ತಿರುವನಂತಪುರಂ: ಕೊರೊನಾ ರೂಪಾಂತರ ತಳಿ ಓಮಿಕ್ರಾನ್ ಭೀತಿಯಿಂದಾಗಿ ಕೇರಳದಲ್ಲಿ ಡಿಸೆಂಬರ್ 30 ರಿಂದ ಜನವರಿ 2ರವರೆಗೂ ನೈಟ್ ಕರ್ಫ್ಯೂ ವಿಧಿಸಲಾಗಿದೆ.
ರಾಜ್ಯದಲ್ಲಿ ಕೊರೊನಾ ರೂಪಾಂತರ ತಳಿ ಓಮಿಕ್ರಾನ್ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆ ಸಭೆ ನಡೆಸಿ ಈ ಕುರಿತಂತೆ ಕೇರಳ ಸರ್ಕಾರ ನೈಟ್ ಕರ್ಫ್ಯೂಗೊಳಿಸುವ ಬಗ್ಗೆ ನಿರ್ಧಾರ ಕೈಗೊಂಡಿದೆ. ಅದರಂತೆ ಡಿಸೆಂಬರ್ 31ರಿಂದ ಬಾರ್‌ಗಳು, ಹೋಟೆಲ್‍ಗಳು, ಕ್ಲಬ್‍ಗಳು ಮತ್ತು ರೆಸ್ಟೋರೆಂಟ್ ಸೇರಿದಂತೆ ಯಾವುದೇ ಅಂಗಡಿಗಳು ರಾತ್ರಿ 10 ಗಂಟೆಯ ಬಳಿಕ ಕಾರ್ಯನಿರ್ವಹಿಸುವಂತಿಲ್ಲ. ಇದನ್ನೂ ಓದಿ: ಸ್ಥಳೀಯಾಡಳಿತಗಳ ಚುನಾವಣೆ ಯಶಸ್ವಿ – ಡಿ.30ಕ್ಕೆ ಫಲಿತಾಂಶ
ಸಮುದ್ರ, ಶಾಪಿಂಗ್ ಮಾಲ್, ಸಾರ್ವಜನಿಕ ಉದ್ಯಾನವನ ಸೇರಿದಂತೆ ಇತರ ಸ್ಥಳಗಳಲ್ಲಿ ಕಟ್ಟುನಿಟ್ಟಿನ ನಿಯಮಗಳನ್ನು ಜಾರಿಗೊಳಿಸಲಾಗಿದ್ದು, ಸಾರ್ವಜನಿಕ ಪ್ರವೇಶವನ್ನು ನಿಷೇಧಿಸಲಾಗಿದೆ. ಇದನ್ನೂ ಓದಿ: ಮನೆಯಲ್ಲಿ ಬೆಂಕಿ ಹಚ್ಚಿಕೊಂಡು ವೈದ್ಯ ಆತ್ಮಹತ್ಯೆ



