ನೈಸ್ ರಸ್ತೆ ಅಪಘಾತ – ಗಾಯಗೊಂಡಿದ್ದ ಇನ್ನೊಂದು ಮಗು ಆಸ್ಪತ್ರೆಯಲ್ಲಿ ಸಾವು

Public TV
3 Min Read
Nice Road Accident 1 1

ಬೆಂಗಳೂರು: ನೈಸ್ ರಸ್ತೆಯಲ್ಲಿ (Nice Road) ನಡೆದ ಕಾರು (Car) ಮತ್ತು ಲಾರಿ (Lorry) ಭೀಕರ ರಸ್ತೆ ಅಪಘಾತ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಾಯಿ ಹಾಗೂ ಮಗು ಕಾರಿನಲ್ಲೇ ಸಜೀವ ದಹನವಾಗಿದ್ದಾರೆ. ಘಟನೆಯಿಂದ ಗಂಭೀರ ಗಾಯಗೊಂಡಿದ್ದ ತಂದೆ ಹಾಗೂ ಇನ್ನೊಂದು ಮಗುವನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಿಸದೇ ಮಗು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದೆ.

ಬೆಂಗಳೂರು ಹೊರವಲಯದ ನೈಸ್ ರಸ್ತೆಯಲ್ಲಿ ಕಾರು ಲಾರಿಗೆ ಡಿಕ್ಕಿಯಾಗಿ ರಸ್ತೆ ಪಕ್ಕದ ಡಿವೈಡರ್‌ಗೆ ಡಿಕ್ಕಿಯಾಗಿತ್ತು. ಪರಿಣಾಮ, ಕಾರಿಗೆ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ ತಾಯಿ ಸಿಂಧು (31), ಮಗಳು ಕುಷಾವಿ (2) ಕಾರಿನಲ್ಲೇ ಸಜೀವ ದಹನವಾಗಿದ್ದರು. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ತಂದೆ ಮಹೇಂದ್ರನ್ ಮತ್ತು ಇನ್ನೊಂದು ಮಗು ಪ್ರಣವಿಯನ್ನು (6) ಉತ್ತರ ಹಳ್ಳಿಯ ಸಂತೋಷ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇದೀಗ ಚಿಕಿತ್ಸೆ ಫಲಿಸದೇ ಮಗು ಪ್ರಣವಿ ಕೂಡಾ ಸಾವನ್ನಪ್ಪಿದ್ದಾಳೆ. ತಂದೆ ಮಹೇಂದ್ರನ್‌ಗೆ ಅದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಇದನ್ನೂ ಓದಿ: ನೈಸ್ ರಸ್ತೆಯಲ್ಲಿ ಕಾರು, ಲಾರಿ ನಡುವೆ ಭೀಕರ ಅಪಘಾತ – ತಾಯಿ, ಮಗು ಸ್ಥಳದಲ್ಲೇ ಸಾವು

Nice Road Accident 1

ಅಪಘಾತವಾದ (Accident) ವೇಳೆ ಕಾರಿನಲ್ಲಿದ್ದ ಪತಿ ಮಹೇಂದ್ರನ್ ಒಂದು ಮಗುವನ್ನು ಕಾರಿನಿಂದ ಹೊರಗೆ ಎಳೆದುಕೊಂಡಿದ್ದಾರೆ. ಆದರೆ ಪತ್ನಿ ಸಿಂಧು ಹಾಗೂ ಮತ್ತೊಂದು ಮಗುವಿನ ರಕ್ಷಣೆ ಸಾಧ್ಯವಾಗದೇ ಇಬ್ಬರೂ ಬೆಂಕಿಗೆ ಆಹುತಿಯಾಗಿದ್ದಾರೆ. ನಿದ್ರೆ ಮಂಪರಿನಲ್ಲಿ ಅಪಘಾತ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸುತ್ತಿದ್ದಾರೆ. ಈ ಕುರಿತು ಸ್ಥಳದಲ್ಲಿ ಹಿರಿಯ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಇರುವುದೊಂದೇ ಸನಾತನ ಧರ್ಮ, ಉಳಿದೆಲ್ಲವೂ ಪಂಥಗಳು: ಯೋಗಿ

ಕಾರು ಮೈಸೂರು ರಸ್ತೆ ಕಡೆಯಿಂದ ಕನಕಪುರದ ಕಡೆಗೆ ಹೋಗುತ್ತಿದ್ದು, ಸೋಂಪುರ ಜಂಕ್ಷನ್ ಬಳಿ ಕಂಟ್ರೋಲ್ ತಪ್ಪಿ ಡಿವೈಡರ್ ದಾಟಿ ಎದುರು ರಸ್ತೆಗೆ ಹೋಗಿ ಪಲ್ಟಿಯಾಗಿದೆ. ಈ ವೇಳೆ ಕನಕಪುರ ರಸ್ತೆ ಕಡೆಯಿಂದ ಮೈಸೂರು ರಸ್ತೆ ಕಡೆಗೆ ಎದುರು ರಸ್ತೆಯಲ್ಲಿ ಬರುತ್ತಿದ್ದ ಲಾರಿ ಚಾಲಕ ಕಾರು ರಸ್ತೆಗೆ ಬಂದಿದ್ದನ್ನು ನೋಡಿ ಗಾಬರಿಗೊಂಡು ಲಾರಿಯನ್ನು ಎಡಕ್ಕೆ ತೆಗೆದುಕೊಂಡ ಪರಿಣಾಮ ಲಾರಿ ಪಲ್ಟಿ ಹೊಡೆದಿದೆ. ಲಾರಿ ಕೂಡ ಸಂಪೂರ್ಣ ಜಖಂ ಆಗಿದೆ. ಸುಟ್ಟು ಕರಕಲಾದ ಕಾರನ್ನು ತಲಘಟ್ಟಪುರ ಸಂಚಾರಿ ಪೊಲೀಸ್ ಠಾಣೆಗೆ ಪೊಲೀಸರು ಶಿಫ್ಟ್ ಮಾಡಿದ್ದಾರೆ. ಇದನ್ನೂ ಓದಿ: ಬೆಂಗಳೂರಿನ ನಡುರಸ್ತೆಯಲ್ಲಿ ಹೊತ್ತಿ ಉರಿದ ಬೃಹತ್ ಗಾತ್ರದ ಕ್ರೇನ್

ಲಾರಿ ಪಲ್ಟಿಯಾದ ಪರಿಣಾಮ ಲಾರಿ ಚಾಲಕ ಭಾರತಿ ರಾಜನ್‌ಗೂ ಗಾಯಗಳಾಗಿವೆ. ಸ್ಥಳಕ್ಕೆ ದಕ್ಷಿಣ ವಿಭಾಗದ ಡಿಸಿಪಿ ಶಿವಪ್ರಕಾಶ್ ದೇವರಾಜ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮಂಗಳವಾರ ಬೆಳಗಿನ ಜಾವ ಈ ಘಟನೆ ನಡೆದಿದೆ. ಮಹೇಂದ್ರನ್ ಟಾಟ ನೆಕ್ಸಾನ್ ಕಾರು ಚಾಲನೆ ಮಾಡುತ್ತಿದ್ದರು. ಮೈಸೂರು ರೋಡ್‌ನಿಂದ ಕನಕಪುರದ ಕಡೆಗೆ ಹೋಗುತ್ತಿದ್ದ ಸಂದರ್ಭ ನಿಯಂತ್ರಣ ತಪ್ಪಿ ಎದುರು ರಸ್ತೆಗೆ ಬಂದು ಕಾರು ಪಲ್ಟಿಯಾಗಿದೆ. ಘಟನೆಯಲ್ಲಿ ಮೊದಲು ಇಬ್ಬರು, ಈಗ ಒಬ್ಬರು ಸಾವನ್ನಪ್ಪಿದ್ದಾರೆ. ಓವರ್ ಸ್ಪೀಡ್ ಆಗಿ ಬಂದಿರೋದೇ ಅಪಘಾತಕ್ಕೆ ಕಾರಣ ಎನ್ನುವುದು ಗೊತ್ತಾಗುತ್ತಿದೆ ಎಂದು ತಿಳಿಸಿದ್ದಾರೆ.  ಇದನ್ನೂ ಓದಿ: ಶಿವಮೊಗ್ಗದಲ್ಲಿ ಸೆಕ್ಷನ್ 144 ಜಾರಿ – ವರ್ತಕರು, ಬಿಜೆಪಿ ಮುಖಂಡರು ವಿರೋಧ

ಕಾರಿನಲ್ಲಿದ್ದವರು ರಾಮಮೂರ್ತಿ ನಗರದ ಮನೆಗೆ ಹೋಗುತ್ತಿದ್ದರು. ಸರ್ಜಾಪುರದ ಕಡೆಯಿಂದ ರಾಮಮೂರ್ತಿಗೆ ಬಾಡಿಗೆ ತೆಗೆದುಕೊಂಡು ಹೋಗುತ್ತಿದ್ದರು. ಸೋಮವಾರ ತುಮಕೂರು ರಸ್ತೆಯ ಐಕಿಯಾ ಫರ್ನಿಚರ್‌ಗೆ ಹೋಗಿದ್ದ ಫ್ಯಾಮಿಲಿ ರಾತ್ರಿ ಊಟ ಮಾಡಿಕೊಂಡು ನೈಟ್‌ಔಟ್ ಹೊರಟಿದ್ದರು. ತುಮಕೂರು ರಸ್ತೆಯಿಂದ ಸರ್ಜಾಪುರ ರಸ್ತೆ ಮೂಲಕ ರಾಮಮೂರ್ತಿ ನಗರಕ್ಕೆ ಹೊರಟಿದ್ದರು. ಅತಿಯಾದ ವೇಗ ಅಥವಾ ಕಾರಿನಲ್ಲಿದ್ದ ನೀರಿನ ಬಾಟಲ್ ಬ್ರೇಕ್ ಹತ್ತಿರ ಸಿಲುಕಿಕೊಂಡು ಘಟನೆ ನಡೆದಿರುವ ಶಂಕೆ ಇದೆ ಎಂದು ಡಿಸಿಪಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ ಗಲಭೆಗೆ ಟ್ವಿಸ್ಟ್ – ರಾಗಿಗುಡ್ಡದ ಗಲಾಟೆ ಪೂರ್ವನಿಯೋಜಿತ?

Web Stories

Share This Article