ಮಂಗಳೂರು: ಪ್ರವೀಣ್ ನೆಟ್ಟಾರು (Praveen Nettaru) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಹಲವೆಡೆ ಎನ್‍ಐಎ (NIA) ತಂಡದಿಂದ ದಾಳಿ ಮುಂದುವರಿದಿದ್ದು, ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.
Advertisement
ಇಂದು ಬೆಳ್ಳಂಬೆಳ್ಳಗ್ಗೆ ನಿಷೇಧಿತ ಪಿಎಫ್‍ಐ (PFI) ಮುಖಂಡರ ಮನೆಗಳ ಮೇಲೆ ಎನ್‍ಐಎ (NIA) ಅಧಿಕಾರಿಗಳು ಮತ್ತೆ ದಾಳಿ ನಡೆಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ, ಸುಳ್ಯ, ಮೈಸೂರು, ಹುಬ್ಬಳ್ಳಿ, ಮೈಸೂರು ಸೇರಿದಂತೆ ರಾಜ್ಯದ 6 ಕಡೆಗಳಲ್ಲಿ ದಾಳಿ ನಡೆಸಿ ಪಿಎಫ್‍ಐ ಮುಖಂಡರ ಮನೆಗಳಲ್ಲಿ ಪರಿಶೀಲನೆ ನಡೆಸಲಾಗಿದೆ. ಇದನ್ನೂ ಓದಿ: ತುಮಕೂರಿನಲ್ಲಿ ಬಾಣಂತಿ, ನವಜಾತ ಶಿಶುಗಳ ಮರಣ ಪ್ರಕರಣ – ಸಚಿವ ಸುಧಾಕರ್ ರಾಜೀನಾಮೆಗೆ ಹೆಚ್‌ಡಿಕೆ ಆಗ್ರಹ
Advertisement
Advertisement
ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‍ಡಿಪಿಐ (SDPI) ರಾಜ್ಯ ಕಾರ್ಯದರ್ಶಿ ಶಾಫಿ ಬೆಳ್ಳಾರೆ, ಬೆಳ್ಳಾರೆ ಗ್ರಾ.ಪಂ ಸದಸ್ಯ ಇಕ್ಬಾಲ್ ಬೆಳ್ಳಾರೆ, ಸುಳ್ಯದ ಇಬ್ರಾಹಿಂ ಶಾನನ್ನು ಬೆಳಗಿನ ಜಾವ ಎನ್‍ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಎನ್‍ಐಎಯಿಂದ ಬಂಧಿತ ಆರೋಪಿಗಳಿಗೆ ಪುತ್ತೂರಿನ ಸರ್ಕಾರಿ ಆಸ್ಪತ್ರೆಯಲ್ಲಿ ಮೆಡಕಲ್ ಟೆಸ್ಟ್ ಮಾಡಿಸಲಾಗಿದೆ. ಮೆಡಿಕಲ್ ಟೆಸ್ಟ್ ಮುಗಿಸಿ ಆರೋಪಿಗಳನ್ನು ಬೆಂಗಳೂರು ಕಡೆಗೆ ಎನ್‍ಐಎ ಅಧಿಕಾರಿಗಳು ಕರೆದೊಯ್ದಿದ್ದಾರೆ. ಇಂದು ಆರೋಪಿಗಳನ್ನು ಬೆಂಗಳೂರಿನ ಸಿಸಿಬಿ, ಡಿಸಿಪಿ ಎದುರು ಹಾಜರುಪಡಿಸುವ ಸಾಧ್ಯತೆಯಿದೆ.
Advertisement
ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿರುವ ಉಳಿದ ಆರೋಪಿಗಳ ಬಂಧನಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ (Putturu) ಸುತ್ತಮುತ್ತ ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ಶೋಧ ಕಾರ್ಯ ನಡೆಸುತ್ತಿದೆ. ಇದನ್ನೂ ಓದಿ: ಸ್ವತಂತ್ರ ಭಾರತದ ಮೊದಲ ಮತದಾರ ಶ್ಯಾಮ್ ಸರಣ್ ನೇಗಿ ನಿಧನ