ನವದೆಹಲಿ: ಬಿಹಾರದಲ್ಲಿ ಪ್ರಧಾನಿ ನರೇಂದ್ರ ಮೋದಿ (Narendra Modi) ಹತ್ಯೆಗೆ ಸಂಚು ರೂಪಿಸಿದ್ದ ಪ್ರಕರಣದ ತನಿಖೆ ಮಂಗಳೂರಿಗೂ ವಿಸ್ತರಿಸಿದೆ. ಎಸ್‌ಡಿಪಿಐ (SDPI) ಪಕ್ಷದ ರಾಷ್ಟ್ರೀಯ ನಾಯಕ ರಿಯಾಜ್ ಫರಂಗಿಪೇಟೆಗೆ ಸೇರಿದ ಪರ್ಲಿಯಾ ನಿವಾಸದ ಮೇಲೆ ಎನ್‌ಐಎ (NIA) ಅಧಿಕಾರಿಗಳು ದಾಳಿ ಮಾಡಿದ್ದಾರೆ.
ರಿಯಾಜ್ ಮತ್ತು ಅವರ ಕುಟುಂಬಸ್ಥರನ್ನು 8 ಗಂಟೆ ವಿಚಾರಣೆಗೆ ಒಳಪಡಿಸಿದ್ದಾರೆ. ಬಂಧಿತರ ಜೊತೆ ರಿಯಾಜ್ ಸಂಪರ್ಕ ಹೊಂದಿದ್ದ ಆರೋಪದ ಮೇಲೆ ಸಮಗ್ರ ವಿಚಾರಣೆ ನಡೆಸಿದ್ದಾರೆ. ರಿಯಾಜ್ ಮತ್ತು ಅವರ ಪತ್ನಿಯ ಮೊಬೈಲ್ ಸೇರಿ ಹಲವು ದಾಖಲೆ ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ಇಂಡಿಯಾ ಗೇಟ್‌ನಲ್ಲಿ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಅನಾವರಣ; ಕರ್ತವ್ಯ ಪಥ ಉದ್ಘಾಟಿಸಿದ ಪ್ರಧಾನಿ ಮೋದಿ
Advertisement
Advertisement
ಎನ್‌ಐಎ ರೇಡ್ ಸುದ್ದಿ ತಿಳಿಯುತ್ತಲೇ ರಿಯಾಜ್ ಮನೆ ಮುಂದೆ ಜಮಾಯಿಸಿದ ಎಸ್‌ಡಿಪಿಐ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಎನ್‌ಐಎ ಅಧಿಕಾರಿಗಳು ನಿರ್ಗಮಿಸಿದ ಬಳಿಕ ಮಾತನಾಡಿದ ರಿಯಾಜ್ ಫರಂಗಿಪೇಟೆ, ಇದು ರಾಜಕೀಯ ಪ್ರೇರಿತ ದಾಳಿ ಎಂದು ಆರೋಪಿಸಿದ್ದಾರೆ.
Advertisement
ಅತ್ತ ಕೇಂದ್ರ ಗೃಹಸಚಿವ ಅಮಿತ್ ಶಾ (Amit Shah) ಅವರು ಮುಂಬೈ ಭೇಟಿ ವೇಳೆ ಭದ್ರತಾ ಲೋಪವಾಗಿದೆ. ಗೃಹ ಸಚಿವಾಲಯದ ಅಧಿಕಾರಿ ಸೋಗಿನಲ್ಲಿದ್ದ ಹೇಮಂತ್ ಎಂಬಾತನನ್ನು ಅರೆಸ್ಟ್ ಮಾಡಿ, 5 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ. ಬಂಧಿತ ಆಂಧ್ರಪ್ರದೇಶದ ಸಂಸದರೊಬ್ಬರ ಖಾಸಗಿ ಭದ್ರತಾ ಸಿಬ್ಬಂದಿ ಅಂತಲೂ ಹೇಳಿಕೊಂಡಿದ್ದ. ಇದನ್ನೂ ಓದಿ: ಮೋದಿ ಉತ್ತಮ ವ್ಯಕ್ತಿ; ಅದ್ಭುತ ಕೆಲಸಗಳನ್ನು ಮಾಡುತ್ತಿದ್ದಾರೆ – ಟ್ರಂಪ್ ಬಣ್ಣನೆ