ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆ (Red Fort) ಸಮೀಪ ನಡೆದ ಕಾರು ಸ್ಫೋಟ (Car Blast) ಪ್ರಕರಣದ ತನಿಖೆಯಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ ಸಲ್ಲಿಸಿರುವ ಆರೋಪಪಟ್ಟಿಯನ್ನು ದೆಹಲಿಯ ವಿಶೇಷ ಎನ್‌ಐಎ ನ್ಯಾಯಾಲಯ (Special National Investigation Agency) ಶನಿವಾರ ಪರಿಗಣನೆಗೆ ತೆಗೆದುಕೊಂಡಿದೆ.
2025ರ ನವೆಂಬರ್‌ನಲ್ಲಿ ಕೆಂಪುಕೋಟೆ ಸಮೀಪ ಕಾರಿನಲ್ಲಿ ಸಂಭವಿಸಿದ ಭೀಕರ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಎ ಮೊದಲ ಹಂತದಲ್ಲಿ 12 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಿತ್ತು. ಬಳಿಕ ಮತ್ತಿಬ್ಬರು ಆರೋಪಿಗಳ ವಿರುದ್ಧ ಪೂರಕ ಆರೋಪಪಟ್ಟಿಯನ್ನೂ ಸಲ್ಲಿಸಲಾಗಿದೆ. ಹೀಗಾಗಿ ಪ್ರಕರಣದಲ್ಲಿ ಒಟ್ಟು 14 ಮಂದಿ ಆರೋಪಿಗಳ ಹೆಸರು ಕೇಳಿಬಂದಿದೆ. ಇದನ್ನೂ ಓದಿ: ಆರ್‌ಎಸ್‌ಎಸ್ ಬಗ್ಗೆ ಅವಹೇಳನಕಾರಿ ಹೇಳಿಕೆ ಕೇಸ್; ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಜಾಮೀನು ಮಂಜೂರು

ಆರೋಪಿಗಳ ಪೈಕಿ ಉಮರ್ ಉನ್ ನಬಿ ಸ್ಫೋಟದಲ್ಲೇ ಮೃತಪಟ್ಟಿದ್ದಾನೆ. ಮತ್ತೊಬ್ಬ ಆರೋಪಿ ಇನ್ನೂ ತಲೆಮರೆಸಿಕೊಂಡಿದ್ದು, ಆತನಿಗಾಗಿ ತನಿಖಾ ಸಂಸ್ಥೆಗಳು ಶೋಧ ಮುಂದುವರಿಸಿವೆ. ಉಳಿದ ಆರೋಪಿಗಳ ವಿರುದ್ಧ ಕಾನೂನು ಪ್ರಕ್ರಿಯೆ ಮುಂದುವರಿಯಲಿದೆ. ಎನ್‌ಐಎ ಸಲ್ಲಿಸಿರುವ ಆರೋಪಪಟ್ಟಿಯಲ್ಲಿ ತನಿಖೆಯ ವೇಳೆ ಸಂಗ್ರಹಿಸಲಾದ ಸಾಕ್ಷ್ಯಗಳು ಹಾಗೂ ಆರೋಪಿಗಳ ಪಾತ್ರದ ಕುರಿತು ವಿವರಗಳನ್ನು ದಾಖಲಿಸಲಾಗಿದೆ. ಇದನ್ನೂ ಓದಿ: Nepal Flood | ಮೋದಿ, ಅಮಿತ್ ಶಾಗೆ ಖರ್ಗೆ ಪತ್ರ – ಭಾರತೀಯರ ಸುರಕ್ಷಿತ ವಾಪಸಾತಿಗೆ ಮನವಿ
ಪ್ರಕರಣದ ತನಿಖೆಯ ಮುಂದುವರಿದ ಹಂತದಲ್ಲಿ ಹೊಸ ಸಾಕ್ಷ್ಯಗಳು ದೊರೆತ ಹಿನ್ನೆಲೆಯಲ್ಲಿ ಪೂರಕ ಆರೋಪಪಟ್ಟಿ ಸಲ್ಲಿಸಲಾಗಿದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ವಿಶೇಷ ಎನ್‌ಐಎ ನ್ಯಾಯಾಲಯವು ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 9ಕ್ಕೆ ನಿಗದಿಪಡಿಸಿದೆ. ಇದನ್ನೂ ಓದಿ: ಕುಮಾರಸ್ವಾಮಿ ರಾಮನಗರಕ್ಕೆ ಬಂದ್ರೆ ಕಾಲು ತೊಳೆದು ಸ್ವಾಗತ ಮಾಡ್ತೇನೆ: ಇಕ್ಬಾಲ್ ಹುಸೇನ್
