113 ಕೋಟಿ ಆಸ್ತಿ ಒಡೆಯ ನಿಖಿಲ್‌ ಕುಮಾರಸ್ವಾಮಿ – ಪುತ್ರನ ಹೆಸರಲ್ಲಿದೆ 11 ಲಕ್ಷ

Public TV
1 Min Read
nikhil kumaraswamy

– ಮಾಜಿ ಸಿಎಂ, ಕೇಂದ್ರ ಸಚಿವರ ಪುತ್ರನಿಗಿದೆ 70 ಕೋಟಿ ಸಾಲ

ರಾಮನಗರ: ಚನ್ನಪಟ್ಟಣ ಉಪಚುನಾವಣೆಯ (Channapatna Bypoll) ‘ಮೈತ್ರಿ’ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ (Nikhil Kumaraswamy) ಅವರು ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದ್ದು, ತಮ್ಮ ಆಸ್ತಿ ವಿವರವನ್ನು ಘೋಷಿಸಿಕೊಂಡಿದ್ದಾರೆ.

ಬಿಬಿಎ ಪದವೀಧರನಾಗಿರುವ ನಿಖಿಲ್‌ ಬರೋಬ್ಬರಿ 113 ಕೋಟಿ ಆಸ್ತಿ ಒಡೆಯ. ಒಟ್ಟು 78.15 ಕೋಟಿ ಮೌಲ್ಯದ ಚರಾಸ್ತಿ, 29.34ಕೋಟಿ ಮೌಲ್ಯದ ಸ್ಥಿರಾಸ್ತಿ ಹೊಂದಿದ್ದಾರೆ. ಪತ್ನಿ ರೇವತಿ ನಿಖಿಲ್ ಹೆಸರಲ್ಲಿ 5.49ಕೋಟಿ ಮೌಲ್ಯದ ಚರಾಸ್ತಿ, 43 ಲಕ್ಷ ಮೌಲ್ಯದ ಸ್ಥಿರಾಸ್ತಿ ಇದೆ. ಮಗ ಆವ್ಯಾನ್ ದೇವ್ ಹೆಸರಲ್ಲಿ 11 ಲಕ್ಷ ಹಣ ಇದೆ. ಇದನ್ನೂ ಓದಿ: ಚನ್ನಪಟ್ಟಣ ಮೈತ್ರಿ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ

Nikhil Kumaraswamy Nomination

ನಿಖಿಲ್ ಕುಮಾರಸ್ವಾಮಿ ಹೆಸರಲ್ಲಿ 1.488 ಕೆಜಿ ಚಿನ್ನ, 16 ಕೆಜಿ ಬೆಳ್ಳಿ ಹಾಗೂ ರೇವತಿ ಹೆಸರಲ್ಲಿ 1.411 ಕೆಜಿ ಚಿನ್ನ, 33.05 ಕೆಜಿ ಬೆಳ್ಳಿ, 13 ಕ್ಯಾರೆಟ್ ಡೈಮಂಡ್ ಇದೆ. 1 ಇನ್ನೋವಾ ಐ ಕ್ರಾಸ್, 1 ರೇಂಜ್ ರೋವರ್ ಹಾಗೂ ಎರಡು ಕ್ಯಾರಾವ್ಯಾನ್, 1 ಇನ್ನೋವಾ ಕ್ರಿಸ್ಟ ಕಾರು ಇದೆ.

ಕೇಂದ್ರ ಸಚಿವ ಕುಮಾರಸ್ವಾಮಿ ಪುತ್ರ ನಿಖಿಲ್ ಹೆಸರಲ್ಲಿ ಒಟ್ಟು 70.44 ಕೋಟಿ ಸಾಲ ಇದೆ. ರೇವತಿ ಹೆಸರಲ್ಲಿ 4.96 ಕೋಟಿ ಸಾಲ ಇದೆ. ಇದನ್ನೂ ಓದಿ: ಎನ್‌ಡಿಎ ಅಭ್ಯರ್ಥಿ ನಿಖಿಲ್‌ಗೆ ಮೋದಿ ಆಶೀರ್ವಾದ ಇದೆ: ಬಿಎಸ್‌ವೈ

Share This Article