ಪ್ರವಾಹ ಸಂತ್ರಸ್ತರಿಗೆ ತನ್ನ ಸಂಭಾವನೆಯನ್ನ ನೀಡಿದ ಅಭಿಮನ್ಯು

Public TV
1 Min Read
NIKIL copy

ಬೆಂಗಳೂರು: ಸ್ಯಾಂಡಲ್‍ವುಡ್ ನಟ-ನಟಿಯರು, ಸಾಮಾನ್ಯ ಜನರು ಸೇರಿದಂತೆ ಸಾಕಷ್ಟು ಜನರು ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗೆ ತಮ್ಮ ಕೈಲಾದ ಸಹಾಯ ಮಾಡುತ್ತಿದ್ದಾರೆ. ಇದೀಗ ಮಾಜಿ ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ಅವರು ತಮ್ಮ ಅಭಿನಯದ ‘ಕುರುಕ್ಷೇತ್ರ’ ಸಿನಿಮಾದಿಂದ ಬರುವಂತಹ ಸಂಭಾವನೆಯನ್ನು ನೀಡುವುದಾಗಿ ತಿಳಿಸಿದ್ದಾರೆ.

ನಿಖಿಲ್ ಕುಮಾರಸ್ವಾಮಿ ಅವರು ‘ಕುರುಕ್ಷೇತ್ರ’ ಸಿನಿಮಾದಲ್ಲಿ ಅಭಿಮನ್ಯು ಪಾತ್ರವನ್ನು ಮಾಡಿದ್ದಾರೆ. ಚಿತ್ರದಲ್ಲಿ ಅವರ ನಟನೆ ಚೆನ್ನಾಗಿದೆ ಎಂದು ಪ್ರೇಕ್ಷಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡು ಸಂತ್ರಸ್ತರ ಕೇಂದ್ರಗಳಲ್ಲಿರುವವರನ್ನು ಭೇಟಿಯಾಗಿ ಅವರ ಸಮಸ್ಯೆಯನ್ನು ಆಲಿಸುತ್ತಿದ್ದಾರೆ.

68666649 2134462903326559 2318841113554714624 n

ಈ ವೇಳೆ ಮಾಧ್ಯಮಗಳ ಜೊತೆ ಮಾತನಾಡಿದ ನಿಖಿಲ್, ನಿರಾಶ್ರಿತ ಕೇಂದ್ರಗಳಿಗೆ ಭೇಟಿ ಕೊಟ್ಟು ನಾನು, ನನ್ನ ಕಾರ್ಯಕರ್ತರು ಅವರಿಗೆ ಅಗತ್ಯ ವಸ್ತುಗಳನ್ನು ತಲುಪಿಸುವ ಕೆಲಸ ಮಾಡುತ್ತಿದ್ದೇವೆ. ಪ್ರವಾಹದಿಂದ ರಾಜ್ಯಕ್ಕೆ ಅಪಾರ ನಷ್ಟವಾಗಿದೆ. ಹೀಗಾಗಿ ಪ್ರತಿಯೊಬ್ಬ ಪ್ರಜೆಯೂ ಉತ್ತರ ಕರ್ನಾಟಕ ಜನತೆಗೆ ಸಹಾಯ ಮಾಡುವಂತೆ ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಉತ್ತರ ಕರ್ನಾಟಕದ ಜನರ ಇಂದು ಸಂಕಷ್ಟದಲ್ಲಿ ಇದ್ದಾರೆ. ಹೀಗಾಗಿ ನಾನು ಅಭಿನಯಿಸಿರುವ ‘ಕುರುಕ್ಷೇತ್ರ’ ಸಿನಿಮಾದ ಸಂಭಾವನೆಯನ್ನು ಅವರಿಗೆ ಕೊಡಲು ಇಷ್ಟಪಡುತ್ತೇನೆ. ರಾಜ್ಯ ಮತ್ತು ಕೇಂದ್ರ ಸರ್ಕಾರ ಸಂತ್ರಸ್ತರ ಬಗ್ಗೆ ಹೆಚ್ಚಿನ ಗಮನ ಕೊಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

68256647 2134462969993219 4899120030333009920 n

ನಿಖಿಲ್ ‘ಕುರುಕ್ಷೇತ್ರ’ ಸಿನಿಮಾದಲ್ಲಿ ಅಭಿನಯಿಸಲು ಎಷ್ಟು ಸಂಭಾವನೆ ಪಡೆದುಕೊಂಡಿದ್ದಾರೆ ಎಂಬುದರ ಬಗ್ಗೆ ಖಚಿತ ಮಾಹಿತಿ ಇಲ್ಲ. ಆದರೆ ಮಾನವೀಯತೆ ದೃಷ್ಟಿಯಿಂದ ನಿಖಿಲ್ ಅವರು ನೆರೆ ಸಂತ್ರಸ್ಥರಿಗೆ ನೀಡಿರುವುದು ಮೆಚ್ಚುಗೆಗೆ ಪಾತ್ರವಾಗಿದೆ.

Share This Article
Leave a Comment

Leave a Reply

Your email address will not be published. Required fields are marked *