RSS ಮುಖಂಡ ಶ್ರೀನಿವಾಸನ್ ಹತ್ಯೆಯ ಪ್ರಮುಖ ಆರೋಪಿಯ ಬಂಧಿಸಿದ NIA

Public TV
1 Min Read
NIA

ನವದೆಹಲಿ: 2022ರಲ್ಲಿ ಕೇರಳದಲ್ಲಿ ಆರ್‌ಎಸ್‌ಎಸ್ ಮುಖಂಡ ಶ್ರೀನಿವಾಸನ್ ಅವರ ಭೀಕರ ಹತ್ಯೆಗೆ ಸಂಬಂಧಿಸಿದಂತೆ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸದಸ್ಯನಾಗಿರುವ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ಇಂದು ಬಂಧಿಸಿದೆ.

SRINIVAS

ಆರೋಪಿಯನ್ನು ಶಫೀಖ್‌ ಎಂದು ಗುರುತಿಸಲಾಗಿದೆ. ಮಲಪ್ಪುರಂ ಜಿಲ್ಲೆಯ ನಿವಾಸಿಯಾಗಿರುವ ಈತ 2022ರ ಏಪ್ರಿಲ್‌ 16ರಂದು ಪಾಲಕ್ಕಾಡ್‌ನಲ್ಲಿ ಶ್ರೀನಿವಾಸನ್‌ ಹತ್ಯೆಯ ನಂತರ ತಲೆಮರೆಸಿಕೊಂಡಿದ್ದ. ಇದೀಗ ಎನ್‌ಐಎ ಅಧಿಕಾರಿಗಳ ತಂಡ ಕೊಲ್ಲಂ ಜಿಲ್ಲೆಗೆ ಪತ್ತೆಹಚ್ಚಿದೆ. ಇದನ್ನೂ ಓದಿ: ಸಿಇಎನ್ ಪೊಲೀಸರ ಭರ್ಜರಿ ಬೇಟೆ – 2.93 ಕೋಟಿ ರೂ. ನಗದು ಜಪ್ತಿ

ಒಟ್ಟು 71 ಮಂದಿ ಶ್ರೀನಿವಾಸನ್ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಹೇಳಲಾಗಿತ್ತು. ಈ ಸಂಬಂಧ NIA ಈಗಾಗಲೇ 2023 ರ ಮಾರ್ಚ್‌ 17 ಮತ್ತು 2023ರ ನವೆಂಬರ್‌ 6 ರಂದು ಎರಡು ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಿದೆ. ಆರೋಪಿಗಳಲ್ಲಿ ಒಬ್ಬನನ್ನು ಅಬ್ದುಲ್ ನಾಸರ್ ಎಂದು ಗುರುತಿಸಲಾಗಿದ್ದು, ಈತ ಜನವರಿ 2 ರಂದು ಸಾವನ್ನಪ್ಪಿದ್ದಾನೆ. ಸಹೀರ್ ಕೆವಿ ಮತ್ತು ಜಾಫರ್ ಭೀಮಂತವಿಡ ಎಂಬಿಬ್ಬರು ಪರಾರಿಯಾಗಿದ್ದು, ಬಳಿಕ ಇಬ್ಬರನ್ನು ಬಂಧಿಸಲಾಯಿತು.

Share This Article