– ರೈತರ ಒಂದಿಂಚೂ ಭೂಮಿಯನ್ನ ಕಸಿಯಲು ಬಿಡಲ್ಲ
ರಾಮನಗರ: ಸರ್ಕಾರ ಎಷ್ಟೇ ದಬ್ಬಾಳಿಕೆ ಮಾಡಿದರೂ ರೈತರಿಂದ ಒಂದಿಂಚು ಭೂಮಿಯನ್ನ ಕಸಿದುಕೊಳ್ಳಲು ನಾವು ಬಿಡುವುದಿಲ್ಲ. ರೈತರ ಮುಂದೆ ತೊಡೆ ತಟ್ಟುವ ಉಪಮುಖ್ಯಮಂತ್ರಿಗಳೇ ನಿಮ್ಮ ತೊಡೆ ಮುರಿಯುವ ಕಾಲ ದೂರ ಇಲ್ಲ ಎಂದು ಡಿಸಿಎಂ ಡಿಕೆಶಿ (DK Shivakumar) ವಿರುದ್ಧ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ವಾಗ್ದಾಳಿ ನಡೆಸಿದ್ದಾರೆ.

ಬಿಡದಿಯಲ್ಲಿ ಟೌನ್ ಶಿಪ್ (Bidadi Township) ಯೋಜನೆ ವಿರೋಧಿಸಿ ರೈತರಿಗೆ ಬೆಂಬಲ ಸೂಚಿಸಿ ಬಿಡದಿಯ ಭೈರಮಂಗಲ ಗ್ರಾಮದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗಿಯಾದ ನಿಖಿಲ್ ಕುಮಾರಸ್ವಾಮಿ, ರೈತರನ್ನ ಉದ್ದೇಶಿಸಿ ಮಾತನಾಡಿದರು. ಸರ್ಕಾರ ಟೌನ್ ಶಿಪ್ ಯೋಜನೆಯನ್ನು ಹಿಂಪಡೆಯದಿದ್ದರೇ ಭೈರಮಂಗಲ ಗ್ರಾಮದಿಂದ ಪಾದಯಾತ್ರೆ ಮೂಲಕ ವಿಧಾನಸೌಧಕ್ಕೆ ಹಾಗೂ ಮುಖ್ಯಮಂತ್ರಿಗಳ ನಿವಾಸ ಕೃಷ್ಣ ಕಛೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು. 80%ರಷ್ಟು ರೈತರು ಭೂಮಿಯನ್ನು ನೀಡುವುದಿಲ್ಲ. ರೈತರ ಮೇಲೆ ದಿನನಿತ್ಯ ಅಧಿಕಾರಿಗಳ ಮೂಲಕ ದಬ್ಬಾಳಿಕೆ, ದೌರ್ಜನ್ಯ ಮಾಡುತ್ತಿರುವುದು ಯಾವ ಉದ್ದೇಶಕ್ಕೆ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ಡ್ರಗ್ಸ್ ಗ್ಯಾಂಗ್‌ನಿಂದ ಅರ್ಜೆಂಟೀನಾದ 3 ಯುವತಿಯರ ಬರ್ಬರ ಹತ್ಯೆ
ರಾಜ್ಯದ ಉಪ ಮುಖ್ಯಮಂತ್ರಿಗಳು ರೈತರ ವಿರುದ್ಧ ತೊಡೆ ತಟ್ಟಿದ್ದಾರೆ. ಅವರಿಗೆ ರೈತರ ತಾಕತ್ತಿನ ಬಗ್ಗೆ ಅರಿವಿಲ್ಲ. ರೈತರಿಗೆ ಅಧಿಕಾರ ಕೊಡುವುದೂ ಗೊತ್ತು, ತೊಡೆ ಮುರಿಯುವುದೂ ಗೊತ್ತು. ರೈತರಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಈ ಯೋಜನೆಯನ್ನ ಕೈ ಬಿಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ. ಕೊನೆಯ ಹಂತದವರೆಗೂ ರೈತರ ಧ್ವನಿಯಾಗಿ ನಿಲ್ಲುತ್ತೇವೆ. ಜೆಡಿಎಸ್ ರೈತರ ಪಕ್ಷ. ಯಾವುದೇ ಕಾರಣಕ್ಕೂ ರೈತರಿಗೆ ಅನ್ಯಾಯವಾಗಲು ನಾವು ಬಿಡುವುದಿಲ್ಲ. ಈ ಯೋಜನೆಯ ಸಾಧಕ- ಬಾಧಕಗಳ ಬಗ್ಗೆ ವಿಚಾರ ಮಾಡದೇ ರೈತರ ಮೇಲೆ ದಬ್ಬಾಳಿಕೆ ಮಾಡಿ ಭೂಮಿ ಕಸಿದುಕೊಳ್ಳುತ್ತಿರುವುದು ಯಾವ ಉದ್ದೇಶಕ್ಕಾಗಿ? ರಿಯಲ್ ಎಸ್ಟೇಟ್ ಮಾಫಿಯಾ ನಡೆಸುವುದಕ್ಕಾ? ರೈತರ ಜಮೀನು ಮಾರಾಟ ಮಾಡದಂತೆ ಆದೇಶ ಮಾಡಿದ್ದೀರಾ? ಅವರ ಮಕ್ಕಳ ಜೀವನಕ್ಕೆ ಏನು ಮಾಡಬೇಕು. ರೈತ ಬೀದಿಗೆ ಬರ್ತಾನೆ ಅದಕ್ಕೆ ಸಾಮಾಜಿಕ ಸಮೀಕ್ಷೆ ಮಾಡಿದ್ದೀರಾ? ಜಿಲ್ಲೆಯಲ್ಲಿ ನಾಲ್ಕು ಕಾಂಗ್ರೆಸ್ ಶಾಸಕರು ಇದ್ದಾರೆ. 10 ಹಳ್ಳಿಗಳ ರೈತರ ಜೊತೆ ಮಾತನಾಡಿದ್ದೀರಾ ಎಂದು ಗುಡುಗಿದರು. ಇದನ್ನೂ ಓದಿ: ರಾಯಚೂರು | ಜಾತಿಗಣತಿ ಸಮೀಕ್ಷಾ ಕಾರ್ಯಕ್ಕೆ ನಿರ್ಲಕ್ಷ್ಯ ತೋರಿದ ಅಧಿಕಾರಿ ಅಮಾನತು
 


 
		 
		 
		 
		 
		
 
		 
		 
		 
		