ಶಿವಮೊಗ್ಗ: ಭಜರಂಗದಳ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ಜಿಲ್ಲೆ ಹಲವೆಡೆ ಕ್ಷಿಪ್ರ ದಾಳಿ ನಡೆಸಿದ್ದಾರೆ.
ಶಿವಮೊಗ್ಗಕ್ಕೆ ಎನ್‌ಐಎ ಅಧಿಕಾರಿಗಳು ನಿನ್ನೆ ರಾತ್ರಿ ಬಂದಿಳಿದಿದ್ದರು. ನಾಲ್ಕು ರಾಜ್ಯಗಳ ಹಿರಿಯ ಅಧಿಕಾರಿಗಳನ್ನೊಳಗೊಂಡ ತಂಡ ಜಿಲ್ಲೆಗೆ ಆಗಮಿಸಿದೆ. ಜಿಲ್ಲೆಯ ಅಧಿಕಾರಿಗಳನ್ನೂ ಸೇರಿ ಒಟ್ಟು 90 ಅಧಿಕಾರಿಗಳಿಂದ ದಾಳಿ ನಡೆದಿದೆ. ಇದನ್ನೂ ಓದಿ: ನೈಸ್ ರಸ್ತೆಯಲ್ಲಿ ಟೋಲ್ ಶುಲ್ಕ ಹೆಚ್ಚಳ ವಾಪಸ್
ಇಂದು ಬೆಳಗ್ಗೆ ಐದು ಗಂಟೆಗೆ ದಾಳಿ ಆರಂಭವಾಯಿತು. ಶಿವಮೊಗ್ಗ ಜಿಲ್ಲೆಯಲ್ಲಿ 13 ಕಡೆ ದಾಳಿ ನಡೆಸಿ ವಿಚಾರಣೆ ಮಾಡಲಾಯಿತು. ಬೆಳಗ್ಗೆ 10 ಗಂಟೆಯೊಳಗೆ ವಿಚಾರಣೆ ಮುಗಿಸಿ ವಾಪಸ್ ಆಗಿದ್ದಾರೆ. ಹರ್ಷ ಕೊಲೆ ಪ್ರಕರಣದಲ್ಲಿ ಹೆಸರು ಕೇಳಿ ಬಂದ ಆರೋಪಿಗಳು ಹಾಗೂ ಅವರ ಸಂಬಂಧಿಕರ ವಿಚಾರಣೆ ನಡೆಸಿದ್ದಾರೆ.
ವಿಚಾರಣೆ ವೇಳೆ ಅಧಿಕಾರಿಗಳು ಮಹತ್ವದ ಮಾಹಿತಿ ಕಲೆ ಹಾಕಿದ್ದಾರೆ. ಇದುವರೆಗೆ ಒಟ್ಟು 450 ಮಂದಿಯನ್ನು ಎನ್‌ಐಎ ಅಧಿಕಾರಿಗಳು ವಿಚಾರಣೆಗೆ ಒಳಪಡಿಸಿದ್ದಾರೆ. ಇದನ್ನೂ ಓದಿ: ನನಗೆ ಸಿಎಂ ಆಗೋ ಎಲ್ಲಾ ಅರ್ಹತೆಯಿದೆ: ಉಮೇಶ್ ಕತ್ತಿ