ಜಮ್ಮು ಕಾಶ್ಮೀರದಲ್ಲಿ 36,34,78,500 ರೂ. ಮೌಲ್ಯದ ಹಳೆ ನೋಟು ಜಪ್ತಿ

Public TV
1 Min Read
NIA JAMMU

ಶ್ರೀನಗರ: ನೋಟ್ ಬ್ಯಾನ್ ಗೆ ಒಂದು ವರ್ಷ ಪೂರ್ಣಗೊಳ್ಳುವ ಮುನ್ನ ದಿನವೇ ಜಮ್ಮು ಕಾಶ್ಮೀರದಲ್ಲಿ 36.34 ಕೋಟಿ ರೂ. ಮೌಲ್ಯದ ಹಳೆಯ ನೋಟುಗಳು ಪತ್ತೆಯಾಗಿದೆ.

ರಾಷ್ಟ್ರೀಯ ತನಿಖಾ ದಳ(ಎನ್‍ಐಎ) 36,34,78,500 ಕೋಟಿ ರೂ. ಹಳೆಯ ನೋಟುಗಳನ್ನು ವಶ ಪಡಿಸಿಕೊಂಡಿಸಿ 9 ಮಂದಿಯನ್ನು ಬಂಧಿಸಿದ್ದಾರೆ.

ಕಾಶ್ಮೀರಲ್ಲಿ ಉಗ್ರ ಚಟುವಟಿಕೆಗಳಿಗೆ ಆರ್ಥಿಕ ಸಹಕಾರ ನೀಡುತ್ತಿದ್ದ ವ್ಯಕ್ತಿಗಳನ್ನು ಬಂಧಿಸಿದಾಗ ಈ ಹಣ ಪತ್ತೆಯಾಗಿದೆ ಎಂದು ಎನ್‍ಐಎ ತಿಳಿಸಿದೆ ಎಂಬುದಾಗಿ ಮಾಧ್ಯಮಗಳು ವರದಿ ಮಾಡಿವೆ.

ಪ್ರದೀಪ್ ಚೌಹಾಣ್, ಭಗವಾನ್ ಸಿಂಗ್, ವಿನೋದ್ ಶೆಟ್ಟಿ, ಶಹನವಾಜ್ ಮೀರ್, ದೀಪಕ್, ಮಜೀದ್ ಸೂಫಿ, ಇಜಲ್ ಹಸನ್, ಜಸ್ವಿಂದರ್ ಸಿಂಗ್, ಉಮೈರ್ ದಾರ್ ಬಂಧಿತ ಆರೋಪಿಗಳು.

ಕೆಲ ದಿನಗಳ ಹಿಂದೆ ಉಗ್ರರಿಗೆ ಹಣಕಾಸು ಪೂರೈಕೆ ಮಾಡುತ್ತಿದ್ದ ಆರೋಪದಡಿ ಜಮ್ಮು ಕಾಶ್ಮೀರದ ಉದ್ಯಮಿಯನ್ನು ಬಂಧಿಸಿ ತಿಹಾರ್ ಜೈಲಿಗೆ ಅಟ್ಟಲಾಗಿತ್ತು. ಹೀಗಾಗಿ ಪತ್ತೆಯಾಗಿರುವ ಹಣ ಈ ವ್ಯಕ್ತಿಗೆ ಸೇರಿದ್ದಾ ಎನ್ನುವುದರ ಬಗ್ಗೆ ಸ್ಪಷ್ಟ ಮಾಹಿತಿ ಇನ್ನೂ ಸಿಕ್ಕಿಲ್ಲ.

ಸೋಮವಾರ ಜಮ್ಮು ಜಿಲ್ಲೆಯಲ್ಲಿ ಮೂವರನ್ನು ಬಂಧಿಸಿ 44 ಸಾವಿರ ರೂ. ಮೌಲ್ಯದ ನಕಲಿ ನೋಟುಗಳನ್ನು ವಶ ಪಡಿಸಲಾಗಿತ್ತು.

ಪ್ರಧಾನಿ ನರೇಂದ್ರ ಮೋದಿಯವರು ಕಳೆದ ವರ್ಷದ ನವೆಂಬರ್ 8ರಂದು ನೋಟ್ ಬ್ಯಾನ್ ಭಾಷಣದಲ್ಲಿ, ಕಪ್ಪು ಹಣ ಮತ್ತು ಭಯೋತ್ಪಾದನೆಯನ್ನು ನಿರ್ಮೂಲನೆಗೊಳಿಸಲು 500, 1 ಸಾವಿರ ರೂ. ನೋಟುಗಳನ್ನು ನಿಷೇಧಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಿದ್ದರು. ನೋಟ್ ಬ್ಯಾನ್ ಬಳಿಕ ಜಮ್ಮು ಕಾಶ್ಮೀರದಲ್ಲಿ ಕಲ್ಲುತೂರಾಟ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿತ್ತು.

NIA demonetised currency 1

NIA demonetised currency 2

 

 

Share This Article