ್ರದೇಶದ ಅಲಿಗಢದಲ್ಲಿ ಬಾಡಿಗೆ ಕೊಠಡಿಯಲ್ಲಿ ಶೋಧ ನಡೆಸಲಾಗಿತ್ತು. ಈ ವೇಳೆ ಹಲವಾರು ಎಲೆಕ್ಟ್ರಾನಿಕ್ ಉಪಕರಣಗಳು, ಅನುಮಾನಾಸ್ಪದ ವಸ್ತುಗಳು ಮತ್ತು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ. ಭಾರತದಲ್ಲಿ ಐಸಿಸ್ ಚಟುವಟಿಕೆಗಳನ್ನು ಬೆಂಬಲಿಸಲು ಆರೋಪಿ ಸಾಮಾಜಿಕ ಜಾಲತಾಣಗಳಲ್ಲಿ ಗ್ರೂಪ್ ರಚಿಸಿ ಮಾಹಿತಿ ಹಂಚುತ್ತಿದ್ದ. ಅಲ್ಲದೇ ದೇಶದಲ್ಲಿ ವಿಧ್ವಂಸಕ ಕೃತ್ಯಗಳನ್ನು ನಡೆಸಲು ಯೋಜಿಸಿದ್ದ. ತನಿಖೆ ವೇಳೆ ಆತನ ಜೊತೆ ಹಲವು ಸಹಚರರು ಐಸಿಸ್ ಜೊತೆ ಕೈ ಜೊಡಿಸಿರುವುದು ಬೆಳಕಿಗೆ ಬಂದಿದೆ.
ಫೈಜ್ ವಿದೇಶಿ ಮೂಲದ ಐಸಿಸ್ ಉಗ್ರರ ಸಂಪರ್ಕದಲ್ಲಿದ್ದಾನೆ. ಉಗ್ರರ ಸೂಚನೆಯಂತೆ ಸಂಘಟನೆಗೆ ಯುವಕರನ್ನು ಸೆಳೆಯವ ಕಾರ್ಯದಲ್ಲಿ ಆರೋಪಿಯ ಪಾತ್ರವಿದೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಇದನ್ನೂ ಓದಿ: ಶಂಕಿತ ಉಗ್ರರು ಬೆಂಗ್ಳೂರಲ್ಲೇ ಅಡಗಿಸಿಟ್ಟಿದ್ದ ಗ್ರೆನೇಡ್‌ಗಳು ಪತ್ತೆ
Web Stories