ಅಮರಾವತಿ: ಅಮರಾವತಿ ಮೂಲದ ರಸಾಯನಶಾಸ್ತ್ರಜ್ಞ ಉಮೇಶ್ ಕೊಲ್ಹೆ ಅವರ ಹತ್ಯೆ ನಡೆಸಿದ ಎಲ್ಲಾ 7 ಆರೋಪಿಗಳನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ವಶಕ್ಕೆ ತೆಗೆದುಕೊಂಡಿದೆ.
ಅಮರಾವತಿ ನ್ಯಾಯಾಲಯಕ್ಕೆ ಹಾಜರುಪಡಿಸಿದ ಬಳಿಕ ಸೋಮವಾರ ಎಲ್ಲಾ ಆರೋಪಿಗಳನ್ನು ಎನ್‌ಐಎ ಕಸ್ಟಡಿಗೆ ತೆಗೆದುಕೊಂಡಿದೆ. ಆರೋಪಿಗಳನ್ನು ಜುಲೈ 8 ಅಥವಾ ಅದಕ್ಕೂ ಮೊದಲು ಎನ್‌ಐಎ ಮುಂಬೈ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಹಿಂದೂ ದೇವರ ಫೋಟೋವಿದ್ದ ಪೇಪರ್‌ನಲ್ಲಿ ಕೋಳಿ ಮಾಂಸ ಮಾರಾಟ – ವ್ಯಕ್ತಿ ಅರೆಸ್ಟ್
ಮುದ್ದಸರ್ ಅಹ್ಮದ್(22), ಶಾರುಖ್ ಪಠಾಣ್(25), ಅಬ್ದುಲ್ ತೌಫಿಕ್(24), ಶೋಯೆಬ್ ಖಾನ್(22), ಅತೀಬ್ ರಶೀದ್ (22), ಯೂಸುಫ್ ಖಾನ್ (32) ಹಾಗೂ ಹತ್ಯೆಯ ಮಾಸ್ಟರ್ ಮೈಂಡ್ ಶೇಖ್ ಇರ್ಫಾನ್ ಶೇಖ್ ರಹೀಮ್ ಬಂಧಿತ ಆರೋಪಿಗಳು. ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಶಂಕಿತ ಶಮೀಮ್ ಅಹ್ಮದ್‌ಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಇದನ್ನೂ ಓದಿ: ಹುಟ್ಟುಹಬ್ಬ ಆಚರಣೆ- ಶಾಲಾ ವಿದ್ಯಾರ್ಥಿಗಳ ಗುಂಪಿನ ನಡುವೆ ಬಾಂಬ್ ದಾಳಿ
ಪ್ರವಾದಿ ಮೊಹಮ್ಮದ್ ಕುರಿತು ಅವಹೇಳನ ಮಾಡಿದ ಮಾಜಿ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಬೆಂಬಲಿಸಿ ಮಾಡಲಾಗಿದ್ದ ಸಾಮಾಜಿಕ ಮಾಧ್ಯಮದ ಪೋಸ್ಟ್ ಒಂದನ್ನು ಉಮೇಶ್ ಕೊಲ್ಹೆ ಬೆಂಬಲಿಸಿದ್ದರು. ಈ ಹಿನ್ನೆಲೆ ಜೂನ್ 21 ರಂದು ರಾತ್ರಿ 10 ಗಂಟೆಯ ವೇಳೆ ಮೂವರು ದುಷ್ಕರ್ಮಿಗಳ ತಂಡ ಉಮೇಶ್ ಮೇಲೆ ಚಾಕುವಿನಿಂದ ಹಲ್ಲೆ ಮಾಡಿದ್ದರು. ಹಲ್ಲೆ ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಿಸದೇ ಅವರು ಸಾವನ್ನಪ್ಪಿದ್ದರು.