ರಾಮನಗರ: ಕ್ಷೇತ್ರದಲ್ಲಿ ನನ್ನನ್ನು ಸೋಲಿಸಲು ಬಿಜೆಪಿ (BJP) ಹಾಗೂ ಕಾಂಗ್ರೆಸ್ (Congress) ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಸ್ವತಃ ಕಾಂಗ್ರೆಸ್ ಅಭ್ಯರ್ಥಿಯೇ ಬಿಜೆಪಿಗರ ಮತನೀಡಿ ಆದ್ರೆ ಜೆಡಿಎಸ್‌ಗೆ ಮತಹಾಕಬೇಡಿ ಎಂದು ಪ್ರಚಾರ ಮಾಡ್ತಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಆರೋಪಿಸಿದರು.
ರಾಮನಗರ (Ramnagara) ತಾಲೂಕಿನ ಅವ್ವೇರಹಳ್ಳಿ ಗ್ರಾಮದಲ್ಲಿ ಜೆಡಿಎಸ್ ಸೇರ್ಪಡೆ ಕಾರ್ಯಕ್ರಮದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು ಬಿಜೆಪಿ ತೊರೆದು ಜೆಡಿಎಸ್ ಪಕ್ಷ ಸೇರ್ಪಡೆಗೊಂಡರು. ಇದೇ ವೇಳೆ ನಿಖಿಲ್ ಕುಮಾರಸ್ವಾಮಿ ಮಾತನಾಡಿ, ನನ್ನನ್ನು ಸೋಲಿಸಬೇಕು ಅಂತ ಬಿಜೆಪಿ-ಕಾಂಗ್ರೆಸ್ ಒಂದಾಗಿದೆ. ಕಾಂಗ್ರೆಸ್ ಹಾಗೂ ಬಿಜೆಪಿ ಹೊಂದಾಣಿಕೆ ಮಾಡಿಕೊಂಡು ನನ್ನನ್ನು ಸೋಲಿಸಲು ಷಡ್ಯಂತ್ರ ನಡೆಸಿದ್ದಾರೆ. ಕ್ಷೇತ್ರದ ಹಲವೆಡೆ ಕಾಂಗ್ರೆಸ್ ಅಭ್ಯರ್ಥಿ ಬಿಜೆಪಿಗೆ ಮತ ಹಾಕಿ ಅಂದಿದ್ದಾರೆ ಎಂದು ಕಿಡಿಕಾರಿದರು. ಇದನ್ನೂ ಓದಿ: `ಕೈ’ ಹಿಡಿದ ನಾರಾಯಣ ಗೌಡ, ಪ್ರಭಾಕರ ರೆಡ್ಡಿ – ಹೆಚ್‌ಡಿಕೆಗೆ ಡಿಕೆ ಬ್ರದರ್ಸ್ ಟಕ್ಕರ್
Advertisement
Advertisement
ನನಗೆ ಮತ ಹಾಕಲಿಲ್ಲ ಅಂದ್ರೂ ಪರವಾಗಿಲ್ಲ. ಬಿಜೆಪಿಗೆ ಮತಹಾಕಿ ಎಂದು ಕಾಂಗ್ರೆಸ್ ಅಭ್ಯರ್ಥಿ ಹೇಳುತ್ತಿದ್ದಾರೆ. ಕೆಲವು ಕಡೆ ಬಿಜೆಪಿಯವ್ರೂ ಕೂಡಾ ಕಾಂಗ್ರೆಸ್‌ಗೆ ಮತ ಹಾಕಿ ಅಂತ ಪ್ರಚಾರ ಮಾಡುತ್ತಿದ್ದಾರೆ. ನಮ್ಮ ಮತಗಳನ್ನು ವಿಭಜನೆ ಮಾಡಲು ಕಾಂಗ್ರೆಸ್-ಬಿಜೆಪಿ ಈ ರೀತಿ ಮಾಡುತ್ತಿದೆ. ಮಂಡ್ಯದ ಚುನಾವಣೆ ರೀತಿ ಇಲ್ಲೂ ಕುತಂತ್ರ ಮಾಡುತ್ತಿದ್ದಾರೆ. ನಾನು ಎಲ್ಲವನ್ನೂ ಬಹಿರಂಗವಾಗಿ ಚರ್ಚೆ ಮಾಡಲ್ಲ. ಇದಕ್ಕೆ ಕ್ಷೇತ್ರದ ಮತದಾರರೇ ಉತ್ತರ ಕೊಡುತ್ತಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಮಾನ್ವಿ ಕ್ಷೇತ್ರದಲ್ಲಿ ಖಾತೆಯನ್ನೇ ತೆರೆಯದ ಬಿಜೆಪಿ – ಈ ಬಾರಿ ಯಾರ ಕೈ ಹಿಡಿಯಲಿದ್ದಾನೆ ಮತದಾರ?