ಮುಂಬೈ: ರಾಷ್ಟ್ರೀಯ ತನಿಖಾ ಸಂಸ್ಥೆಗೆ (NIA) ತಾಲಿಬಾನ್ (Taliban) ಹೆಸರಲ್ಲಿ ಇಮೇಲ್ (EMail) ಬಂದಿದ್ದು, ಇಮೇಲ್‍ನಲ್ಲಿ ಮುಂಬೈ (Mumbai) ಸೇರಿದಂತೆ ಭಾರತದ ಪ್ರಮುಖ ನಗರಗಳಲ್ಲಿ ಭಯೋತ್ಪಾದನಾ ದಾಳಿ (Terror Attack) ಕುರಿತು ಎಚ್ಚರಿಕೆ ನೀಡಲಾಗಿದೆ. ಹಾಗಾಗಿ ದೇಶಾದ್ಯಂತ ಹೈಅಲರ್ಟ್ ಘೋಷಿಸಲಾಗಿದೆ.
Advertisement
ತಾಲಿಬಾನ್ ಮುಖ್ಯಸ್ಥ ಸಿರಾಜುದ್ದೀನ್ ಹಕ್ಕಾನಿ ಆದೇಶದಂತೆ ಇಮೇಲ್ ಕಳುಹಿಸುತ್ತಿರುವುದಾಗಿ ಉಲ್ಲೇಖಿಸಲಾಗಿದೆ. ಇಮೇಲ್ ಕುರಿತು ಎನ್‍ಐಎ ತನಿಖೆ ಆರಂಭಿಸಿದೆ. ಈಗಾಗಲೇ ಇಮೇಲ್ ಮೂಲಕ ತಾಲಿಬಾನ್ ದಾಳಿ ಎಚ್ಚರಿಕೆ ನೀಡಿರುವ ಕಾರಣ ಮುಂಬೈ ಸೇರಿದಂತೆ ಹಲವು ನಗರಗಳಲ್ಲಿ ಹೈಅಲರ್ಟ್ ಘೋಷಿಸಿದೆ. ಇದನ್ನೂ ಓದಿ: ಪಕ್ಷ ವಿರೋಧಿ ಚಟುವಟಿಕೆ – ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ ಪತ್ನಿಯನ್ನು ಅಮಾನತುಗೊಳಿಸಿದ ಕಾಂಗ್ರೆಸ್
Advertisement
Advertisement
NIA ಪ್ರಾಥಮಿಕ ತನಿಖೆ ಪ್ರಕಾರ ತಾಲಿಬಾನ್ ಹೆಸರಲ್ಲಿ ಕಿಡಿಗೇಡಿಗಳು ಇಮೇಲ್ ಕಳುಹಿಸಿರುವ ಸಾಧ್ಯತೆ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ಭಾರತದ ಜೊತೆ ಆಫ್ಘಾನಿಸ್ತಾನ (Afghanistan) ತಾಲಿಬಾನ್ ಉತ್ತಮ ಸಂಬಂಧ ಹೊಂದಿದೆ. ಹೀಗಾಗಿ ಹಕ್ಕಾನಿ ಹೆಸರಿನಲ್ಲಿ ಕಿಡಿಗೇಡಿಗಳು ಅಥವಾ ಭಯೋತ್ಪಾದಕ ಕೃತ್ಯ ಎಸಗಲು ಸಂಚು ರೂಪಿಸುತ್ತಿರುವ ಗುಂಪು ಈ ಸಂದೇಶ ಕಳುಹಿಸಿರುವ ಸಾಧ್ಯತೆ ಇದೆ. ಈ ಬಗ್ಗೆ ಎನ್‍ಐಎ ಎಚ್ಚರಿಕೆ ವಹಿಸಿದೆ. ಈಗಾಗಲೇ ಬಂದಿರುವ ಇಮೇಲ್ ಸಂದೇಶವನ್ನು ಟ್ರೆಸಿಂಗ್ ಮಾಡಲಾಗಿದ್ದು ಪಾಕಿಸ್ತಾನದಿಂದ (Pakistan) ಬಂದಿರುವ ಬಗ್ಗೆ ಮಾಹಿತಿ ಸಿಕ್ಕಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳೀಯ ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: BBC ಸಾಕ್ಷ್ಯಚಿತ್ರ ನಿಷೇಧ – ಕೇಂದ್ರ ಸರ್ಕಾರಕ್ಕೆ ಸುಪ್ರೀಂ ನೋಟಿಸ್
Advertisement
ದಾಳಿಯ ಬೆದರಿಕೆ ಸಂದೇಶ ಬಂದಿರುವ ಕಾರಣ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ. ಈಗಾಗಲೇ ನಗರ ಹಾಗೂ ಗಡಿ ಪ್ರದೇಶದಲ್ಲಿ ಅಲರ್ಟ್ ಘೋಷಿಸಲಾಗಿದೆ. NIA ಅಧಿಕಾರಿಗಳು ಮುಂಬೈ ಪೊಲೀಸರಿಗೆ ಉಗ್ರರ ದಾಳಿ ಕುರಿತು ಮಾಹಿತಿ ಹಂಚಿಕೊಂಡಿದೆ. ಮುಂಬೈನ ಕೊಲಾಬಾ ಸೇರಿದಂತೆ ಎಲ್ಲಾ ಜಲ ಮಾರ್ಗದಲ್ಲಿ ಭದ್ರತಾ ಪಡೆ ಹದ್ದಿನ ಕಣ್ಣಿಟ್ಟಿದೆ.
ರೈಲು ನಿಲ್ದಾಣ, ವಿಮಾನ ನಿಲ್ದಾಣ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಪೊಲೀಸರು ನಾಕಾಬಂದಿ ಹಾಕಿದ್ದಾರೆ. ಇದೇ ವೇಳೆ ಎನ್‍ಐಎ ಅಧಿಕಾರಿಗಳು ಇತರ ನಗರಕ್ಕೂ ಹೈಅಲರ್ಟ್ ಸೂಚಿಸಿದೆ.
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k