ಮಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಪ್ರಕರಣದ ನಂ.23ನೇ ಆರೋಪ ಸುಳಿವು ಕೊಟ್ಟವರಿಗೆ 2 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ಎನ್‌ಐಎ (NIA) ಘೋಷಿಸಿದೆ.
ಈ ಸಂಬಂಧ ಎನ್‌ಐಎ ರಿವಾರ್ಡ್ ವಾಂಟೆಡ್ ನೋಟಿಸ್ ಅನ್ನು ಬಿಡುಗಡೆ ಮಾಡಿದೆ. ಆರೋಪಿ ನಂ.23 ನೌಷಾದ್‌ನ ಸುಳಿವಿಗೆ 2 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ತಿಳಿಸಿದೆ. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಕೇಸ್ – ದಕ್ಷಿಣ ಕನ್ನಡ, ಕೊಡಗಿನಲ್ಲಿ PFI ಕಾರ್ಯಕರ್ತರ ಮನೆ ಮೇಲೆ NIA ದಾಳಿ
ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಲೂಕಿನ ಪಡಂಗಡಿ ಗ್ರಾಮದ ಹಮೀದ್ ಮಗ ನೌಷಾದ್. ಈತ ನಿಷೇಧಿತ ಪಿಎಫ್ಐ ಸಂಘಟನೆಯ ಕಾರ್ಯಕರ್ತನಾಗಿದ್ದ ಎನ್ನಲಾಗಿದೆ. ಪ್ರಕರಣ ಸಂಬಂಧ ಈಗಾಗಲೇ ಹಲವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.
ಏನಿದು ಪ್ರಕರಣ?
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಸಮೀಪದ ಪೆರುವಾಜೆ ಕ್ರಾಸ್ ಬಳಿ ಅಕ್ಷಯ್ ಕೋಳಿ ಮಾಂಸದ ಅಂಗಡಿ ಹೊಂದಿದ್ದ ಬಿಜೆಪಿ ಯುವ ಮೋರ್ಚಾ ಸದಸ್ಯ ಪ್ರವೀಣ್ ಕುಮಾರ್ ಅವರು ಜುಲೈ 26 ರಂದು ರಾತ್ರಿ 8 ಗಂಟೆಗೆ ಅಂಗಡಿ ಮುಚ್ಚಿ ಮನೆ ಕಡೆ ಹೊರಟಿದ್ದರು. ಈ ವೇಳೆ ಬೈಕಿನಲ್ಲಿ ಬಂದಿದ್ದ ಮೂವರು ತಲ್ವಾರ್‌ನಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದರು. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಕನಸು ನನಸು – ನೂತನ ಮನೆಯ ಗೃಹ ಪ್ರವೇಶ, ಸ್ಮಾರಕ ಲೋಕಾರ್ಪಣೆ
ತಕ್ಷಣ ಪುತ್ತೂರು ಆಸ್ಪತ್ರೆಗೆ ಪ್ರವೀಣ್ ಅವರನ್ನು ದಾಖಲಿಸಿದರೂ ಕುತ್ತಿಗೆಯ ಭಾಗಕ್ಕೆ ತೀವ್ರ ಏಟು ಬಿದ್ದ ಕಾರಣ ಚಿಕಿತ್ಸೆ ಫಲಕರಿಯಾಗದೇ ಮೃತಪಟ್ಟಿದ್ದರು. ಪ್ರಕರಣ ಸಂಬಂಧ ಈವರೆಗೆ ಹಲವಾರು ಮಂದಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ.
Web Stories