ಮಂಡ್ಯ: ಲೋಕೋಪಯೋಗಿ ಸಚಿವ ರೇವಣ್ಣ ಅವರು ಸುಮಲತಾ ಅಣಬರೀಶ್ ಬಗ್ಗೆ ಹೇಳಿಕೆ ನೀಡಿದ ವಿಚಾರದ ಬಗ್ಗೆ ನಿಖಿಲ್ ಕುಮಾರಸ್ವಾಮಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಮಳವಳ್ಳಿಯಲ್ಲಿ ಮಾತನಾಡಿದ ನಿಖಿಲ್, “ರೇವಣ್ಣ ಯಾವ ಅರ್ಥದಲ್ಲಿ ಹೇಳಿದ್ದಾರೆ ನಿಜವಾಗಿಯೂ ನನಗೆ ಗೊತ್ತಿಲ್ಲ. ನಾನಾಗಲಿ ನಮ್ಮಪ್ಪ, ಅಮ್ಮ, ಕುಟುಂಬ ಒಳ್ಳೆಯ ನಡತೆಯನ್ನು ಹೇಳಿಕೊಟ್ಟಿದೆ. ಮಹಿಳೆಯರಿಗೆ ಗೌರವ ಕೊಡೋದನ್ನು ಹೇಳಿಕೊಟ್ಟಿದೆ. ರೇವಣ್ಣ ಯಾವ ಅರ್ಥದಲ್ಲಿ ಹೇಳಿದ್ದಾರೆ ಎಂದು ನನಗೆ ಗೊತ್ತಿಲ್ಲ ಎಂದು ದೊಡ್ಡಪ್ಪನ ವಿರುದ್ಧ ನಿಖಿಲ್ ಪರೋಕ್ಷವಾಗಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Advertisement
Advertisement
ಈಗಾಗಲೇ ಎಲ್ಲರೂ ಕೂಡ ಬೆಂಬಲ ನೀಡಿದ್ದಾರೆ. ನನ್ನ ಸ್ಪರ್ಧೆಗೆ ವರಿಷ್ಠರು, ಸ್ಥಳೀಯ ನಾಯಕರ ಜೊತೆ ಚರ್ಚೆ ನಡೆಸಿದ್ದೇವೆ. ಕಾರ್ಯಕರ್ತರು ಹಾಗೂ ಜಿಲ್ಲೆಯ ಜನತೆಯ ಒತ್ತಾಯದಿಂದ ನನಗೆ ಟಿಕೆಟ್ ನೀಡಿದ್ದಾರೆ. ಜೆಡಿಎಸ್ ಪಕ್ಷ ಟಿಕೆಟ್ ಕೊಟ್ಟಿರೋದ್ರಿಂದ ನಮ್ಮ ತಂದೆ ಮೇಲೆ ಜಿಲ್ಲೆಯ ಜನರು ಇಟ್ಟಿರುವ ನಿರೀಕ್ಷೆ ಉಳಿಸಿಕೊಳ್ಳುತ್ತೇನೆ ಎಂದರು.
Advertisement
Advertisement
ಬಳಿಕ ಮಾತನಾಡಿದ ಅವರು ಮಳವಳ್ಳಿ ಜನತೆ ಜೊತೆ ವಿಚಾರಗಳನ್ನು ಹಂಚಿಕೊಂಡಿದ್ದೇನೆ. ಜಿಲ್ಲೆಯ ಜನರು ಯಾವ ತೀರ್ಪು ಕೊಡುತ್ತಾರೋ ಅದನ್ನು ಕಾದು ನೋಡಬೇಕಿದೆ. ರಾಜಕಾರಣದಲ್ಲಿ ಸಂಬಂಧಗಳನ್ನು ಹಾಳು ಮಾಡಲು ಬಿಡಲ್ಲ. ರಾಜಕಾರಣದಲ್ಲಿ ಯಾರೋ ಬೇಕಾದ್ರೂ ಸ್ಪರ್ಧೆ ಮಾಡಬಹುದು. ಎಲ್ಲರ ಸ್ಪರ್ಧೆಯನ್ನು ನಾನು ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಬರುವ ಚರ್ಚೆ ಬಗ್ಗೆ ತಲೆಕೆಡಿಸಿಕೊಳ್ಳಲ್ಲ. ಅಂತಿಮ ತೀರ್ಪು ಮಂಡ್ಯ ಜನತೆ ನೀಡುತ್ತದೆ. ಹಾಗಾಗಿ ಸೋಷಿಯಲ್ ಮೀಡಿಯಾ ಟೀಕೆ ಟಿಪ್ಪಣಿಗಳಿಗೆ ತಲೆ ಕೆಡಿಸಿಕೊಳ್ಳೊದಿಲ್ಲ ಎಂದು ಜೆಡಿಎಸ್ ಸಂಭಾವ್ಯ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಮಾತನಾಡಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live ವೀಕ್ಷಿಸಲು ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv