ಬೆಂಗಳೂರು: ಬಜರಂಗದಳ ಕಾರ್ಯಕರ್ತ ಹರ್ಷನ ಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ರಾಜ್ಯಾದ್ಯಂತ ಕೋಮುಗಲಭೆ ಸೃಷ್ಟಿಸಲು ಹರ್ಷನ ಹತ್ಯೆ ಮಾಡಲಾಗಿದೆ ಎಂದು ಎನ್‌ಐಎ (ರಾಷ್ಟ್ರೀಯ ತನಿಖಾ ದಳ) ವರದಿಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗವಾಗಿದೆ.
Advertisement
ಶಿವಮೊಗ್ಗದಲ್ಲಿ ಕೋಮುಗಲಭೆ ಎಬ್ಬಿಸುವ ಉದ್ದೇಶದಿಂದ ಹತ್ಯೆ ನಡೆದಿದೆ. ಜನರಿಗೆ ಭಯವುಂಟು ಮಾಡೋದು ಆರೋಪಿಗಳ ಯೋಜನೆಯಾಗಿತ್ತು ಎಂದು ಎಫ್‌ಐಆರ್‌ನ ಸಾರಾಂಶದಲ್ಲಿ ಎನ್‌ಐಎ ಉಲ್ಲೇಖಿಸಿದೆ. ಇದನ್ನೂ ಓದಿ: ಕುರಿದೊಡ್ಡಿಗೆ ನುಗ್ಗಿ 30 ಕುರಿಗಳನ್ನು ಕದ್ದೊಯ್ದ ಖದೀಮರು – ಕುರಿಗಾಯಿ ಕಣ್ಣೀರು
Advertisement
Advertisement
ಶಿವಮೊಗ್ಗ ಹರ್ಷನ ಹತ್ಯೆ ಪ್ರಕರಣದಲ್ಲಿ 11 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಆರೋಪಿಗಳ ಕೊಲೆಯ ಉದ್ದೇಶ ಸಮಾಜದಲ್ಲಿ ಭಯವನ್ನುಂಟು ಮಾಡೋದಾಗಿದೆ. ಸಮಾಜದ ಸ್ವಾಸ್ಥ್ಯವನ್ನು ಹಾಳು ಮಾಡುವ ಮೂಲಕ ಕೋಮುಗಲಭೆ ಎಬ್ಬಿಸುವ ಉದ್ದೇಶ ಆಗಿತ್ತು. ಮಾರಕಾಸ್ತ್ರವನ್ನು ಬಳಸಿ ಜನರಿಗೆ ಭಯ ಉಂಟು ಮಾಡುವ ಉದ್ದೇಶವನ್ನು 11 ಮಂದಿ ಆರೋಪಿಗಳು ಹೊಂದಿದ್ದರು. ಈ ವಿಚಾರ ಕೇಂದ್ರ ಸರ್ಕಾರ ಸೂಚನೆಯ ಮೇರೆಗೆ ಎಫ್‌ಐಆರ್ ದಾಖಲು ಮಾಡಲಾಗಿದ್ದು, ರಾಷ್ಟ್ರೀಯ ತನಿಖಾ ದಳ ತನಿಖೆ ಕೈಗೆತ್ತಿಕೊಂಡಿದೆ. ಇದನ್ನೂ ಓದಿ: 3 ತಿಂಗಳ ನಂತರ ಕಾಳಿಚರಣ್ ಮಹಾರಾಜ್‍ಗೆ ಸಿಕ್ತು ಜಾಮೀನು