Connect with us

Bengaluru City

ಹೌದು ತಂದೆಯಾಗುತ್ತಿರುವುದು ನಿಜ: ನಿಖಿಲ್

Published

on

Share this

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಪುತ್ರ, ನಟ ನಿಖಿಲ್ ಕುಮಾರಸ್ವಾಮಿ ತಂದೆಯಾಗುತ್ತಿರುವುದು ಇದೀಗ ಖಚಿತವಾಗಿದೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಸ್ವತಃ ಅವರೇ ಬಹಿರಂಗಪಡಿಸಿದ್ದಾರೆ.

ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು. ಈ ಕುರಿತು ಈಗಾಗಲೇ ಸುದ್ದಿ ಹರಿದಾಡುತ್ತಿರುವುದು ಸತ್ಯ, ನಾವು ಮಗುವಿನ ನಿರೀಕ್ಷೆಯಲ್ಲಿದ್ದೇವೆ, ತಂದೆಯಾಗುತ್ತಿದ್ದೇನೆ ಸ್ಪಷ್ಟಪಡಿಸಿದರು. ನಿಖಿಲ್ ಕುಮಾರಸ್ವಾಮಿಯವರು ತಂದೆಯಾಗುತ್ತಿರುವ ಸುದ್ದಿ ಸರಿದಾಡುತ್ತಿತ್ತು. ಆದರೆ ಅಧಿಕೃತವಾಗಿ ನಿಖಿಲ್ ಅವರು ಎಲ್ಲೂ ಹೇಳಿರಲಿಲ್ಲ. ಇದೀಗ ಸುದ್ದಿಗೋಷ್ಠಿಯಲ್ಲಿ ಸ್ವತಃ ಅವರೇ ಸ್ಪಷ್ಟಪಡಿಸಿದ್ದಾರೆ.

ಕೆಲ ದಿನಗಳ ಹಿಂದೆಯಷ್ಟೇ ಹೆಚ್.ಡಿ.ಕುಮಾರಸ್ವಾಮಿ ತಾವು ಅಜ್ಜನಾಗುತ್ತಿರುವ ವಿಚಾರವನ್ನು ಮಾಧ್ಯಮಗಳ ಮುಂದೆ ಬಹಿರಂಗಪಡಿಸಿದ್ದರು. ಸೊಸೆ ರೇವತಿ 5 ತಿಂಗಳ ಗರ್ಭಿಣಿ ಎಂದು ಸಂತಸದ ಸುದ್ದಿಯನ್ನು ರಿವೀಲ್ ಮಾಡಿದ್ದರು.

ಫೆಬ್ರವರಿ 10ರಂದು ನಿಖಿಲ್ ಕುಮಾರಸ್ವಾಮಿ ನಿಶ್ಚಿತಾರ್ಥ ರೇವತಿ ಅವರ ಜೊತೆ ನಡೆದಿತ್ತು. ಮದುವೆಯನ್ನ ಅದ್ಧೂರಿಯಾಗಿ ನಡೆಸಲು ಮಾಜಿ ಸಿಎಂ ಕುಮಾರಸ್ವಾಮಿ ಕುಟುಂಬ ನಿರ್ಧರಿಸಿತ್ತು. ಕೊರೊನಾ ಹಿನ್ನೆಲೆ ಕೆಲ ಆಪ್ತರ ಸಮ್ಮುಖದಲ್ಲಿ ಏಪ್ರಿಲ್ 17ರಂದು ವಿವಾಹ ನಡೆದಿತ್ತು. ನಿಖಿಲ್ ಮತ್ತು ರೇವತಿ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಲೇ ಇರುತ್ತವೆ.

Click to comment

Leave a Reply

Your email address will not be published. Required fields are marked *

Advertisement