ಸಿನಿಮಾ ಮತ್ತು ರಾಜಕಾರಣದ ಮಧ್ಯೆ ಕೊಂಚ ಬಿಡುವು ತಗೆದುಕೊಂಡು ಮಗನೊಂದಿಗೆ ಟ್ರೀಪ್ ಗೆ ಹೋಗಿದ್ದಾರೆ ನಟ, ಜೆಡಿಎಸ್ ಯುವ ಮೋರ್ಚಾ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ. ಬೀಚ್ ವೊಂದರಲ್ಲಿ ಮಗನನ್ನು ಮೇಲಕ್ಕೆ ಹಿಡಿದುಕೊಂಡಿರುವ ಫೋಟೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ನಿಖಿಲ್, ಆ ಫೋಟೋಗೆ ‘ಲವ್ ಯೂ ಮಗನೆ’ ಎಂದು ಕ್ಯಾಪ್ಷನ್ ಕೊಟ್ಟಿದ್ದಾರೆ. ಇದನ್ನೂ ಓದಿ : ಜೇಮ್ಸ್ ಟೀಮ್ ಮೊದಲೇ ಈ ಕೆಲಸ ಮಾಡಬೇಕಿತ್ತು : ನಟ ಶಿವರಾಜ್ ಕುಮಾರ್
Advertisement
ಸದ್ಯ ನಿಖಿಲ್ ಕುಮಾರ್ ಸ್ವಾಮಿ ಎರಡು ದೋಣಿಯ ಮೇಲೆ ಪಯಣ ಮಾಡುತ್ತಿದ್ದಾರೆ. ಒಂದು ಕಡೆ ಅವರ ಹೊಸ ಸಿನಿಮಾ ಒಡೆಯರ್ ಘೋಷಣೆಯಾಗಿದೆ. ಈ ಕಡೆ ಪಕ್ಷ ಸಂಘಟಿಸುವ ಹೊಣೆಯನ್ನು ಹೊತ್ತಿದ್ದಾರೆ. ಹಾಗಾಗಿ ಎರಡನ್ನೂ ಬ್ಯಾಲೆನ್ಸ್ ಮಾಡಿಕೊಂಡು ಹೋಗುತ್ತಿದ್ದಾರೆ. ಒಂದೂವರೆ ವರ್ಷದಲ್ಲಿ ಕರ್ನಾಟಕದಲ್ಲಿ ಚುನಾವಣೆ ನಡೆಯಲಿದೆ. ಹಾಗಾಗಿ ನಿಖಿಲ್ ಗುರುತರ ಜವಾಬ್ದಾರಿಯನ್ನು ಹೊತ್ತುಕೊಂಡಿದ್ದಾರೆ. ಇದನ್ನೂ ಓದಿ : ಜೋಗಿ ಪ್ರೇಮ್ ಹೊಸ ಸಿನಿಮಾ ಘೋಷಣೆ : ಧ್ರುವ ಸರ್ಜಾ ಹೀರೋ, ಏ.24 ಮುಹೂರ್ತ
Advertisement
Advertisement
ನಿಖಿಲ್ ಅವರ ಹುಟ್ಟು ಹಬ್ಬದ ದಿನದಂದು ಹೊಸ ಸಿನಿಮಾ ಘೋಷಣೆಯಾಗಿದೆ. ಫಸ್ಟ್ ಲುಕ್ ಕೂಡ ಬಿಡುಗಡೆ ಮಾಡಿದೆ ಚಿತ್ರತಂಡ. ಈ ಸಿನಿಮಾ ಕೂಡ ಅದ್ದೂರಿಯಾಗಿ ಮೂಡಿ ಬರುವುದರಿಂದ, ಚಿತ್ರಕ್ಕೂ ಅವರು ಟೈಮ್ ಕೊಡಬೇಕಿದೆ. ಈ ಎಲ್ಲದರ ಮಧ್ಯೆ ಕುಟುಂಬವನ್ನು ಪ್ರವಾಸಕ್ಕೆ ಕರೆದುಕೊಂಡು ಹೋಗಿದ್ದಾರೆ ನಿಖಿಲ್. ಇದನ್ನೂ ಓದಿ : ಭಾವಿ ಪತಿಯ ತಂದೆ ನಿಧನ: ನಟಿ ಕಾವ್ಯ ಶಾ ಮದುವೆ ಮುಂದೂಡಿಕೆ
Advertisement
ನಿಖಿಲ್ ರಾಜಕಾರಣ ಮತ್ತು ಸಿನಿಮಾ ರಂಗ ಎರಡರಲ್ಲೂ ಸೆಣಸಬೇಕಿದೆ. ಈ ಬಾರಿಯೂ ಅವರು ರಾಜಕೀಯ ಅಖಾಡಕ್ಕೆ ಇಳಿಯಲಿದ್ದಾರೆ ಎನ್ನುವ ಸುದ್ದಿಯಿದೆ. ವಿಧಾನ ಸಭೆ ಚುನಾವಣೆಗೆ ಅವರು ಸ್ಪರ್ಧಿಸುತ್ತಿದ್ದಾರೆ. ಜೊತೆಗೆ ಸಿನಿಮಾ ರಂಗದಲ್ಲೂ ಸಾಕಷ್ಟು ಪೈಪೋಟಿ ಇದೆ. ಎರಡರಲ್ಲೂ ಅವರು ಸಖತ್ ಫೈಟ್ ಮಾಡಬೇಕು. ಈ ಎಲ್ಲ ಟೆನ್ಷನ್ ಮಧ್ಯೆ ಜಾಲಿಯಾಗಿ ಮಗನೊಂದಿಗೆ ಸಮಯ ಕಳೆಯುತ್ತಿದ್ದಾರೆ ನಿಖಿಲ್ ಕುಮಾರಸ್ವಾಮಿ.