ಬೆಂಗಳೂರು: ನಾಡು-ನುಡಿ ವಿಚಾರಕ್ಕೆ ಸಂಬಂಧಿಸಿದ ವಿಷಯಕ್ಕೆ ನಾನು ಜೊತೆಯಾಗಿರುತ್ತೇನೆ ಎಂದು ಸ್ಯಾಂಡಲ್‌ವುಡ್ ಯುವರಾಜ, ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ.
ಕನ್ನಡಿಗರನ್ನು ಕೆಣಕಿದ ಎಂಇಎಸ್ ಪುಂಡರ ಕೃತ್ಯವನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಡಿಸೆಂಬರ್ 31 ರಂದು ಕರ್ನಾಟಕ ಬಂದ್‍ಗೆ ಕರೆ ನೀಡಿದ್ದು, ಈ ಬಂದ್‍ಗೆ ಸ್ಯಾಂಡಲ್‍ವುಡ್ ನಟ, ನಟಿಯರು ಸಹ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.
Advertisement
Advertisement
ಈ ಕುರಿತಂತೆ ಮಾಧ್ಯಮದವರೊಂದಿಗೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ ಅವರು, ಕನ್ನಡಪರ ಸಂಘಟನೆಗಳು ಕರೆ ಕೊಟ್ಟಿರುವ ಬಂದ್‍ಗೆ ನನ್ನ ಬೆಂಬಲವಿದೆ. ನಾಡು-ನುಡಿ ವಿಚಾರಕ್ಕೆ ಸಂಬಂಧಿಸಿದ ವಿಷಯಕ್ಕೆ ನಾನು ಜೊತೆಯಾಗಿರುತ್ತೇನೆ. ಆ ಘಟನೆಗಳು ಮತ್ತೆ ಮರುಕಳಿಸದಂತೆ ಸರ್ಕಾರ ನೋಡಿಕೊಳ್ಳಬೇಕು. ಚಿತ್ರರಂಗ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಬದ್ಧನಾಗಿರುತ್ತೇನೆ. ಒಂದು ದಿನ ಬಂದ್ ಮಾಡುವುದರಿಂದ ಸಮಸ್ಯೆ ಬಗೆಹರಿಯುವುದಿಲ್ಲ. ಆದರೆ ಬಂದ್ ಮಾಡುವುದಕ್ಕೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನನ್ನ ನೃತ್ಯಕ್ಕೆ ಸ್ಪೂರ್ತಿ ಪುನೀತ್ ರಾಜಕುಮಾರ್: ನಿಖಿಲ್ ಕುಮಾರಸ್ವಾಮಿ
Advertisement
Advertisement
ಮತ್ತೊಂದೆಡೆ ಡಿಂಪಲ್ ಕ್ವೀನ್ ರಚಿತಾ ರಾಮ್, ನಮ್ಮ ರಾಜ್ಯಕ್ಕಾಗಿ ಒಳ್ಳೆ ಉದ್ದೇಶದಿಂದ ಮಾಡುವ ಬಂದ್‍ಗೆ ನನ್ನ ಬೆಂಬಲವಿದೆ. ನನ್ನ ಸಿನಿಮಾ ರಿಲೀಸ್ ಕೂಡ ಮುಂದೂಡಿದರು ಸಮಸ್ಯೆಯಿಲ್ಲ. ಪದೇ ಪದೇ ಕನ್ನಡಿಗರ ಮೇಲೆ ಆಗುತ್ತಿರುವ ಅನ್ಯಾಯ ಸಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಈ ಮುನ್ನ ಕರುನಾಡ ಚಕ್ರವರ್ತಿ ಡಾ. ಶಿವರಾಜ್ ಕುಮಾರ್ ಅವರು, ನಾನು ಹುಟ್ಟಿದ್ದು ಚೆನ್ನೈನಲ್ಲಿ. ತಮಿಳನ್ನು ಮೂರನೇ ಭಾಷೆಯಾಗಿ ಕಲಿತಿದ್ದೇನೆ. ತಮಿಳು ಸ್ನೇಹಿತರ ಜೊತೆ ತಮಿಳಿನಲ್ಲಿ ಮಾತನಾಡುತ್ತೇನೆ. ತಮಿಳು, ತೆಲುಗು, ಮಲಯಾಳಂ, ಹಿಂದಿ, ಗುಜರಾತಿ, ಪಂಜಾಬಿ, ಮರಾಠಿ ಸೇರಿದಂತೆ ಎಲ್ಲ ಭಾಷೆಯ ಸಿನಿಮಾ ನೋಡುತ್ತೇನೆ. ಕರ್ನಾಟಕದಲ್ಲಿ ಇದ್ದಾಗ ಕನ್ನಡವನ್ನು ಪ್ರೀತಿಸಬೇಕು. ನಮ್ಮ ಮೇಲೆ ದಬ್ಬಾಳಿಕೆ ಮಾಡಬೇಡಿ. ನಾವು ಸುಮ್ಮನಿದ್ದೇವೆ ಎಂದರೆ ನಮಗೆ ಶಕ್ತಿ ಇಲ್ಲ ಅಂತ ಅಲ್ಲ. ಮನುಷ್ಯನಿಗೆ ಕೋಪ ಬಂದರೆ ಯಾವ ಮಟ್ಟಕ್ಕೆ ಬೇಕಾದರೂ ಹೋಗುತ್ತದೆ. ಸರ್ಕಾರದವರು ಇದಕ್ಕಾಗಿ ಫೈಟ್ ಮಾಡಬೇಕು. ಕನ್ನಡಕ್ಕಾಗಿ ಪ್ರಾಣ ನೀಡಲು ಸಹ ಸಿದ್ಧನಾಗಿದ್ದೇನೆ ಎಂದು ಹೇಳಿದ್ದರು. ಇದನ್ನೂ ಓದಿ: ಹೆರಿಗೆ ನಂತರ ತೂಕ ಇಳಿಸಿಕೊಳ್ಳೋದು ಸುಲಭ ಅಲ್ಲ: ಯುವರತ್ನ ನಟಿ