ಕಾರವಾರ: ಐಎಸ್‍ಐಎಸ್ ನಂಟು ಹೊಂದಿರುವ ಶಂಕೆ ಹಿನ್ನೆಲೆ ಎನ್ಐಎ ತಂಡದಿಂದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಮೂಲದ ಓರ್ವನನ್ನು ವಶಕ್ಕೆ ಪಡೆಯಲಾಗಿದೆ.
ಆರೋಪಿ ಅಬ್ದುಲ್ ಮಸ್ತಿರ್ (30) ಎಂಬಾತನನ್ನು ಎನ್ಐಎ ತಂಡ ಇಂದು ವಶಕ್ಕೆ ಪಡೆದಿದೆ. ಐಎಸ್‍ಐಎಸ್ ಬರಹಗಳನ್ನು ಭಾಷಾಂತರ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಬಿತ್ತರಿಸಿದ ಕಾರಣಕ್ಕಾಗಿ ಅಬ್ದುಲ್ ಮಸ್ತಿರನನ್ನು ಭಟ್ಕಳ ನಗರದ ಅರ್ಬನ್ ಬ್ಯಾಂಕ್ ಬಳಿ ಇರುವ ಆತನ ಮನೆಯಿಂದ ಎನ್‍ಐಎ ತಂಡ ವಶಕ್ಕೆ ಪಡೆದಿದೆ. ಇದನ್ನೂ ಓದಿ: ಆರೋಪಿಗಳೊಂದಿಗೆ ಅಜಿತ್‍ಗೆ ಸಂಪರ್ಕವಿದೆ – ಆದಷ್ಟು ಬೇಗ ಇತರ ಆರೋಪಿಗಳನ್ನು ಬಂಧಿಸುತ್ತೇವೆ: ಶಶಿಕುಮಾರ್
ಪ್ರಾಥಮಿಕ ಮಾಹಿತಿಯಂತೆ ಈತ ಭಟ್ಕಳ ನಗರದಲ್ಲಿ ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ. ಐಎಸ್‍ಐಎಸ್‍ನ ಬರಹಗಳನ್ನು ಭಾರತೀಯ ಭಾಷೆಗಳಿಗೆ ಈತ ಭಾಷಾಂತರ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿದ್ದ ಎಂಬ ಆರೋಪದಡಿ ಈತನನ್ನು ವಶಕ್ಕೆ ಪಡೆಯಲಾಗಿದ್ದು, ಭಟ್ಕಳದಲ್ಲೇ ತನಿಖೆ ಕೈಗೊಳ್ಳಲಾಗಿದೆ. ಇದನ್ನೂ ಓದಿ: ಪ್ರವೀಣ್ ನೆಟ್ಟಾರು ಮನೆಗೆ ಶೋಭಾ ಕರಂದ್ಲಾಜೆ ಭೇಟಿ- ಕುಟುಂಬಸ್ಥರಿಗೆ ಸಾಂತ್ವನ, 5 ಲಕ್ಷ ಪರಿಹಾರ