ಬೆಂಗಳೂರು: ಸ್ಯಾಂಡಲ್‍ವುಡ್ ನಟ ನಿಖಿಲ್ ಕುಮಾರಸ್ವಾಮಿ ತಂದೆಯಾಗಿರುವ ಸಂತೋಷನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ.
ನಮ್ಮ ಜೀವನದ ಈ ವಿಶೇಷ ಕ್ಷಣವನ್ನು ಇಡೀ ಜಗತ್ತಿಗೆ ಹಂಚಿಕೊಳ್ಳಲು ಸಂತೋಷವಾಗಿದೆ. LOVE YOU MY SON ಎಂದು ಬರೆದುಕೊಂಡು ಮಗುವನ್ನು ಎತ್ತಿಕೊಂಡಿರುವ ಮುದ್ದಾದ ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡು ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. ಸಂತೋಷ ವಿಚಾರವನ್ನು ಕೇಳುತ್ತಿದ್ದಂತೆ ಅಭಿಮಾನಿಗಳು ಕಾಮೆಂಟ್ ಮಾಡಿ ಶುಭ ಕೋರುತ್ತಿದ್ದಾರೆ.
ನಿಖಿಲ್ ಕುಮಾರಸ್ವಾಮಿ ಹಾಗೂ ರೇವತಿ ದಂಪತಿಗೆ ಇಂದು ಗಂಡು ಮಗು ಜನಿಸಿದೆ. ಈ ಮೂಲಕ ಮಾಜಿ ಪ್ರಧಾನ ಮಂತ್ರಿ ಎಚ್.ಡಿ.ದೇವೇಗೌಡ ಅವರ ಕುಟುಂಬದಲ್ಲಿ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ರೇವತಿ ಜನ್ಮ ನಿಡಿದ್ದಾರೆ. ತಾಯಿ, ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಇದನ್ನೂ ಓದಿ: ಗೌಡ್ರ ಕುಟುಂಬದಲ್ಲಿ ಸಂಭ್ರಮ – ನಿಖಿಲ್, ರೇವತಿ ದಂಪತಿಗೆ ಗಂಡು ಮಗು
ನನ್ನ ಜೀವನದಲ್ಲಿ ಇನ್ನೊಂದು ಶುಭ ಘಳಿಗೆ ಬಂದಿದೆ. ನಮ್ಮ ಪರಿವಾರಕ್ಕೆ ಹೊಸ ಸದಸ್ಯನ ಆಗಮನವಾಗಿದೆ. ತಾತನಾದೆ ಎಂದು ಹೇಳಲು ಅತೀವ ಸಂತಸವಾಗುತ್ತಿದೆ. ಕಂದನಿಗೆ ನಿಮ್ಮೆಲ್ಲರ ಹಾರೈಕೆ ಮತ್ತು ಆಶೀರ್ವಾದ ಇರಲಿ ಎಂದು ಪ್ರಾರ್ಥನೆ ಮಾಡುತ್ತೇನೆ ಎಂದು ಹೆಚ್.ಡಿ ಕುಮಾರಸ್ವಾಮಿಯವರು ಟ್ವೀಟ್ ತಾವು ತಾತನಾಗಿರುವ ಸಂತೋಷವನ್ನು ವ್ಯಕ್ತ ಪಡಿಸಿದ್ದಾರೆ.
ರೇವತಿ ಪ್ರೆಗ್ನೆಂಟ್ ಎಂಬ ಸುದ್ದಿ ಇತ್ತೀಚಿನ ಕೆಲವು ತಿಂಗಳುಗಳಿಂದ ಕೇಳಿಬರುತ್ತಿತ್ತು. ಈ ವರ್ಷ ಜೂನ್‍ನಲ್ಲಿ ಆ ಬಗ್ಗೆ ಸ್ವತಃ ನಿಖಿಲ್ ಪ್ರತಿಕ್ರಿಯೆ ನೀಡಿದ್ದರು. ಕೇಳಿಬರುತ್ತಿರುವ ಸುದ್ದಿ ನಿಜ. ನಾವು ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದೇವೆ. ಶೀಘ್ರದಲ್ಲಿ ನಮ್ಮ ಕುಟುಂಬಕ್ಕೆ ಹೊಸ ಅತಿಥಿ ಬರಲಿದ್ದಾರೆ ಎಂದು ನಿಖಿಲ್ ಹೇಳಿದ್ದರು. ಕೆಲವು ದಿಬಗಳ ಹಿಂದೆ ಸೀಮಂತ ಕಾರ್ಯಕ್ರಮವನ್ನು ಮಾಡಲಾಗಿತ್ತು. ಈಗ ರೇವತಿ ಅವರಿಗೆ ಗಂಡು ಮಗು ಜನನವಾಗಿದೆ.
2020ರ ಏಪ್ರಿಲ್ 17ರಂದು ಲಾಕ್‍ಡೌನ್ ಸಮಯದಲ್ಲಿ ನಿಖಿಲ್ ಹಾಗೂ ರೇವತಿ ರಾಮನಗರ ತಾಲೂಕಿನ ಕೇತಗಾನಹಳ್ಳಿಯಲ್ಲಿರುವ ಫಾರ್ಮ್ ಹೌಸ್‍ನಲ್ಲಿ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಕೆಲವು ತಿಂಗಳ ಹಿಂದಷ್ಟೇ ಮಾಜಿ ಸಿಎಂ. ಹೆಚ್.ಡಿ ಕುಮಾರಸ್ವಾಮಿಯವರು ತಾವು ತಾತಾ ಆಗುತ್ತಿರುವ ಖುಷಿ ವಿಚಾರವನ್ನು ಮಾಧ್ಯಮದ ಮುಂದೆ ಹಂಚಿಕೊಂಡಿದ್ದರು. ಇದೀಗ ಮುದ್ದಿನ ಸೊಸೆ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಗೌಡರ ಕುಟುಂಬದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಹೊಸ ಅತಿಥಿ ಆಗಮನವಾಗಿರುವ ಸಂತೋಷವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುತ್ತಿದ್ದಾರೆ.