ನಟ ಧರ್ಮ ಮತ್ತು ಜ್ಯೋತಿ ರೈ ನಟನೆಯ ‘ನೈಸ್ ರೋಡ್’ (Nice Road Film) ಕನ್ನಡ ಚಿತ್ರಕ್ಕೆ ನೈಸ್ ರೋಡ್ ಕಂಪನಿಯವರಿಂದಲೆ ಕಂಟಕ ಎದುರಾಗಿದೆ. ‘ನೈಸ್ ರೋಡ್’ ಎಂಬ ಹೆಸರನ್ನು ಬದಲಾಯಿಸದೆ ಇದ್ದರೆ ಕಂಪ್ಲೆಂಟ್ ಕೊಡುವುದಾಗಿ ಈ ಸಿನಿಮಾದ ನಿರ್ಮಾಪಕರಾದ ಗೋಪಾಲ್ ಹಳೆಪಾಳ್ಯ ಅವರಿಗೆ ನೋಟಿಸ್ ನೀಡಿದ್ದಾರೆ.
Advertisement
ಸಿನಿಮಾ ಈಗ ರಿಲೀಸ್ಗೆ ಸಿದ್ಧವಾಗಿದ್ದು, ಏಲ್ಲಾ ಕಡೆ ‘ನೈಸ್ ರೋಡ್’ ಎಂಬ ಹೆಸರಿನಿಂದಲೇ ಪ್ರಚಾರವಾಗಿದೆ. ಈ ಹಂತದಲ್ಲಿ ಹೆಸರು ಬದಲಾಯಿಸಲು ತುಂಬಾ ಖರ್ಚು ವೆಚ್ಚಗಳಾಗುವುದು ಅಲ್ಲದೆ, ತುಂಬಾ ಸಮಯವು ಬೇಕಾಗುತ್ತದೆ. ಇದನ್ನೂ ಓದಿ:ಶಾರುಖ್ ಖಾನ್ ಕಣ್ಣಿಗೆ ಗಾಯ- ಸರ್ಜರಿಗಾಗಿ ವಿದೇಶಕ್ಕೆ ಹೊರಟ ‘ಜವಾನ್’ ನಟ
Advertisement
Advertisement
ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲಿ ನೈಸ್ ರೋಡ್ ಎಂಬ ಟೈಟಲ್ ರಿಜಿಸ್ಟರ್ ಆಗಿದ್ದು ಸಿನಿಮಾ ಚಿತ್ರೀಕರಣ ಮುಗಿಸಿ ಈಗಾಗಲೇ ಸಿನಿಮಾ ಸೆನ್ಸಾರ್ ಆಗಿದ್ದು ಸೆನ್ಸಾರ್ ಮಂಡಳಿಯು ಕೂಡ ಸಿನಿಮಾ ನೋಡಿ ನೈಸ್ ರೋಡಿಗೂ ಈ ಸಿನಿಮಾಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ನಿರ್ಧರಿಸಿ U/A ಪ್ರಮಾಣ ಪತ್ರ ಕೊಟ್ಟಿದಾರೆ.
Advertisement
ಆದರೆ ಈಗ ನೈಸ್ ರೋಡ್ ಕಂಪನಿಯವರು ಏಕಏಕಿ ಬಂದು ಹೆಸರು ಬದಲಾಯಿಸಬೇಕೆಂದು ನೋಟೀಸ್ ನೀಡಿದ್ದಾರೆ. ಈ ವಿಷಯಕ್ಕೆ ಸಂಬಂಧಪಟ್ಟಂತೆ ನಿರ್ಮಾಪಕ ಗೋಪಾಲ್ ಹಳೆಪಾಳ್ಯ ಮತ್ತು ಈ ಚಿತ್ರಕ್ಕೆ ಫೈನಾನ್ಸ್ ಮಾಡಿರುವ ಏನ್ ರಾಜೂಗೌಡ ಮತ್ತು ಈ ಸಿನಿಮಾದ ನಟರಾದ ಧರ್ಮ ಅವರ ಜೊತೆ ಮಾತಾಡಿ ಒಂದು ನಿರ್ಧಾರಕ್ಕೆ ಬರುತ್ತೇನೆ ಎನ್ನುತ್ತಿದ್ದಾರೆ. ಮುಂದೆ ಸಿನಿಮಾ ತಂಡದವರು ಹೆಸರು ಬದಲಾಯಿಸುತ್ತಾರೋ ಇಲ್ಲ ಇದೆ ಹೆಸರಿನಲ್ಲೆ ಸಿನಿಮಾ ಬಿಡುಗಡೆ ಮಾಡೊತರೋ ಕಾದುನೋಡಬೇಕಿದೆ.