– ಮೆಡಿಕಲ್ & ಪ್ರವಾಸಿ ವೀಸಾದಲ್ಲಿ ಬೆಂಗಳೂರಿಗೆ ಬಂದಿದ್ದ ಆರೋಪಿಗಳು
– ವಿದ್ಯಾರ್ಥಿಗಳು, ಐಟಿ ಉದ್ಯೋಗಿಗಳೇ ಇವರ ಟಾರ್ಗೆಟ್
ಬೆಂಗಳೂರು: ಒಂದು ಕಡೆ ಮಾದಕದ್ರವ್ಯ ಮುಕ್ತ ಕರ್ನಾಟಕವನ್ನ ರೂಪಿಸುವ ಗುರಿಯೊಂದಿಗೆ ಸರ್ಕಾರ ಮುಂದಡಿ ಇಟ್ಟಿದೆ. ಅದಕ್ಕಾಗಿ ನಿರಂತರ ಕಠಿಣ ಕ್ರಮಗಳನ್ನೂ ಕೈಗೊಳ್ಳಲಾಗುತ್ತಿದೆ. ಹೀಗಿದ್ದೂ ಭಾರೀ ಪ್ರಮಾಣದ ಡ್ರಗ್ಸ್ ಬೆಂಗಳೂರು ನಗರ (Bengaluru City) ಪ್ರವೇಶಿಸಿರುವುದು ಆತಂಕ ಮೂಡಿಸಿದೆ.
ಲಗೇಜ್ ಬ್ಯಾಗ್‌ನಲ್ಲಿ ಅಡಗಿಸಿಟ್ಟುಕೊಂಡು ಡ್ರಗ್ಸ್ (Drugs) ತರುತ್ತಿದ್ದ ಮೂವರು ನೈಜೀರಿಯಾ ಪ್ರಜೆಗಳನ್ನು ಸಿಸಿಬಿ ಪೊಲೀಸರು (CCB Police) ಬಂಧಿಸಿದ್ದಾರೆ. ಇದನ್ನೂ ಓದಿ: ಕಿಂಚಿತ್ ಅಮಲು ಬೆರೆಸಿದರೂ ಗುಟ್ಕಾ, ಪಾನ್ ಮಸಾಲಾ ಕಂಪ್ಲೀಟ್ ಬ್ಯಾನ್: ಡಿಕೆಶಿ ಎಚ್ಚರಿಕೆ

ಬಂಧಿತರಿಂದ ಬರೋಬ್ಬರಿ 21 ಕೋಟಿ ರೂ. ಮೌಲ್ಯದ 10 ಕೆಜಿ 270 ಗ್ರಾಂ ನಷ್ಟು ಎಂಡಿಎಂಎ ಕ್ರಿಸ್ಟಲ್, 4 ಮೊಬೈಲ್ ಫೋನ್, 2 ದ್ವಿಚಕ್ರ ವಾಹನ ಹಾಗೂ ಕೃತ್ಯಕ್ಕೆ ಬಳಸಿದ್ದ ಇತರ ವಸ್ತುಗಳನ್ನ ಜಪ್ತಿ ಮಾಡಲಾಗಿದೆ.
ವಿದ್ಯಾರ್ಥಿಗಳು, ಐಟಿ ಉದ್ಯೋಗಿಗಳೇ ಟಾರ್ಗೆಟ್
ಬಂಧಿತ ಆರೋಪಿಗಳು ಮಾದನಾಯಕನಹಳ್ಳಿ ಠಾಣಾ ವ್ಯಾಪ್ತಿಯ ಬೈಲಕೊನೆಹಳ್ಳಿಯಲ್ಲಿ ಮನೆ ಬಾಡಿಗೆ ಪಡೆದು ವಾಸವಿದ್ದರು. ವಿದ್ಯಾರ್ಥಿಗಳು, ಐಟಿ ಉದ್ಯೋಗಿಗಳಿಗೆ ಮಾರಾಟ ಮಾಡುತ್ತಿದ್ದರು. ಇದನ್ನೂ ಓದಿ: ನಮ್ಮ ಪ್ರಶ್ನೆಗಳಿಗೆ ಚುನಾವಣಾ ಆಯೋಗ ಉತ್ತರ ಕೊಟ್ಟು ಎಸ್‌ಐಆರ್ ಮಾಡಲಿ: ಪ್ರಿಯಾಂಕ್ ಖರ್ಗೆ ಆಗ್ರಹ

ಮೆಡಿಕಲ್ ಮತ್ತು ಟೂರಿಸ್ಟ್ ವೀಸಾದಲ್ಲಿ ಬೆಂಗಳೂರಿಗೆ ಬಂದಿದ್ದ ಆರೋಪಿಗಳು ನೈಜೀರಿಯಾದಿಂದ ಬೇರೆ ಪೆಡ್ಲರ್ ಗಳಿಂದ ಎಂಡಿಎಂಎ ಕ್ರಿಸ್ಟಲ್ ಬೆಂಗಳೂರಿಗೆ ತರಿಸಿಕೊಳ್ತಿದ್ರು. ಬಾಡಿಗೆ ಮನೆಯಲ್ಲಿ ಎಲ್ಲಾ ತಯಾರು ಮಾಡಿಕೊಂಡು, ವಿದ್ಯಾರ್ಥಿಗಳು ಹಾಗೂ ಐಟಿ ಉದ್ಯೋಗಿಗಳಿಗೆ ಮಾರಾಟ ಮಾಡುತ್ತಿದ್ದರು. ವೀಸಾ ಅವಧಿ ಮುಗಿದಿದ್ದರೂ ಬೆಂಗಳೂರಿನಲ್ಲಿ ಅನಧಿಕೃತವಾಗಿ ವಾಸವಾಗಿದ್ದರು ಎಂದು ತನಿಖೆ ವೇಳೆ ಗೊತ್ತಾಗಿದೆ.
ಸದ್ಯ ಆರೋಪಿಗಳನ್ನ ಬಂದಿಸಿರುವ ಸಿಸಿಬಿ ಪೊಲೀಸರು, ಮುಂದಿನ ತನಿಖೆ ಕೈಗೊಂಡಿದ್ದಾರೆ. ಇದನ್ನೂ ಓದಿ: ಬಿಡದಿ ಟೌನ್‌ಶಿಪ್ | ಭೂಮಿ ಕೊಡಿ ಅಂತ ನಾವು ಯಾರಿಗೂ ಬಲವಂತ ಮಾಡಿಲ್ಲ: ಪ್ರಿಯಾಂಕ್ ಖರ್ಗೆ
