ರಾಮನಗರ: ಕಲಾವಿದರ ಕೋಟಾದಲ್ಲಿ ಎಂಎಲ್ಸಿ ಆಗಿರುವ ಸಿ.ಪಿ.ಯೋಗೇಶ್ವರ್ (CP Yogeshwar) ಅವರಿಗೆ 50 ಕೋಟಿ ಅನುದಾನ ಹೇಗೆ ಕೊಡುತ್ತಾರೆ ಎಂದು ಜೆಡಿಎಸ್ ಯುವಮೋರ್ಚಾ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಪ್ರಶ್ನಿಸಿದ್ದಾರೆ.
ಚನ್ನಪಟ್ಟಣ (Channapatna) ಘಟನೆ ಕುರಿತು ಪ್ರತಿಕ್ರಿಯಿಸಿರುವ ನಿಖಿಲ್, ನಮ್ಮ ಕಾರ್ಯಕರ್ತರ ವಿರುದ್ಧ FIR ಹಾಕಿದ್ದಾರೆ, ಇದು ಸರಿಯಲ್ಲ. ಯೋಗೇಶ್ವರ್ ಅವರ ಕಾರ್ಯಕರ್ತರ ವಿರುದ್ಧವೂ FIR ಹಾಕಲಿ. ನಮ್ಮ ಕಾರ್ಯಕರ್ತರು ಕಲ್ಲು ಹೊಡೆದಿದ್ದಾರೆ ಎನ್ನುವುದಕ್ಕೆ ಯಾವ ಸಾಕ್ಷಿ ಇದೆ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸಿಪಿವೈ ಕಾರಿನ ಮೇಲೆ ಕಲ್ಲು, ಮೊಟ್ಟೆ ಎಸೆತ ಪ್ರಕರಣ- 14 ಜನರ ಮೇಲೆ FIR ದಾಖಲು
Advertisement
Advertisement
ಘಟನೆಗೆ ಮುಖ್ಯವಾಗಿ ರಾಮನಗರ ಎಸ್ಪಿ ಕಾರಣ. ನಿನ್ನೆಯ ಕಾರ್ಯಕ್ರಮಕ್ಕೆ ಜಿಲ್ಲಾ ಮಂತ್ರಿ ಅಶ್ವಥ್ ನಾರಾಯಣ ಅವರು ಬಂದಿಲ್ಲ. ಹಾಗಾಗಿ ಅವರು ಗೌರವ ಉಳಿಸಿಕೊಂಡಿದ್ದಾರೆ. ಸ್ಥಳೀಯ ಶಾಸಕರನ್ನ ಕಡೆಗಣಿಸಿ ಗುದ್ದಲಿಪೂಜೆ ಮಾಡೋದು ಎಷ್ಟು ಸರಿ ಎಂದು ಕಿಡಿಕಾರಿದ್ದಾರೆ.
Advertisement
ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಕಾರಿನ ಮೇಲೆ ಕಲ್ಲು, ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿ 14 ಜನರ ಮೇಲೆ ಚನ್ನಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ನಾನು ಬ್ಲ್ಯಾಕ್ ಇದ್ದೇನೆ, ಆದ್ರೆ ಬ್ಲ್ಯಾಕ್ ಮೇಲರ್ ಅಲ್ಲ: ಹೆಚ್‌ಡಿಕೆ ಪಂಚ್
Advertisement
ಘಟನೆಯೇನು?: ರಾಜ್ಯ ಸರ್ಕಾರ ಗ್ರಾಮೀಣಾಭಿವೃದ್ಧಿಗೆ ಸಿಎಂ 50 ಕೋಟಿ ವಿಶೇಷ ಅನುದಾನ ಬಿಡುಗಡೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಉಭಯ ನಾಯಕರು ವಿಶೇಷ ಅನುದಾನಕ್ಕಾಗಿ ಸಿಎಂಗೆ ಮನವಿ ಮಾಡಿದ್ದರು. ಇದಕ್ಕೆ ಸಂಬಂಧಿಸಿ ಇಂದು ರಸ್ತೆ ಅಭಿವೃದ್ಧಿ ಕಾಮಗಾರಿ ಭೂಮಿ ಪೂಜೆ ಕಾರ್ಯಕ್ರಮ ನಡೆದಿದೆ. ಆದರೆ ಆಹ್ವಾನ ಪತ್ರಿಕೆಯಲ್ಲಿ ಸಿ.ಪಿ. ಯೋಗೇಶ್ವರ್ ಕೋರಿಕೆ ಮೇರೆಗೆ ಬಿಡುಗಡೆಯಾಗಿರುವ ವಿಶೇಷ ಅನುದಾನ ಎಂದು ಮುದ್ರಣವಾಗಿತ್ತು.
ಈ ಹಿನ್ನೆಲೆಯಲ್ಲಿ ಸಿಪಿ.ಯೋಗೇಶ್ವರ್ ನಡೆಗೆ ಜೆಡಿಎಸ್ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಜೆಡಿಎಸ್ (JDS) ಕಾರ್ಯಕರ್ತರು ಪ್ರತಿಭಟನೆಗೆ ಕರೆ ನೀಡಿದ್ದರು. ಅಷ್ಟೇ ಅಲ್ಲದೇ ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಕಾರಿಗೆ ಜೆಡಿಎಸ್ (JDS) ಕಾರ್ಯಕರ್ತರಿಂದು ಮೊಟ್ಟೆ, ಕಲ್ಲು ಎಸೆದು ಆಕ್ರೋಶ ಹೊರಹಾಕಿದ್ದರು.