ಮಂಡ್ಯ: ಇಂದು ನಿಖಿಲ್ ಕುಮಾರಸ್ವಾಮಿ ಕಾಂಗ್ರೆಸ್- ಜೆಡಿಎಸ್ ಮೈತ್ರಿಕೂಟ ಅಭ್ಯರ್ಥಿಯಾಗಿ ನಾಮಿನೇಷನ್ ಮಾಡಬೇಕಿತ್ತು. ಆದರೆ ದಿಢೀರ್ ಎಂದು ನಾಮಪತ್ರ ಸಲ್ಲಿಕೆಯನ್ನು ರದ್ದು ಮಾಡಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಮಂಡ್ಯ ಲೋಕಸಭಾ ಚುನಾವಣೆಗೆ ಇಂದು ಸಾಂಕೇತಿಕವಾಗಿ ನಾಮಪತ್ರ ಸಲ್ಲಿಕೆಗೆ ನಿರ್ಧಾರವಾಗಿತ್ತು. ಇಂದಿನ ನಾಮಪತ್ರ ಸಲ್ಲಿಕೆ ರದ್ದು ಮಾಡಿ, ಒಟ್ಟಿಗೆ 25ರಂದು ನಾಮಪತ್ರ ಸಲ್ಲಿಕೆಗೆ ನಿರ್ಧಾರ ಮಾಡಲಾಗಿದೆ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಡಿ. ರಮೇಶ್ ಮಾಹಿತಿ ನೀಡಿದ್ದಾರೆ.
Advertisement
Advertisement
ಜ್ಯೋತಿಷಿಗಳ ಸಲಹೆಯಂತೆ ಸಮಯ ನಿಗದಿಪಡಿಸಲಾಗಿದ್ದು, ಗುರುವಾರ ನಾಮಪತ್ರ ಸಲ್ಲಿಸಿದರೆ ಗುರುಬಲ ಕೂಡಿಬರಲಿದೆ ಅನ್ನೋ ನಂಬಿಕೆಯಿಂದಾಗಿ ಇಂದು ನಾಮಿನೇಷನ್ ಮಾಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿತ್ತು. ಆದರೆ 25 ರಂದು ಅಧಿಕೃತವಾಗಿ ನಾಮಪತ್ರ ಸಲ್ಲಿಕೆ ಮಾಡುತ್ತಿದ್ದರು. ಆದರೆ ಈಗ ಇದ್ದಕ್ಕಿದ್ದಂತೆ ನಾಮಪತ್ರ ಸಲ್ಲಿಕೆಯನ್ನು ರದ್ದು ಮಾಡಿದ್ದಾರೆ.
Advertisement
Advertisement
ಇತ್ತ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಮಾರ್ಚ್ 25ರಂದು ನಿಖಿಲ್ ನಾಮಪತ್ರ ಸಲ್ಲಿಕೆ ವೇಳೆ 80 ಸಾವಿರಕ್ಕೂ ಹೆಚ್ಚು ಜನರ ಮುಂದೆ ಶಕ್ತಿ ಪ್ರದರ್ಶನಕ್ಕೆ ಸಿದ್ಧತೆ ಮಾಡಿಕೊಂಡಿದ್ದಾರೆ. ನಾಮಪತ್ರ ಸಲ್ಲಿಕೆ ವೇಳೆ ಸಿಎಂ, ಮಾಜಿ ಪ್ರಧಾನಿ ದೇವೇಗೌಡರು ಸೇರಿದಂತೆ ಜಿಲ್ಲೆಯ ಶಾಸಕರು, ಸಚಿವರು ಭಾಗಿಯಾಗಲಿದ್ದಾರೆ. ಅಷ್ಟೇ ಅಲ್ಲದೇ ಬುಧವಾರದ ಸುಮಲತಾ ನಾಮಪತ್ರ ಕಾರ್ಯಕ್ರಮಕ್ಕೆ ಸೆಡ್ಡು ಹೊಡೆಯಲು ಜೆಡಿಎಸ್ ಚಿಂತನೆ ನಡೆಸಿದ್ದು, ಕಳೆದ ದಿನಕ್ಕಿಂತಲು ಹೆಚ್ಚಿನ ಜನ ಸೇರಿಸಲು ಪ್ಲಾನ್ ಮಾಡುತ್ತಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ಎಂಟು ವಿಧಾನಸಭಾ ಕ್ಷೇತ್ರದಿಂದಲೂ ಕನಿಷ್ಟ ಹತ್ತು ಸಾವಿರ ಜನ ಕರೆತರಲು ಚಿಂತನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.