ಸುರಮ್ ಮೂವೀಸ್ ನಿರ್ಮಾಣದ ಯುವ ನಟ ಪ್ರವೀರ್ ಶೆಟ್ಟಿ (Praveer Shetty) ನಾಯಕನಾಗಿ ನಟಿಸಿರುವ ‘ನಿದ್ರಾದೇವಿ Next Door’ (Nidradevi Next Door) ಸಿನಿಮಾದ ಚಿತ್ರೀಕರಣ ಮುಕ್ತಾಯಗೊಂಡಿದೆ. ರಾಜರಾಜೇಶ್ವರಿ ನಗರದಲ್ಲಿ ಕೊನೆಯ ಹಂತದ ಶೂಟಿಂಗ್ ಕಂಪ್ಲೀಟ್ ಮಾಡಿ ಕುಂಬಳಕಾಯಿ ಹೊಡೆಯಲಾಯಿತು. ಈ ವೇಳೆ, ಚಿತ್ರದ ಎಲ್ಲಾ ಕಲಾವಿದರು, ತಂತ್ರಜ್ಞರು ಹಾಗೂ ಕನ್ನಡ ಪರ ಹೋರಾಟಗಾರ ಪ್ರವೀಣ್ ಶೆಟ್ಟಿ ಕೂಡ ಭಾಗಿಯಾಗಿದ್ದರು.
ಈ ಚಿತ್ರದಲ್ಲಿ ಪ್ರವೀರ್ ಶೆಟ್ಟಿ, ರಿಷಿಕಾ ನಾಯಕ್ ಜೋಡಿಯಾಗಿ ಕಾಣಿಸಿಕೊಂಡಿದ್ದು, ‘ಬಿಗ್ ಬಾಸ್’ ಖ್ಯಾತಿಯ ಶೈನ್ ಶೆಟ್ಟಿ (Shine Shetty) ಹಾಗೂ ಶ್ರುತಿ ಹರಿಹರನ್ (Sruthi Hariharan) ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಸುಧಾರಾಣಿ, ಶ್ರೀವತ್ಸ, ಐಶ್ವರ್ಯಾ ಗೌಡ , ಅನೂಪ್, ಮಾಸ್ಟರ್ ಸುಜಯ್ ರಾಮ್, ಕಾರ್ತಿಕ್ ಪತ್ತಾರ್ ಮತ್ತು ಅನುರಾಗ್ ಪಾಟೀಲ್ ಸೇರಿದಂತೆ ಇತರರು ತಾರಾಬಳಗದಲ್ಲಿದ್ದಾರೆ. ಇದನ್ನೂ ಓದಿ:ದೀಪಿಕಾ ದಾಸ್ ನಟನೆಯ ‘ಪಾರು ಪಾರ್ವತಿ’ ಸಾಂಗ್ ರಿಲೀಸ್

ಚಿತ್ರತಂಡ ಕಳೆದ ಮಾರ್ಚ್ ತಿಂಗಳಲ್ಲಿ ಈ ವಿಭಿನ್ನ ಟೈಟಲ್‌ನೊಂದಿಗೆ ಬೆಂಗಳೂರಿನ ಬಸವನಗುಡಿ ದೊಡ್ಡ ಗಣಪತಿ ದೇವಸ್ಥಾನದಲ್ಲಿ ಚಿತ್ರದ ಮುಹೂರ್ತ ಸಮಾರಂಭ ನಡೆಸಿದರು. ಕ್ರೇಜಿಸ್ಟಾರ್ ರವಿಚಂದ್ರನ್ ಅವರು ನಾಯಕ ಪ್ರವೀರ್ ಶೆಟ್ಟಿಯ ಹೊಸ ಪ್ರಯತ್ನಕ್ಕೆ ಸಾಥ್ ನೀಡಿದರು. ಈ ಚಿತ್ರಕ್ಕೆ ಕ್ಲಾಪ್ ಮಾಡಿದ ʻಕನಸುಗಾರʼ ಇಡೀ ತಂಡಕ್ಕೆ ಶುಭ ಹಾರೈಸಿದ್ದರು. ಈ ಚಿತ್ರಕ್ಕೆ ನಕುಲ್ ಅಭ್ಯಂಕರ್ ಅವರ ಸಂಗೀತ, ಅಜಯ್ ಕುಲಕರ್ಣಿ ಅವರ ಛಾಯಾಗ್ರಹಣ, ಊಲಾಸ್ ಹೈದೂರ್ ಅವರ ಪ್ರೊಡಕ್ಷನ್ ಡಿಸೈನ್ ಅರ್ಜುನ್ ರಾಜ್ ಅವರ ಸಾಹಸ ನಿರ್ದೇಶನ (ಯುವ ಸಿನಿಮಾ ಖ್ಯಾತಿ) ಮತ್ತು ಹೇಮಂತ್ ಕುಮಾರ್ ಡಿ ಅವರ ಸಂಕಲನವಿದೆ.


