ಬೆಂಗಳೂರು: ಅಗತ್ಯ ಬಿದ್ದರೆ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಅವರೊಂದಿಗೆ ಮಾತುಕತೆ ನಡೆಸಲು ನಾವು ಸಿದ್ಧರಿದ್ದೇವೆ ಅಂತ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ತಿಳಿಸಿದ್ದಾರೆ.
ಮಾಜಿ ಸಚಿವ ನಾರಾಯಣಗೌಡರ ಮನವೊಲಿಕೆಯಂತೆ ಸುಮಲತಾ (Sumalatha Ambareesh) ಅವರ ಮನವೊಲಿಕೆ ಮಾಡ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಅಶ್ವಥ್ ನಾರಾಯಣ್ ಮತ್ತು ಪುಟ್ಟರಾಜು ಅವರ ಸಮ್ಮುಖದಲ್ಲಿ ಕುಮಾರಸ್ವಾಮಿ ಅವರು ನಾರಾಯಣಗೌಡ ಅವರನ್ನ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ನಾರಾಯಣಗೌಡರು (Narayanagowda) ನಮ್ಮ ಪಕ್ಷದಿಂದಲೇ ಶಾಸಕ ಆಗಿದ್ದರು. ಸಣ್ಣ-ಪುಟ್ಟ ಭಿನ್ನಾಭಿಪ್ರಾಯಗಳು ಇರೋದು ಸಹಜ. ಈಗ ಎಲ್ಲವೂ ಸರಿ ಆಗಿದೆ. ವೈಯಕ್ತಿಕವಾಗಿ ಕುಮಾರಸ್ವಾಮಿ ಮೇಲೆ ನಾರಾಯಣಗೌಡರು ಗೌರವ ಇಟ್ಟುಕೊಂಡಿದ್ದಾರೆ. ಕುಮಾರಸ್ವಾಮಿ ಪರ ಕೆಲಸ ಮಾಡೋದಾಗಿ ಹೇಳಿದ್ದಾರೆ ಎಂದು ತಿಳಿಸಿದ್ದಾರೆ.
Advertisement
Advertisement
ನಾವು ಸುಮಲತಾ ಅವರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡ್ತೀವಿ. ಅಗತ್ಯ ಬಿದ್ದರೆ ಅವರ ಜೊತೆಗೂ ಮಾತುಕತೆ ನಡೆಸುತ್ತೇವೆ. ಒಟ್ಟಾರೆ ನಮಗೆ ಆರೋಗ್ಯರ ಚುನಾವಣೆ ಆಗಬೇಕು ಎನ್ನುವ ಮೂಲಕ ಸುಮಲತಾ ಜೊತೆ ಮಾತುಕತೆಗೂ ಸಿದ್ಧ ಎಂದು ಹೇಳಿದ್ದಾರೆ. ಇದನ್ನೂ ಓದಿ: ಚಾಮರಾಜನಗರದಿಂದ ಸಚಿವ ಮಹದೇವಪ್ಪ ಪುತ್ರ ಸುನೀಲ್ ಬೋಸ್‌ಗೆ ಟಿಕೆಟ್; ಅಧಿಕೃತ ಘೋಷಣೆ
Advertisement
ಕುಮಾರಸ್ವಾಮಿ ಹೆಸರು ಫೈನಲ್:
ಇದೇ ವೇಳೆ ಮಂಡ್ಯದಲ್ಲಿ (Mandya Contestent) ಕುಮಾರಸ್ವಾಮಿ ಅವರ ಸ್ಪರ್ಧೆ ಕುರಿತು ಮಾತನಾಡಿರುವ ಅವರು, ಮಂಡ್ಯದಿಂದ ಕುಮಾರಸ್ವಾಮಿ ಅವರ ಸ್ಪರ್ಧೆ ಅಂತಿಮವಾಗಿದೆ. ಪಕ್ಷದ ವರಿಷ್ಠರೇ ಅಧಿಕೃತವಾಗಿ ಹೆಸರು ಘೋಷಣೆ ಮಾಡ್ತಾರೆ ಅಂತ ಹೇಳಿದ್ದಾರೆ. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ಕೇಸ್ – ಬೆಂಗ್ಳೂರು, ಶಿವಮೊಗ್ಗ, ಹುಬ್ಬಳಿಯಲ್ಲಿ ಬೆಳ್ಳಂಬೆಳಗ್ಗೆ ಎನ್‌ಐಎ ದಾಳಿ
Advertisement
ಕೋರ್ ಕಮಿಟಿ ಸಭೆಯಲ್ಲಿ ಮಂಡ್ಯ, ಕೋಲಾರ ಕ್ಷೇತ್ರಗಳ ಬಗ್ಗೆ ಚರ್ಚೆ ಆಗಿದೆ. ಮಂಡ್ಯಕ್ಕೆ ಕುಮಾರಸ್ವಾಮಿ ಅವರ ಹೆಸರೇ ಅಧಿಕೃತ ಆಗಿದೆ.ಮಂಡ್ಯ ಜಿಲ್ಲೆಯ ಪಕ್ಷದ ಕಾರ್ಯಕರ್ತರ, ನಾಯಕರ ಒತ್ತಾಸೆಗೆ ಬೆಲೆ ಕೊಟ್ಟು ಕುಮಾರಸ್ವಾಮಿ ಸ್ಪರ್ಧೆ ಮಾಡ್ತಿದ್ದಾರೆ.ಮಂಡ್ಯ ಜಿಲ್ಲೆಗೆ ಆದ ಅನ್ಯಾಯ ಸರಿಪಡಿಸಬೇಕು. ಕುಮಾರಸ್ವಾಮಿ ಅವರಿಗೆ ರಾಜ್ಯದ ಪರವಾಗಿ ಬದ್ದತೆ ಇದೆ.ರಾಜ್ಯದ ಪರವಾಗಿ ಕೆಲಸ ಮಾಡ್ತಾರೆ ಅಂತ ಬಿಜೆಪಿ ಹೈಕಮಾಂಡ್ ನಾಯಕರಿಗೂ ಅನ್ನಿಸಿದೆ.ಅಧಿಕೃತವಾಗಿ ಕುಮಾರಸ್ವಾಮಿ ಅವರು ಅಭ್ಯರ್ಥಿ ಆಗೋ ಬಗ್ಗೆ ವರಿಷ್ಠರು ಅಧಿಕೃತ ಘೋಷಣೆ ಮಾಡ್ತಾರೆ ಎಂದು ತಿಳಿಸಿದ್ದಾರೆ.