ಬೆಂಗಳೂರು: ಸ್ಯಾಂಡಲ್ವುಡ್ ನಟ ನಿಖಿಲ್ ಕುಮಾರಸ್ವಾಮಿ ಅವರು ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯವನ್ನು ಈ ಬಾರಿ ಮಗನ ಜೊತೆಗೆ ಕೊಂಚ ವಿಭಿನ್ನವಾಗಿ ಕೋರಿದ್ದಾರೆ.
Advertisement
ನಾಡಿನ ಸಮಸ್ತ ಜನತೆಗೆ ದೀಪಾವಳಿ ಹಬ್ಬದ ಶುಭಾಶಯಗಳು ಎಂದು ಬರೆದುಕೊಂಡು ಅವರ ಮುದ್ದು ಕಂದನ ಪುಟ್ಟದಾದ ಕೈ ಫೋಟೋವನ್ನು ಹಂಚಿಕೊಂಡಿದ್ದಾರೆ. ನಿಖಿಲ್, ಪತ್ನಿ, ಮಗ ಈ ಮೂವರು ಕೈ ಇರುವ ಫೋಟೋ ಇದಾಗಿದೆ. ಅಭಿಮಾನಿಗಳು ನಿಖಿಲ್ ಕುಮಾರಸ್ವಾಮಿ ಪ್ಯಾಮಿಲಿಗೆ ಹಬ್ಬದ ಶುಭಾಶಯವನ್ನು ಕಾಮೆಂಟ್ ಮಾಡಿ ಹೇಳಿದ್ದಾರೆ. ಇದನ್ನೂ ಓದಿ: ಗೌಡ್ರ ಕುಟುಂಬದಲ್ಲಿ ಸಂಭ್ರಮ – ನಿಖಿಲ್, ರೇವತಿ ದಂಪತಿಗೆ ಗಂಡು ಮಗು
Advertisement
Advertisement
ಈ ಹಿಂದೆ ನಿಖಿಲ್ ಕುಮಾರಸ್ವಾಮಿ ತಂದೆಯಾಗಿರುವ ಸಂತೋಷನ್ನು ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡಿದ್ದಾರೆ. ನಮ್ಮ ಜೀವನದ ಈ ವಿಶೇಷ ಕ್ಷಣವನ್ನು ಇಡೀ ಜಗತ್ತಿಗೆ ಹಂಚಿಕೊಳ್ಳಲು ಸಂತೋಷವಾಗಿದೆ. LOVE YOU MY SON ಎಂದು ಬರೆದುಕೊಂಡು ಮಗುವನ್ನು ಎತ್ತಿಕೊಂಡಿರುವ ಮುದ್ದಾದ ಫೋಟೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಸಂತೋಷವನ್ನು ವ್ಯಕ್ತಪಡಿಸಿದ್ದಾರೆ. ಸಂತೋಷ ವಿಚಾರವನ್ನು ಕೇಳುತ್ತಿದ್ದಂತೆ ಅಭಿಮಾನಿಗಳು ಕಾಮೆಂಟ್ ಮಾಡಿ ಶುಭ ಕೋರಿದ್ದರು. ಇದನ್ನೂ ಓದಿ: ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆ ಸಾಧ್ಯತೆ
Advertisement
View this post on Instagram
2020ರ ಏಪ್ರಿಲ್ 17ರಂದು ಲಾಕ್ಡೌನ್ ಸಮಯದಲ್ಲಿ ನಿಖಿಲ್ ಹಾಗೂ ರೇವತಿ ರಾಮನಗರ ತಾಲೂಕಿನ ಕೇತಗಾನಹಳ್ಳಿಯಲ್ಲಿರುವ ಫಾರ್ಮ್ ಹೌಸ್ನಲ್ಲಿ ಸರಳವಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಕೆಲವು ತಿಂಗಳ ಹಿಂದಷ್ಟೇ ಮಾಜಿ ಸಿಎಂ. ಹೆಚ್.ಡಿ ಕುಮಾರಸ್ವಾಮಿಯವರು ತಾವು ತಾತಾ ಆಗುತ್ತಿರುವ ಖುಷಿ ವಿಚಾರವನ್ನು ಮಾಧ್ಯಮದ ಮುಂದೆ ಹಂಚಿಕೊಂಡಿದ್ದರು. ಮುದ್ದಿನ ಸೊಸೆ ಗಂಡು ಮಗುವಿಗೆ ಜನ್ಮ ನೀಡಿದ್ದು, ಗೌಡರ ಕುಟುಂಬದಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಹೊಸ ಅತಿಥಿ ಆಗಮನವಾಗಿರುವ ಸಂತೋಷವನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುವ ಮೂಲಕವಾಗಿ ತಿಳಿಸಿದ್ದರು. ಇದೀಗ ಮಗನ ಜೊತೆಗೆ ದೀಪಾವಳಿ ಹಬ್ಬವನ್ನು ಆಚರಿಸುತ್ತಿರುವ ಸಂತೋಷವನ್ನು ಹಂಚಿಕೊಂಡಿದ್ದಾರೆ.